Homeಮುಖಪುಟ‘ನ್ಯಾಯಮೂರ್ತಿಗಳ ನೇಮಕದಲ್ಲಿ ನಿಯಮ ಉಲ್ಲಂಘನೆ’- ನ್ಯಾಯಾಂಗದ ವಿರುದ್ದ ತಿರುಗಿ ಬಿದ್ದ ಕೇಂದ್ರ

‘ನ್ಯಾಯಮೂರ್ತಿಗಳ ನೇಮಕದಲ್ಲಿ ನಿಯಮ ಉಲ್ಲಂಘನೆ’- ನ್ಯಾಯಾಂಗದ ವಿರುದ್ದ ತಿರುಗಿ ಬಿದ್ದ ಕೇಂದ್ರ

- Advertisement -
- Advertisement -

ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿ ವಿಳಂಬವಾಗುತ್ತಿರುವ ಬಗ್ಗೆ ಸುಪ್ರೀಂಕೋರ್ಟ್ ಇತ್ತೀಚೆಗೆ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು. ಇದಕ್ಕೆ ಮಂಗಳವಾರ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಹೈಕೋರ್ಟ್ ನ್ಯಾಯಮೂರ್ತಿಗಳ ಹುದ್ದೆಗಳು ಖಾಲಿಯಾಗುವ ಆರು ತಿಂಗಳು ಮುಂಚಿತವಾಗಿಯೇ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂಬ ವಿಧಿವಿಧಾನಗಳ ಒಡಂಬಡಿಕೆ (ಎಂಓಪಿ)ಯನ್ನು ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳು ಉಲ್ಲಂಘಿಸಿವೆ ಎಂದು ಹೇಳುವ ಮೂಲಕ ನ್ಯಾಯಾಂಗದ ವಿರುದ್ದವೆ ತಿರುಗಿ ಬಿದ್ದಿದೆ.

ಎಂಒಪಿ ಎನ್ನುವುದು, ಸಂವಿಧಾನಾತ್ಮಕ ನ್ಯಾಯಾಲಯದ ನ್ಯಾಯಾಧೀಶರ ನೇಮಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವಿನ ಲಿಖಿತ ಒಪ್ಪಂದವಾಗಿದೆ. “ಮಾರ್ಚ್ 26 ರ ಹೊತ್ತಿಗೆ ಖಾಲಿಯಿರುವ 410 ನ್ಯಾಯಾಧೀಶರ ಹುದ್ದೆಗಳಲ್ಲಿ, ಹೈಕೋರ್ಟ್ ಕೊಲಾಜಿಯಮ್ 214 ಹುದ್ದೆಗಳಿಗೆ ಶಿಫಾರಸುಗಳನ್ನು ಮಾಡಿಲ್ಲ” ಎಂದು ನ್ಯಾಯಾಂಗದ ಮೂಲಗಳನ್ನು ಉಲ್ಲೇಖಿಸಿ TOI ವರದಿ ಮಾಡಿದೆ.

ಇದನ್ನೂ ಓದಿ: ಗಂಡಾಳಿಕೆಯನ್ನು ಬಿಂಬಿಸುವ ಕೋರ್ಟುಗಳಿಗೆ ’ಸುಪ್ರೀಮ್’ ಕಡಿವಾಣ

ಮಾರ್ಚ್ 27 ರಂದು ಭಾರತದ ಮುಖ್ಯನ್ಯಾಯಮೂರ್ತಿ ಎಸ್.‌ಎ. ಬೋಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಸೂರ್ಯಕಾಂತ್ ಅವರ ನ್ಯಾಯಪೀಠವು, “ಹೈಕೋರ್ಟ್ ಕೊಲಾಜಿಯಮ್ ಶಿಫಾರಸ್ಸು ಮಾಡಿದ 45 ಮಂದಿಯ ಕಡತಗಳ ಮೇಲೆ ಕೇಂದ್ರ ಸರ್ಕಾರ ಯಾಕೆ ಕುಳಿತುಕೊಂಡಿದೆ.ಈ ಕಡತಗಳು 6-14 ತಿಂಗಳಿನಿಂದ ಬಾಕಿ ಉಳಿದಿವೆ, ಇದರ ಬಗ್ಗೆ ಎಪ್ರಿಲ್ 8 ರಂದು ವಿವರಿಸಬೇಕು” ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೊಪಾಲ್ ಅವರನ್ನು ಕೋರಿತ್ತು.

7 ರಿಂದ 19 ತಿಂಗಳವರೆಗಿನ ಅವಧಿಯವರೆಗೆ ಹೈಕೋರ್ಟ್ ನ್ಯಾಯಾಧೀಶರ ನೇಮಕಕ್ಕಾಗಿ ಸುಪ್ರೀಂಕೋರ್ಟ್‌ ಕೊಲಾಜಿಯಮ್‌‌ ಶಿಫಾರಸ್ಸು ಮಾಡಿದ್ದ 10 ಕ್ಕೂ ಹೆಚ್ಚು ಮಂದಿಯ ಕಡತಗಳ ಕುರಿತು ಇನ್ನುಕೇಂದ್ರ ಸರ್ಕಾರ ನಿರ್ಧಾರ ಮಾಡಿಲ್ಲ ಎಂದು ಹೇಳಿ ನ್ಯಾಯಮೂರ್ತಿ ಕೌಲ್ ಗಮನಸೆಳೆದಿದ್ದರು. ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಐದು ವಕೀಲರನ್ನು ನೇಮಕ ಮಾಡಲು ಸುಪ್ರೀಂಕೋರ್ಟ್‌ ಕೊಲಾಜಿಯಮ್ ಶಿಫಾರಸನ್ನು 2019 ರ ಜುಲೈ 25 ರಂದು ಸರ್ಕಾರಕ್ಕೆ ಕಳುಹಿಸಲಾಗಿದೆ ಮತ್ತು ಇವುಗಳನ್ನು ಸರ್ಕಾರ ಪರಿಗಣಿಸಿಲ್ಲ ಎಂದು ಅವರು ಹೇಳಿದ್ದಾರೆ. ಅಂತೆಯೇ, ಜಮ್ಮುಕಾಶ್ಮೀರ ಹೈಕೋರ್ಟ್‌ ನ್ಯಾಯಾಧೀಶರ ನೇಮಕಾತಿಗಾಗಿ ವಕೀಲರ ಹೆಸರನ್ನು 17 ತಿಂಗಳುಗಳಿಂದ ಬಾಕಿ ಉಳಿದಿದೆ ಎಂದು ಹೇಳಿದ್ದಾರೆ.

ಕಾನೂನು ಸಚಿವಾಲಯ ಇತ್ತೀಚೆಗೆ ವಿವಿಧ ಹೈಕೋರ್ಟ್ ಕೊಲಾಜಿಯಮ್‌ಗಳು ಶಿಫಾರಸು ಮಾಡಿದ 45 ಹೆಸರುಗಳನ್ನು ಸುಪ್ರೀಂಕೊರ್ಟ್‌ ಕೊಲಾಜಿಯಮ್‌ಗೆ ಪರಿಶೀಲನೆಗಾಗಿ ಕಳುಹಿಸಿದೆ. ಏಪ್ರಿಲ್ 8 ರಂದು ನ್ಯಾಯಾಧೀಶರ ನೇಮಕ ವಿಳಂಬಕ್ಕೆ ಸಂಬಂಧಿಸಿದ ಪ್ರಕರಣವನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಪೀಠ ನಿರ್ಧರಿಸಿದೆ.


ಇದನ್ನೂ ಓದಿ: ಬಹುಜನ ಭಾರತ: ಬಂಧನದಲ್ಲಿ ಕಳೆದುಹೋಗುವ ಮುಸಲ್ಮಾನ ಬದುಕುಗಳು- ಪರಿಹಾರ ಇಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...