Homeಕರ್ನಾಟಕರಾಯಚೂರು ನಗರಸಭೆ: ಸರ್ಕಾರದ ಅನುದಾನ ಬಳಕೆ ಮಾರ್ಗಸೂಚಿ ಉಲ್ಲಂಘನೆ - ಭ್ರಷ್ಟಾಚಾರದ ವಾಸನೆ!

ರಾಯಚೂರು ನಗರಸಭೆ: ಸರ್ಕಾರದ ಅನುದಾನ ಬಳಕೆ ಮಾರ್ಗಸೂಚಿ ಉಲ್ಲಂಘನೆ – ಭ್ರಷ್ಟಾಚಾರದ ವಾಸನೆ!

ಅನುದಾನವನ್ನು ರಸ್ತೆ ನಿರ್ಮಾಣಕ್ಕೆಂದು ಬಳಸಿದರೆ, ಗುತ್ತಿಗೆದಾರರಿಂದ ದೊಡ್ಡ ಮೊತ್ತದ ಕಮಿಷನ್ ಸಿಗುತ್ತದೆ ಎಂಬ ಕಾರಣದಿಂದ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

- Advertisement -
- Advertisement -

15ನೇ ಹಣಕಾಸು ಯೋಜನೆ ಅನುದಾನ ಬಳಕೆಗೆಂದು ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಉಲ್ಲಂಘಿಸಿ ರಾಯಚೂರು ನಗರಸಭೆಯು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದೆ. ಇದರ ಹಿಂದೆ ಭ್ರಷ್ಟಾಚಾರ ನಡೆದಿದೆಯೆಂಬ ವ್ಯಾಪಕ ಆರೋಪ ಕೇಳಿಬಂದಿದೆ.

ರಾಯಚೂರು ನಗರಸಭೆ 2020-21ನೇ ಸಾಲಿನ 15ನೇ ಹಣಕಾಸು ಯೋಜನೆ ಅನುದಾನ ಬಳಕೆಯ ಮಾರ್ಗಸೂಚಿಯನ್ನು ಉಲ್ಲಂಘಿಸಿ ಕ್ರಿಯಾ ಯೋಜನೆಯನ್ನು ತಯಾರಿಸಿದ್ದು, ನಗರದಲ್ಲಿನ ಘನತ್ಯಾಜ್ಯ ನಿರ್ವಹಣೆಗೆ ಕಡ್ಡಾಯವಾಗಿ ಮೀಸಲಿಡಬೇಕಾದ ಹಣವನ್ನು ರಸ್ತೆ ನಿರ್ಮಾಣ ಮತ್ತು ರಸ್ತೆ ಅಭಿವೃದ್ಧಿಗೆ ಬಳುಸುತ್ತಿದೆ ಎಂದು ಹೋರಾಟಗಾರರಾದ ರಝಾಕ್ ಉಸ್ತಾದ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

 

“ರಾಯಚೂರು ನಗರಸಭೆ 15ನೇ ಹಣಕಾಸು ಯೋಜನೆಯ ಅನುದಾನ ಬಳಕೆಯ ಮಾರ್ಗಸೂಚಿಯನ್ನು ಉಲ್ಲಂಘಿಸಿ ಕ್ರಿಯಾ ಯೋಜನೆಯನ್ನು ರೂಪಿಸಿದ್ದು, ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ನಗರಸಭೆಯ ಆಡಳಿತಾಧಿಕಾರಿಗಳು ಈಗಾಗಲೇ ಅನುಮೋದನೆಯನ್ನು ನೀಡಿದ್ದಾರೆ. ಈ ಮಾರ್ಗಸೂಚಿಯನ್ವಯ, ನಿರ್ಬಂಧಿತ ಅನುದಾನದ ಶೇ 25ರಷ್ಟನ್ನು ಕಡ್ಡಾಯವಾಗಿ ಘನತಾಜ್ಯ ನಿರ್ವಹಣೆಗೆ ಬಳಸಬೇಕಾದ 395.50 ಲಕ್ಷ ಅನುದಾನವನ್ನು ರಸ್ತೆಗಳ ನಿರ್ಮಾಣಕ್ಕೆ ಬಳಸಲು ಕ್ರಿಯಾ ಯೋಜನೆ ತಯಾರು ಮಾಡಲಾಗಿದೆ. ಇದರಿಂದ ರಾಯಚೂರು ನಗರದ ಘನತ್ಯಾಜ್ಯ ನಿರ್ವಹಣೆಗೆ ಹಿನ್ನಡೆಯಾಗಿ, ಅಸ್ವಚ್ಛ ವಾತಾವರಣದಲ್ಲಿ ನಗರದ ಜನತೆ ಬದುಕುವಂತಹ ಪರಿಸ್ಥಿತಿ ಬರಬಹುದು. ಈಗಾಗಲೇ ನಗರ ಪ್ರದೇಶದ ರಸ್ತೆಗಳು, ತಗ್ಗು ಗುಂಡಿಗಳು, ಮಳೆನೀರು ಚರಂಡಿಗಳು ಘನತಾಜ್ಯಗಳಿಂದ ತುಂಬಿ ಗಬ್ಬೆದ್ದು ನಾರುತ್ತಿದ್ದರೂ ಅದನ್ನು ಸೂಕ್ತ ಸ್ಥಳಗಳಿಗೆ ವಿಲೇವಾರಿ ಮಾಡದೇ ಇರುವುದರಿಂದ ಜನತೆ ನೋವನ್ನು ಅನುಭವಿಸುತ್ತಿದ್ದಾರೆ” ಎಂದು ಅವರು ಹೇಳಿದರು.

“ಮಾರ್ಗಸೂಚಿ ಉಲ್ಲಂಘಿಸುವುದಾದರೆ ಅವುಗಳನ್ನು ಹೊರಡಿಸುವ ಅಗತ್ಯವಾದರೂ ಏನಿದೆ. ಇದರ ಬಗ್ಗೆ ನಾವು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದೆವು. ಪೌರಾಡಳಿತದ ನಿರ್ದೇಶಕರಿಗೂ ದೂರು ನೀಡಿದ್ದೆವು. ಆದರೆ ಇವರಿಬ್ಬರೂ ಸಹ ಇದನ್ನು ದೊಡ್ಡ ಸಮಸ್ಯೆ ಎಂದು ಪರಿಗಣಿಸಿದೆ ನಿರ್ಲಕ್ಷಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಎಲ್ಲಿ ನೋಡಿದರೂ ಕಸದ ರಾಶಿ ಕಾಣಿಸುತ್ತಿದೆ. ಇದನ್ನು ವಿಲೇವಾರಿ ಮಾಡಲು ಸರಿಯಾದ ವ್ಯಸ್ಥೆಯಿಲ್ಲ. ಇಂತಹ ಸಂದರ್ಭದಲ್ಲಿ ಇದು ನಗರದ ಸ್ವಚ್ಚತೆ, ಪರಿಸರ ಮತ್ತು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರಜಾಕ್‌ ಉಸ್ತಾದ್

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

“ನಗರದ ಶಾಸಕರು ಆಡಳಿತ ಪಕ್ಷದವರಾಗಿದ್ದು, ಅವರಿಗೆ ತಕ್ಕಂತೆ ಆಡಳಿತಾಂಗ ಕೆಲಸ ಮಾಡುತ್ತಿದೆ. ಮೀಸಲಿಟ್ಟಿರುವ ಹಣವನ್ನು ಘನತ್ಯಾಜ್ಯ ನಿರ್ವಹಣೆಗೆ ಬಳಸಿದರೆ ಅದರಲ್ಲಿ ರಾಜಕಾರಣಿಗಳಿಗೆ ಮತ್ತು ಅಧೀನ ಅಧಿಕಾರಿಗಳಿಗೆ ಹೆಚ್ಚಿನ ಲಾಭವೇನೂ ಸಿಗುವುದಿಲ್ಲ. ಹಾಗಾಗಿ ಈ ಹಣವನ್ನು ರಸ್ತೆ ನಿರ್ಮಾಣಕ್ಕೆಂದು ಬಳಸಿದರೆ, ಅದನ್ನು ಗುತ್ತಿಗೆ ಪಡೆಯುವವರಿಗೆ 50/50 ಕಮಿಷನ್ ಎಂದು ಒಪ್ಪಂದವಾಗುತ್ತದೆ. ಇದರಿಂದ ಕಮಿಷನ್ ಹಣ ಪಡೆಯಬಹುದು. ಹಾಗಾಗಿಯೇ ಇಂತಹ ರಾಜ್ಯದ್ರೋಹಿ ಕೆಲಸಗಳನ್ನು ಮಾಡುತ್ತಿದ್ದಾರೆ. ಕೇವಲ ರಾಯಚೂರಿನಲ್ಲಿಯೇ ಇಂತಹ ಪರಿಸ್ಥಿತಿಯಾದರೆ, ಇನ್ನು ರಾಜ್ಯದ ವಿವಿಧ ಜಿಲ್ಲೆಗಳ ಪರಿಸ್ಥಿತಿ ಏನಿದೆಯೋ? ಒಟ್ಟಿನಲ್ಲಿ ಈ ಸಮಸ್ಯೆಯನ್ನು ಈಗಲೇ ನಿವಾರಿಸದಿದ್ದರೆ ಭವಿಷ್ಯದಲ್ಲಿ ಇದರ ಕೆಟ್ಟ ಪರಿಣಾಮವನ್ನು ನಾವೆಲ್ಲರೂ ಎದುರಿಸಬೇಕಾಗುತ್ತದೆ” ಎಂದು ರಜಾಕ್ ಉಸ್ತಾದ್ ಹೇಳಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರದ ಆರೋಪ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ಬಿಜೆಪಿಯಿಂದ ಲೀಗಲ್ ನೋಟಿಸ್

 

ಭ್ರಷ್ಟ ಜನಪ್ರತಿನಿಧಿಗಳು ಮತ್ತು ಅದಕ್ಷ ಅಧಿಕಾರಿಗಳು ಶಾಮೀಲಾಗಿರುವ ಇಂತಹ ಕೃತ್ಯಗಳು ಇನ್ನೂ ಬೆಳಕಿಗೆ ಬಾರದಿರುವುದು ದುರದೃಷ್ಟಕರ. ರಾಜ್ಯ ಸರ್ಕಾರ ಈ ಕೂಡಲೇ ಇತ್ತ ಗಮನಹರಿಸಿ ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ಈ ಸಮಸ್ಯೆ ಮತ್ತು ಕಸದ ರಾಶಿ ಹೆಮ್ಮರವಾಗಿ ಬೆಳೆಯಬಹುದು.

ಒಂದು ನಗರ ಸ್ವಚ್ಚವಾಗಿದೆ ಎಂದರೆ, ಅಲ್ಲಿ ಚರಂಡಿ ವ್ಯವಸ್ಥೆ ಮತ್ತು ಘನತ್ಯಾಜ್ಯ ನಿರ್ವಹಣೆ ಉತ್ತಮವಾಗಿರಬೇಕು. ಹಾಗಾಗಿಯೇ ಸರ್ಕಾರ ಬಿಡುಗಡೆ ಮಾಡುವ ಹಣದಲ್ಲಿ ಶೇ 25ರಷ್ಟನ್ನು ಇದರ ನಿರ್ವಹಣೆಗೆ ಬಳಸಬೇಕು ಎಂದು ನಿಯಮಾವಳಿಗಳು ಹೇಳುತ್ತವೆ. ಆದರೆ, ಇಂತಹ ನಿರ್ಲಕ್ಷಿತ ಮನೋಭಾವನೆಯ ಅಧಿಕಾರಿಗಳು ಮತ್ತು ಭ್ರಷ್ಟ ಜನಪ್ರತಿನಿಧಿಗಳಿಂದ ಇದು ಪಾಲನೆಯಾಗುತ್ತಿಲ್ಲ.

ಇದನ್ನೂ ಓದಿ: ಭ್ರಷ್ಟಾಚಾರ ತನಿಖೆಗೆ ಅಡ್ಡಿ ಏಕೆ? : ಹೆಚ್.ಕೆ.ಪಾಟೀಲ್‍ರವರ ಸಂದರ್ಶನ

ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತೊಗೆಯುತ್ತೇನೆ ಎನ್ನುವವರು ಇದನ್ನು ಕಂಡರೂ ಕಾಣದಂತೆ ಕುಳಿತಿರುವುದು, ಇಂತಹ ಹೀನ ಕೆಲಸಗಳಿಗೆ ಅವರು ಸಮ್ಮತಿಯನ್ನು ಸೂಚಿಸುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ. ಇದು ಕೇವಲ ಒಂದು ಉದಾಹರಣೆಯಷ್ಟೆ. ಸರ್ಕಾರ ಬಿಡುಗಡೆ ಮಾಡುವ ಅನುದಾನವನ್ನು ದಿಕ್ಕುತಪ್ಪಿಸಿ, ಉದ್ದೇಶಿತ ಯೋಜನೆಗೆ ಬಳಸದೇ ಹೆಚ್ಚಿನ ಲಾಭ ಬರುವ ಅಥವಾ ಹೆಚ್ಚಿನ ಪಾಲು ಬರುವ ಯೋಜನೆಗಳಿಗೆ ತೊಡಗಿಸಿಕೊಂಡು ರಾಜ್ಯ ಮತ್ತು ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸಲಾಗುತ್ತಿದೆ. ವಿಪರ್ಯಾಸವೆಂದರೆ, ಇದರಲ್ಲಿ ತಳಮಟ್ಟದ ಅಧಿಕಾರಿಗಳಿಂದ ಹಿಡಿದು, ಉನ್ನತ ಅಧಿಕಾರಿಗಳು ಮತ್ತು ರಾಜಕಾರಣಿಗಳವರೆಗೆ ಪಾಲು ಹಂಚಿಕೆಯಾಗುತ್ತದೆ. ಇದು ಎಲ್ಲರಿಗೂ ಗೊತ್ತಿರುವ ನಗ್ನ ಸತ್ಯ. ಈ ಹಿನ್ನೆಲೆ ಸದರಿ ಪ್ರಕರಣದ ಕುರಿತು ಸಮರ್ಪಕ ತನಿಖೆಯಾಗಬೇಕು. ಭ್ರಷ್ಟರಿಗೆ ಶಿಕ್ಷೆಯಾಗಬೇಕೆಂಬುದು ಪ್ರಜ್ಞಾವಂತರ ಆಗ್ರಹವಾಗಿದೆ.


ಇದನ್ನೂ ಓದಿ: ಕೊರೋನಾ ಕಾಲದ ಭ್ರಷ್ಟಾಚಾರದ ತನಿಖೆಗೆ ಸ್ಪೀಕರ್ ಅಡ್ಡಿ: ದಾಖಲೆಗಳೇನು ಹೇಳುತ್ತವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...