Homeಮುಖಪುಟಹರಿಯಾಣ ಸರ್ಕಾರದ 4 ಕೋಟಿ ರೂ. ನಗದು ಪುರಸ್ಕಾರ ಆಯ್ಕೆ ಮಾಡಿಕೊಂಡ ವಿನೇಶ್ ಫೋಗಟ್‌

ಹರಿಯಾಣ ಸರ್ಕಾರದ 4 ಕೋಟಿ ರೂ. ನಗದು ಪುರಸ್ಕಾರ ಆಯ್ಕೆ ಮಾಡಿಕೊಂಡ ವಿನೇಶ್ ಫೋಗಟ್‌

- Advertisement -
- Advertisement -

ತೂಕದ ಕಾರಣದಿಂದಾಗಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ವಂಚಿತರಾದ ಕುಸ್ತಿಪಟು ವಿನೇಶ್ ಫೋಗಟ್‌ ಅವರು ಹರಿಯಾಣ ಸರ್ಕಾರವು ಬೆಳ್ಳಿ ಪದಕಕ್ಕೆ ಸರಿಸಮಾನವಾಗಿ ನೀಡಲು ಮುಂದಾದ ಪುರಸ್ಕಾರಗಳಲ್ಲಿ 4 ಕೋಟಿ ರೂಪಾಯಿ ನಗದು ಬಹುಮಾನವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಪ್ಯಾರಿಸ್‌ ಒಲಿಂಪಿಕ್ಸ್‌-2024ರ 50 ಕೆಜಿ ವಿಭಾಗದ ಕುಸ್ತಿಯಲ್ಲಿ ಸ್ಪರ್ಧಿಸಿದ್ದ ವಿನೇಶ್ ಫೋಗಟ್‌ ಫೈನಲ್ ಪಂದ್ಯಕ್ಕೆ ಗಂಟೆಗಳು ಬಾಕಿ ಇರುವಾಗ ತೂಕ ಹೆಚ್ಚಾದ ಕಾರಣ ಸ್ಪರ್ಧೆಯಿಂದಲೇ ಹೊರಬಿದ್ದಿದ್ದರು. ಇದು ಇಡೀ ದೇಶವಾಸಿಗಳ ಬೇಸರಕ್ಕೆ ಕಾರಣವಾಗಿತ್ತು.

ಬಳಿಕ ಹರಿಯಾಣ ವಿಧಾನಸಭೆ ಚುನಾವಣೆಗೆ ಜುಲಾನ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿನೇಶ್ ಫೋಗಟ್, ಚುನಾವಣೆಯಲ್ಲಿ ಗೆದ್ದು ಪ್ರಸ್ತುತ ಶಾಸಕಿಯಾಗಿದ್ದಾರೆ.

ಹರಿಯಾಣ ಸರ್ಕಾರ ಬೆಳ್ಳಿ ಪದಕಕ್ಕೆ ಸರಿಸಮಾನವಾಗಿ ತನ್ನ ಕ್ರೀಡಾ ನೀತಿಯಡಿಯಲ್ಲಿ ವಿನೇಶ್ ಫೋಗಟ್‌ಗೆ ಮೂರು ಆಯ್ಕೆಗಳನ್ನು ನೀಡಿತ್ತು. ರೂ. 4 ಕೋಟಿ ನಗದು ಬಹುಮಾನ, ಗ್ರೂಪ್ ‘ಎ’ ಅಡಿಯಲ್ಲಿ ಅತ್ಯುತ್ತಮ ಕ್ರೀಡಾಪಟು (ಒಎಸ್‌ಪಿ) ಹುದ್ದೆ ಮತ್ತು ಹರಿಯಾಣ ಶೆಹ್ರಿ ವಿಕಾಸ್ ಪ್ರಾಧಿಕಾರ್ (ಹೆಚ್‌ಎಸ್‌ವಿಪಿ) ಅಡಿ ನಿವೇಶನ ಇವುಗಳಲ್ಲಿ ಒಂದನ್ನು ಆಯ್ಕೆ ಮಾಡುವಂತೆ ಹೇಳಿತ್ತು.

ವಿನೇಶ್ ಫೋಗಟ್‌ 4 ಕೋಟಿ ರೂಪಾಯಿ ನಗದು ಪುರಸ್ಕಾರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ತನ್ನ ನಿರ್ಧಾರವನ್ನು ಅವರು ಪತ್ರದ ಮೂಲಕ ರಾಜ್ಯ ಕ್ರೀಡಾ ಇಲಾಖೆಗೆ ತಿಳಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಕಳೆದ ಮಾರ್ಚ್‌ನಲ್ಲಿ ಹರಿಯಾಣ ವಿಧಾನಸಭೆಯ ಬಜೆಟ್‌ ಅಧಿವೇಶನದಲ್ಲಿ ಮಾತನಾಡಿದ್ದ ವಿನೇಶ್ ಫೋಗಟ್‌, ತನ್ನನ್ನು ಪದಕ ವಿಜೇತರಂತೆ ಗೌರವಿಸುವುದಾಗಿ ಹೇಳಿದ್ದ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮಾತನ್ನು ನೆನಪಿದ್ದರು.

“ಇದು ಹಣದ ವಿಚಾರವಲ್ಲ, ಗೌರವದ ವಿಚಾರ. ರಾಜ್ಯದ ಜನರು ನನಗೆ ನಗದು ಪುರಸ್ಕಾರ ಸಿಗಬೇಕು ಎಂಬುವುದಾಗಿ ಹೇಳುತ್ತಿದ್ದಾರೆ” ಎಂದು ವಿನೇಶ್ ಹೇಳಿದ್ದರು.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದ ಸಿಎಂ ಸೈನಿ, “ವಿನೇಶ್ ಫೋಗಟ್ ನಮ್ಮ ಹೆಮ್ಮೆ. ಆಕೆಯ ಗೌರವ ಕಡಿಮೆಯಾಗಲು ಬಿಡುವುದಿಲ್ಲ” ಎಂದಿದ್ದರು.

ಏಪ್ರಿಲ್ 16 ರಂದು ಮತಾಂತರ ವಿರೋಧಿ ಕಾಯ್ದೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...