Homeಮುಖಪುಟಅರಣ್ಯ ಕಾನೂನು ಉಲ್ಲಂಘನೆ: ಜಗ್ಗಿ ವಾಸುದೇವ್, ಅಸ್ಸಾಂ ಸಿಎಂ ವಿರುದ್ಧ ದೂರು, ಬಂಧನಕ್ಕೆ ಆಗ್ರಹ

ಅರಣ್ಯ ಕಾನೂನು ಉಲ್ಲಂಘನೆ: ಜಗ್ಗಿ ವಾಸುದೇವ್, ಅಸ್ಸಾಂ ಸಿಎಂ ವಿರುದ್ಧ ದೂರು, ಬಂಧನಕ್ಕೆ ಆಗ್ರಹ

- Advertisement -
- Advertisement -

ಕಾಜಿರಂಗ ರಾಷ್ಟ್ರೀಯ ಉದ್ಯಾನವನ (ಕೆಎನ್‌ಪಿ) ವ್ಯಾಪ್ತಿಯಲ್ಲಿ ಮುಸ್ಸಂಜೆಯ ನಂತರ ಜೀಪ್ ಸಫಾರಿ ಮಾಡಿ ವನ್ಯಜೀವಿ ಸಂರಕ್ಷಣಾ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ಹಳ್ಳಿಗಳಲ್ಲಿ ವಾಸಿಸುವ ಜನರು ಗೋಲಾಘಾಟ್ ಜಿಲ್ಲೆಯ ಬೊಕಾಖಾಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ವಿಚಾರಣೆ ಆರಂಭಿಸಿದ್ದು, ಕೆಎನ್‌ಪಿ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ದೂರು ಬಂದಿರುವುದರಿಂದ ಉದ್ಯಾನವನದ ವಿಭಾಗೀಯ ಅರಣ್ಯಾಧಿಕಾರಿಗಳಿಂದ ವರದಿ ಕೇಳಿದ್ದೇವೆ ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಬಂಧಪಟ್ಟವರನ್ನು ಸಂಪರ್ಕಿಸಿದಾಗ ಹೆಸರು ಹೇಳಲಿಚ್ಛಿಸದ ಕೆಎನ್‌ಪಿಯ ಅಧಿಕಾರಿಯೊಬ್ಬರು, “ಈ ಹಂತದಲ್ಲಿ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಆಗುವುದಿಲ್ಲ” ಎಂದು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

“ಜನರಿಗೆ ಆರೋಪ ಮಾಡುವ ಹಕ್ಕಿದೆ, ಅದರ ಆಧಾರದ ಮೇಲೆ ತನಿಖೆ ನಡೆಸಲಾಗುವುದು. ಆದರೆ ವಿಷಯವನ್ನು ಪರಿಶೀಲಿಸುವ ಮೊದಲು ನಾವು ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ” ಎಂದಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾನೂನುಗಳ ಉಲ್ಲಂಘನೆಯ ಆರೋಪ ಬಗ್ಗೆ ಉತ್ತರಿಸಲು ಅಧಿಕಾರಿಯು ನಿರಾಕರಿಸಿದ್ದಾರೆ ಎಂದು ‘ಟೆಲಿಗ್ರಾಫ್’ ವರದಿ ಮಾಡಿದೆ.

“ಇದು ಅಧಿಕೃತ ಕಾರ್ಯಕ್ರಮವಾಗಿತ್ತು. ಕೆಲವೊಮ್ಮೆ, ಅಂತಹ ಕಾರ್ಯಕ್ರಮವು ಸ್ವಲ್ಪ ತಡವಾಗಿ ನಡೆಯುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಾವು ಇದನ್ನು ಕಾನೂನು ಉಲ್ಲಂಘನೆ ಎಂದು ಕರೆಯಲಾಗದು ಎಂದು ನಾನು ಭಾವಿಸುತ್ತೇನೆ” ಎಂದು ಅಧಿಕಾರಿ ಹೇಳಿದ್ದಾರೆ.

ಮುಸ್ಸಂಜೆಯ ನಂತರ ವಾಹನದ ಹೆಡ್‌ಲೈಟ್ ಆನ್‌ ಮಾಡಿ ಜೀಫ್‌ ಸವಾರಿ ಮಾಡಲಾಗಿದೆ. ಇದು ವನ್ಯಜೀವಿ ಸಂರಕ್ಷಣಾ ಕಾಯಿದೆ, 1972 ರ ಉಲ್ಲಂಘನೆಯಾಗಿದೆ ಎಂದು ಉದ್ಯಾನದ ಬಳಿಯ ಮೊರೊಂಗಿಯಾಲ್ ಮತ್ತು ಬಲಿಜನ್ ಆದರ್ಶ್ ಮಾದರಿ ಗ್ರಾಮಗಳ ನಿವಾಸಿಗಳಾದ ಸೋನೇಶ್ವರ ನರಹ್, ಪ್ರಬಿನ್ ಪೆಗು ಆರೋಪಿಸಿದ್ದಾರೆ.

ಜೀಪ್ ಸಫಾರಿಯಲ್ಲಿ ಪಾಲ್ಗೊಂಡಿದ್ದ ಜಗ್ಗಿ ವಾಸುದೇವ್, ಮುಖ್ಯಮಂತ್ರಿ ಶರ್ಮಾ, ರಾಜ್ಯ ಪ್ರವಾಸೋದ್ಯಮ ಸಚಿವ ಜಯಂತ ಮಲ್ಲ ಬರುವಾ ಮತ್ತು ಇತರರನ್ನು ತಕ್ಷಣವೇ ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ, ಕಾನೂನಿನ ಉಲ್ಲಂಘನೆ ಮಾಡಿರುವ ಕುರಿತು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರವಾಸಿಗರಿಗೆ ನಿಗದಿತ ಸಮಯ ಮುಗಿದ ನಂತರ, ಉದ್ಯಾನವನದೊಳಗೆ ಪ್ರವೇಶಿಸಿ ಹೆಡ್‌ಲೈಟ್‌ಗಳನ್ನು ಹಾಕಿಕೊಂಡು ಜೀಪ್ ಓಡಿಸುತ್ತಿದ್ದ ಜಗ್ಗಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದಾರೆ.

ಜಗ್ಗಿ ವಾಸುದೇವ್‌ ಕಾನೂನು ಉಲ್ಲಂಘಿಸಿದ ಇತಿಹಾಸ

ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್ ಅವರು ಈ ಹಿಂದೆಯೂ ಪರಿಸರ ಕಾನೂನು ಉಲ್ಲಂಘನೆ ಮಾಡಿದ ಆರೋಪಗಳನ್ನು ಎದುರಿಸಿದ್ದಾರೆ. ಈ ಕುರಿತು ಬಿಬಿಸಿ ಮಾಧ್ಯಮ ಪ್ರಶ್ನಿಸಿದ್ದಾಗ, ಮೈಕ್ ಕಿತ್ತು ಎಸೆದು ಸಂದರ್ಶನವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ ಘಟನೆ ಕೆಲವು ತಿಂಗಳ ಹಿಂದೆ ನಡೆದಿತ್ತು.

ಕೊಯಮತ್ತೂರು ಜಿಲ್ಲೆಯ ಬೂಲುವಾಪಟ್ಟಿ ಗ್ರಾಮದಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ಪೂರ್ವಾನುಮತಿ ಪಡೆದಿಲ್ಲ. ನಿರ್ಮಾಣ ಮುಗಿದ ಸುಮಾರು ಮೂರು ವರ್ಷಗಳ ನಂತರ ಅಗತ್ಯವಿರುವ ಅನುಮತಿಗಳನ್ನು ಕೇಳಲಾಗಿದೆ ಎಂದು 2018ರಲ್ಲಿ ಸದ್ಗುರುಗಳ ಇಶಾ ಫೌಂಡೇಶನ್ ವಿರುದ್ಧ ಕಂಟ್ರೋಲರ್ ಮತ್ತು ಆಡಿಟರ್ ಜನರಲ್‌‌ (ಸಿಎಜೆ) ಗಂಭೀರ ಆರೋಪಗಳನ್ನು ಮಾಡಿದ್ದರು.

ಗ್ರಾಮದಲ್ಲಿ 32,856 ಚದರ ಅಡಿ ವಿಸ್ತೀರ್ಣದ ವಿವಿಧ ಕಟ್ಟಡಗಳನ್ನು 1994 ರಿಂದ 2008 ರ ನಡುವೆ ಸೂಕ್ತ ಅನುಮತಿಯೊಂದಿಗೆ ನಿರ್ಮಿಸಲಾಗಿದೆ ಎಂದು ಸಿಎಜಿ ಹೇಳಿದ್ದರು. ಆದರೆ 2005 ಮತ್ತು 2008ರ ನಡುವೆ ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆಯದೆ ಕಟ್ಟಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದ್ದರು. ಈಶಾ ಸಂಸ್ಥೆಯು 2011ರಲ್ಲಿ ನಿರ್ಮಾಣಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಮತ್ತು ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯನ್ನು ಕೋರಿತ್ತು.

ಇದನ್ನೂ ಓದಿರಿ: ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

“ಕಟ್ಟಡಗಳ ನಿರ್ಮಾಣಕ್ಕೆ ಅನುಮತಿಯನ್ನು ಪಡೆದಿಲ್ಲ ಎಂಬ ಆರೋಪದ ಬಗ್ಗೆ ಸದ್ಗುರುಗಳ ಅಭಿಪ್ರಾಯವೇನು?” ಎಂದು ಬಿಬಿಸಿ ಸಂದರ್ಶನದಲ್ಲಿ ಕೇಳಲಾಗಿತ್ತು. ಇದರಿಂದ ತಾಳ್ಮೆ ಕಳೆದುಕೊಂಡ ಸದ್ಗುರು, ‘ಇದನ್ನು ಎಷ್ಟು ಬಾರಿ ಕೇಳುತ್ತೀರಿ?’ ಎಂದಿದ್ದರು.

ಮಾತು ಮುಂದುವರಿಸಲು ಹೊರಟ ಪತ್ರಕರ್ತನನ್ನು ತಡೆದು, “ನೀವು ಸುದ್ದಿ ನೋಡುತ್ತಿದ್ದೀರಾ, ಸರ್ಕಾರಿ ಇಲಾಖೆ ಹೇಳುವುದನ್ನು, ನ್ಯಾಯಾಲಯ ಹೇಳಿದ್ದನ್ನು ನೋಡಿದ್ದೀರಿ? ಅಥವಾ ನೀವು ಅರೆಬೆಂದ ವ್ಯಕ್ತಿಯ ಮಾತನ್ನು ಕೇಳುತ್ತಿದ್ದೀರಾ?” ಎಂದು ಪ್ರಶ್ನೆಗಳನ್ನು ಕೇಳಿದ್ದರು. ಜೊತೆಗೆ ಸಂದರ್ಶನವನ್ನು ಅರ್ಧಕ್ಕೆ ಮೊಟುಕುಗೊಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...