HomeಮುಖಪುಟVinesh Phogat | ಹರಿಯಾಣ ಫಲಿತಾಂಶ | ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಪೋಗಟ್ ಜಯಭೇರಿ

Vinesh Phogat | ಹರಿಯಾಣ ಫಲಿತಾಂಶ | ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಪೋಗಟ್ ಜಯಭೇರಿ

- Advertisement -
- Advertisement -

ಖ್ಯಾತ ಕುಸ್ತಿಪಟು, ಹರಿಯಾಣ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಪೋಗಟ್ (Vinesh Phogat) ಅವರು ಜುಲಾನ ವಿಧಾನಸಭಾ ಕ್ಷೇತ್ರದಲ್ಲಿ ಜಯಶಾಲಿಯಾಗಿದ್ದಾರೆ. ತಮ್ಮ ನೇರ ಪ್ರತಿಸ್ಪರ್ಧಿ ಜೆಜೆಪಿಯ ಅಮರ್‌ಜಿತ್ ಧಂಡಾ ಅವರ ವಿರುದ್ಧ ವಿನೇಶ್‌ ಅವರು ಸುಮಾರು 5 ಸಾವಿರಕ್ಕೂ ಹೆಚ್ಚಿನ ಮತಗಳಿಂದ ಅವರು ಜಯಭೇರಿ ಭಾರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಭಾರತೀಯ ಮಹಿಳಾ ಕುಸ್ತಿಪಟುಗಳ ವಿರುದ್ಧ ಲೈಂಗಿಕ ದೌರ್ಜನ್ಯ ನಡೆದಿದ್ದ ಬಿಜೆಪಿಯ ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆಯ ಮುಂಚೂಣಿಯಲ್ಲಿದ್ದ ವಿನೇಶ್ ಅವರು ಕಳೆದ ಒಲಿಂಪಿಕ್ಸ್ ನಂತರ ಕಾಂಗ್ರೆಸ್ ಸೇರಿದ್ದರು. 2019 ರ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ, JJP ಯ ಅಮರಜೀತ್ ಧಂಡಾ ಈ ಕ್ಷೇತ್ರದಲ್ಲಿ ಬಿಜೆಪಿಯ ಪರ್ಮಿಂದರ್ ಸಿಂಗ್ ಧುಲ್ ಅವರನ್ನು 24,193 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಈ ಕ್ಷೇತ್ರವನ್ನು ವಿನೇಶ್ ಅವರು ವಶಕ್ಕೆ ಪಡೆದುಕೊಂಡಿದ್ದಾರೆ.Vinesh Phogat

90 ಕ್ಷೇತ್ರಗಳಿರುವ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅಘಾತವುಂಟಾಗಿದ್ದು, ಆಡಳಿತರೂಢ ಬಿಜೆಪಿ ಸ್ಪಷ್ಟ ಬಹುಮತದತ್ತ ಮುನ್ನಡೆ ಕಾಯ್ದುಕೊಂಡಿದೆ. ರಾಜ್ಯದಲ್ಲಿ ಅಕ್ಟೋಬರ್ 5ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು.Haryana Assembly Elections

ಹರಿಯಾಣದಲ್ಲಿ ಈ ವರೆಗಿನ ಟ್ರೆಂಡ್‌ನಂತೆ ಬಿಜೆಪಿ 51 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ 34 ಕ್ಷೇತ್ರದಗಳಲ್ಲಿ ಮುನ್ನಡೆಯಲ್ಲಿದೆ. ಅಲ್ಲದೆ, ಪಕ್ಷೇತರರು 3 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದರೆ, ಐಎನ್‌ಎಲ್‌ಡಿ ಮತ್ತು ಬಿಎಸ್‌ಪಿ ಕ್ರಮವಾಗಿ ಒಂದೊಂದು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಬಿಜೆಪಿ              51
ಕಾಂಗ್ರೆಸ್         34
ಪಕ್ಷೇತರ          03
ಐಎನ್‌ಎಲ್‌ಡಿ 01
ಬಿಎಸ್‌ಪಿ         01

ಇದನ್ನೂಓದಿ: FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

ರಾಜ್ಯದ 90 ವಿಧಾನಸಭಾ ಕ್ಷೇತ್ರಗಳಲ್ಲಿ 17 ಕ್ಷೇತ್ರಗಳು ಪರಿಶಿಷ್ಟ ಜಾತಿ ಸಮುದಾಯಕ್ಕೆ ಮೀಸಲಾಗಿದ್ದು, ಪ್ರಸ್ತುತ ವಿಧಾನಸಭೆಯ ಅಧಿಕಾರಾವಧಿಯು ನವೆಂಬರ್ 3, 2024 ರಂದು ಕೊನೆಗೊಳ್ಳುತ್ತದೆ.Haryana Assembly Elections

ರಾಜ್ಯದಲ್ಲಿ ಬಿಜೆಪಿ 2014 ಮತ್ತು 2019 ರಲ್ಲಿ ಸತತ ಚುನಾವಣೆಗಳನ್ನು ಗೆದ್ದು, ಎರಡೂ ಸಂದರ್ಭಗಳಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ರಾಜ್ಯ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಒಟ್ಟು 2.04 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದರು.

ಪ್ರಮುಖ ಚುನಾವಣಾ ವಿಷಯಗಳು ಅಗ್ನಿಪಥ್ ಯೋಜನೆ, ಎಂಎಸ್‌ಪಿಗೆ ಕಾನೂನು ಖಾತರಿಗಾಗಿ ಒತ್ತಾಯಿಸಿ ರೈತರ ಪ್ರತಿಭಟನೆ ಮತ್ತು ರಾಜ್ಯದ ಕುಸ್ತಿಪಟುಗಳಿಂದ ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಬಿಜೆಪಿ ವಿರುದ್ಧ ಹೊರಿಸಲಾಗಿತ್ತು. ಆದರೆ ಇವೆಲ್ಲವನ್ನು ರಾಜ್ಯದ ಜನತೆ ಪರಿಗಣಿಸದೆ, ಜಾತಿ ಸಂಯೋಜನೆಯೆ ಚುನಾವಣೆಯ ಪ್ರಮುಖ ವಿಷಯ ಎಂಬುವುದು ಫಲಿತಾಂಶದಲ್ಲಿ ತಿಳಿದುಬಂದಿದೆ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆತ ಗಲ್ಲಿಗೇರುವವರೆಗೆ ಹೋರಾಟ ಮುಂದುವರಿಸುತ್ತೇನೆ’ : ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತಿಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸ್ವಾಗತಿಸಿದ್ದು, ಸೆಂಗಾರ್‌ ಗಲ್ಲಿಗೇರುವವರೆಗೆ ತನ್ನ ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. "ಈ...

ಅರಾವಳಿ ಬೆಟ್ಟ, ಶ್ರೇಣಿಗಳ ಮರು ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್ ತಡೆ

ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಹೊಸ ವ್ಯಾಖ್ಯಾನ ಕುರಿತು ನವೆಂಬರ್ 20ರಂದು ನಿವೃತ್ತ ಸಿಜೆಐ ಬಿ. ಆರ್ ಗವಾಯಿ ನೇತೃತ್ವದ ಪೀಠ ನೀಡಿದ ತೀರ್ಪಿನ ಅನುಷ್ಠಾನವನ್ನು ಮೂವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ನ ವಿಶೇಷ...

ತಮಿಳುನಾಡು: ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ಗಾಂಜಾ ವ್ಯಸನಿಗಳಿಂದ ಹಲ್ಲೆ; ಡಿಎಂಕೆಯನ್ನು ಟೀಕಿಸಿದ ಬಿಜೆಪಿ 

ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ವಯಸ್ಕರು ಹಲ್ಲೆ ನಡೆಸಿದ್ದು, ವಲಸೆ ಕಾರ್ಮಿಕ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಅಪ್ರಾಪ್ತ ವಯಸ್ಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಈ ಆಘಾತಕಾರಿ...

ಬಿಜೆಪಿ ಶಾಸಕ ಶರಣು ಸಲಗರ್ ಮೇಲೆ ಎಫ್ಐಆರ್: ಚುನಾವಣೆ ವೇಳೆ ₹99 ಲಕ್ಷ ಸಾಲ ಪಡೆದು ವಂಚನೆ ಆರೋಪ

ಬೀದರ್: 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ ಹಣವನ್ನು ಹಿಂದಿರುಗಿಸಲು ವಿಫಲವಾದ ಆರೋಪದ ಮೇಲೆ 99 ಲಕ್ಷ ರೂ.ಗಳ ಚೆಕ್ ಅಮಾನ್ಯವಾದ ದೂರಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ್...

ಗಾಜಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್: 80 ದಿನಗಳಲ್ಲಿ 969 ಬಾರಿ ಕದನ ವಿರಾಮ ಉಲ್ಲಂಘನೆ: 418ಜನರ ಹತ್ಯೆ

80 ದಿನಗಳ ಅವಧಿಯಲ್ಲಿ ಇಸ್ರೇಲ್ 969 ಬಾರಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದು, 418 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,141 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿರುವ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ. ಭಾನುವಾರ ಬಿಡುಗಡೆ...

BREAKING NEWS: ಉನ್ನಾವೋ ಅತ್ಯಾಚಾರ: ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು...

‘ಲವ್ ಜಿಹಾದ್’ ಆರೋಪ: ಬರೇಲಿಯಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಹಿಂಸಾಚಾರಕ್ಕೆ ತಿರುಗಿಸಿದ ಬಜರಂಗದಳ 

ಬರೇಲಿಯ ಕೆಫೆಯೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಹುಟ್ಟುಹಬ್ಬದ ಆಚರಣೆಯಾಗಿ ಆರಂಭವಾದ ಸಂಭ್ರಮ, ಶನಿವಾರ ಬಜರಂಗದಳ ಸದಸ್ಯರು ಸ್ಥಳಕ್ಕೆ ನುಗ್ಗಿ, ಅತಿಥಿಗಳ ಮೇಲೆ ಹಲ್ಲೆ ನಡೆಸಿ, ಅಲ್ಲಿದ್ದ ಇಬ್ಬರು ಮುಸ್ಲಿಂ ಹುಡುಗರನ್ನು "ಲವ್ ಜಿಹಾದ್" ಎಂದು...

ಉನ್ನಾವೋ ಅತ್ಯಾಚಾರ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಡಿ.29) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ...

ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ : ಓರ್ವ ಪ್ರಯಾಣಿಕ ಸಾವು

ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಎಲಮಂಚಿಲಿ ಬಳಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಲ್ಲಿ ಸೋಮವಾರ (ಡಿ.29) ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅನಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ...

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...