ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ ವಿಭಾಗದ ಫೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ.
Indian wrestler Vinesh Phogat announces retirement after Olympic heartbreak, says she doesn't have strength to continue
— Press Trust of India (@PTI_News) August 8, 2024
ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು “ಅಮ್ಮ ಕುಸ್ತಿ ನನ್ನ ವಿರುದ್ದ ಗೆದ್ದಿದೆ, ನಾನು ಸೋತಿದ್ಧೇನೆ. ನನ್ನನ್ನು ಕ್ಷಮಿಸಿ. ನಿಮ್ಮ ಕನಸು ಮತ್ತು ನನ್ನ ಧೈರ್ಯ ನುಚ್ಚು ನೂರಾಗಿದೆ. ಈಗ ನನಗೆ ಹೆಚ್ಚಿನ ಶಕ್ತಿ ಇಲ್ಲ. ನನ್ನನ್ನು ಕ್ಷಮಿಸಿದ್ದಕ್ಕೆ ನಿಮ್ಮೆಲ್ಲರಿಗೂ ನಾನು ಋಣಿಯಾಗಿರುತ್ತೇನೆ” ಎಂದು ಹೇಳಿದ್ದಾರೆ.
माँ कुश्ती मेरे से जीत गई मैं हार गई माफ़ करना आपका सपना मेरी हिम्मत सब टूट चुके इससे ज़्यादा ताक़त नहीं रही अब।
अलविदा कुश्ती 2001-2024 🙏
आप सबकी हमेशा ऋणी रहूँगी माफी 🙏🙏
— Vinesh Phogat (@Phogat_Vinesh) August 7, 2024
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಂಗಳವಾರ ನಡೆದ 50 ಕೆ.ಜಿ ವಿಭಾಗದ ಮಹಿಳೆಯರ ಫ್ರೀಸ್ಟೈಲ್ ಕುಸ್ತಿ ಸೆಮಿಫೈನಲ್‌ನಲ್ಲಿ ವಿನೇಶ್ ಫೋಗಟ್ ಅವರು ಕ್ಯೂಬಾದ ಯುಸೇನೆಯಲಿಸ್ ಲೋಫೆಝ್ ಅವರನ್ನು ಸೋಲಿಸಿ ಫೈನಲ್ ತಲುಪಿದ್ದರು. ಈ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದರು. ಫೈನಲ್‌ನಲ್ಲಿ ಒಂದು ವೇಳೆ ವಿನೇಶ್ ಸೋತರೂ ಬೆಳ್ಳಿ ಪದಕ ಸಿಗುವುದು ಖಚಿತ ಎಂದು ಖುಷಿಯಲ್ಲಿದ್ದ ಕೋಟ್ಯಾಂತರ ಭಾರತೀಯರಿಗೆ, ಆಕೆಯ ಹಠಾತ್ ಅನರ್ಹ ಆಘಾತ ನೀಡಿದೆ.
ವಿನೇಶ್ ಅವರು ಅಮೆರಿಕದ ಸಾರಾ ಆನ್ ಹಿಲ್ಡೆಬ್ರಾಂಡ್ ವಿರುದ್ಧದ ಅಂತಿಮ ಪಂದ್ಯದಿಂದ 100 ಗ್ರಾಂ ತೂಕ ಹೆಚ್ಚಾದ ಕಾರಣಕ್ಕೆ ಅನರ್ಹಗೊಂಡಿದ್ದಾರೆ. ಬುಧವಾರ ಬೆಳಿಗ್ಗೆ ತೂಕ ನೋಡುವಾಗ ಆಕೆ 50 ಕೆ.ಜಿಗಿಂತ 100 ಗ್ರಾಂ ಹೆಚ್ಚಿದ್ದರು ಎನ್ನಲಾಗಿದೆ. ಇದರಿಂದ ಚಿನ್ನದ ಪದಕ ಪಡೆಯುವ ವಿನೇಶ್ ಕನಸು ಭಗ್ನಗೊಂಡಿದೆ.
ಇದನ್ನೂ ಓದಿ : ‘ವಿನೇಶಾ ಫೋಗಟ್ ಅನರ್ಹತೆ ಆಘಾತಕಾರಿ, ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ..’; ಐಒಎ ಮುಖ್ಯಸ್ಥೆ ಪಿಟಿ ಉಷಾ


