Homeಕರೋನಾ ತಲ್ಲಣಯುಪಿ ಮುಸ್ಲಿಂ ಧರ್ಮಗುರು ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನ ಭಾಗಿ: ಕೋವಿಡ್ ನಿಯಮಗಳ ಉಲ್ಲಂಘನೆ

ಯುಪಿ ಮುಸ್ಲಿಂ ಧರ್ಮಗುರು ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನ ಭಾಗಿ: ಕೋವಿಡ್ ನಿಯಮಗಳ ಉಲ್ಲಂಘನೆ

- Advertisement -
- Advertisement -

ಉತ್ತರ ಪ್ರದೇಶದ ಬದೌನ್‌ನಲ್ಲಿ ಮುಸ್ಲಿಂ ಧರ್ಮಗುರುವೊಬ್ಬರ ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ ಭಾಗವಹಿಸುವ ಮೂಲಕ ಕೋವಿಡ್ ಸೂಪರ್-ಸ್ಪ್ರೆಡರ್ ಆಗಿ ಹರಡಲು ಕಾರಣರಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಧರ್ಮಗುರು ಅಬ್ದುಲ್ ಹಮೀದ್ ಮೊಹಮ್ಮದ್ ಸಲೀಮುಲ್ ಖಾದ್ರಿ ಭಾನುವಾರ ಮಧ್ಯಾಹ್ನ ನಿಧನರಾದರು. ಅವರ ಮೃತ ದೇಹವನ್ನು ಸಾರ್ವಜನಿಕರ ವೀಕ್ಷಣೆಗಾಗಿ ಅಲ್ಲಿಯ ಮಸೀದಿಯಲ್ಲಿ ಇರಿಸಲಾಗಿತ್ತು. ಕೆಲವೇ ಗಂಟೆಗಳಲ್ಲಿ ಸಾವಿರಾರು ಜನರು ರಾಜ್ಯದ ವಿವಿಧ ಭಾಗಗಳಿಂದ ಬದೌನ್‌ಗೆ ಧಾವಿಸಿ ಎಲ್ಲಾ ಕೋವಿಡ್ ಸುರಕ್ಷತಾ ನಿಯಮಗಳು ಮತ್ತು ಲಾಕ್‌ಡೌನ್ ಅನ್ನು ಉಲ್ಲಂಘಿಸಿ ಮಸೀದಿಯಲ್ಲಿ ಒಟ್ಟುಗೂಡಿದ್ದಾರೆ.

ನಂತರ ಮೃತದೇಹವನ್ನು ಮೆರವಣಿಗೆ ಮೂಲಕ ಸಾಗಿಸಿ ಅಂತ್ಯಕ್ರಿಯೆ ನಡೆಸಲಾಗಿದ್ದು, ಕೆಲವರಷ್ಟೇ ಮಾಸ್ಕ್ ಧರಿಸಿದ್ದು ಬಿಟ್ಟರೆ ಉಳಿದವರು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ವೈರಲ್ ಆಗಿರುವ ವಿಡಿಯೋಗಳಲ್ಲಿ ಯಾವುದೇ ಸಾಮಾಜಿಕ ಅಂತರ ಇಲ್ಲದಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಈ ಕುರಿತು ಎಫ್‌ಐಆರ್ ದಾಖಲಾಗಿದ್ದು ತನಿಖೆಗೆ ಆದೇಶಿಸಲಾಗಿದೆ.

ಕೋವಿಡ್ ವಿರುದ್ಧ ಹೋರಾಡಲು ಉತ್ತರ ಪ್ರದೇಶ ಸರ್ಕಾರವು ಲಾಕ್‌ಡೌನ್ ಮತ್ತು ನಿಯಮಾವಳಿಗಳನ್ನು ರೂಪಿಸಿದೆ. ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಜನರ ಸಂಖ್ಯೆಯನ್ನು 20 ಕ್ಕೆ ಸೀಮಿತಗೊಳಿಸಿದೆ. ಮಾಸ್ಕ್ ಧರಿಸದಿದ್ದರೆ ದಂಡವೂ ಕಠಿಣವಾಗಿದೆ. ಮೊದಲ ಬಾರಿ ಮಾಸ್ಕ್ ಉಲ್ಲಂಘನೆಗೆ 1,000 ರೂ ಮತ್ತು ಪುನರಾವರ್ತಿತ ಅಪರಾಧಕ್ಕೆ 10,000 ರೂ ದಂಡ ವಿಧಿಸಲಾಗಿದೆ.

“ಸಾಂಕ್ರಾಮಿಕ ಕಾಯ್ದೆಯಡಿ ಅಪರಿಚಿತ ಜನರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಸಾಕ್ಷ್ಯಗಳನ್ನು ಸಂಗ್ರಹಿಸಲು ನಾವು ವಿಡಿಯೋ ನೋಡುತ್ತಿದ್ದೇವೆ ಮತ್ತು ನಿರ್ಬಂಧಗಳನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಬದೌನ್ ಪೊಲೀಸ್ ವರಿಷ್ಠಾಧಿಕಾರಿ ಸಂಕಲ್ಪ ಶರ್ಮಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಸದ್ಯಕ್ಕೆ ಉತ್ತರ ಪ್ರದೇಶದಲ್ಲಿ ಪ್ರತಿದಿನ 20,000 ದಷ್ಟು ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ.


ಇದನ್ನೂ ಓದಿ: ಬಿಹಾರದ ಗಂಗಾ ನದಿ ತೀರದಲ್ಲಿ ತೇಲಿ ಬಂದ ಮೃತ ದೇಹಗಳು; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಡ್ಯ | ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ಮತ್ತೆ ಮೂವರ ಬಂಧನ

0
ಮಂಡ್ಯ ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಭ್ರೂಣ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ರಾಮಕೃಷ್ಣ ಅಲಿಯಾಸ್...