Homeಕರೋನಾ ತಲ್ಲಣಕೊರೊನಾ ನಿಯಮ ಉಲ್ಲಂಘನೆ: 48 ಗಂಟೆಗಳಲ್ಲಿ 1.54 ಕೋಟಿ ರೂ. ದಂಡ ಸಂಗ್ರಹಿಸಿದ ದೆಹಲಿ ಸರ್ಕಾರ!

ಕೊರೊನಾ ನಿಯಮ ಉಲ್ಲಂಘನೆ: 48 ಗಂಟೆಗಳಲ್ಲಿ 1.54 ಕೋಟಿ ರೂ. ದಂಡ ಸಂಗ್ರಹಿಸಿದ ದೆಹಲಿ ಸರ್ಕಾರ!

- Advertisement -
- Advertisement -

ದೆಹಲಿ ಸರ್ಕಾರವು ಕಳೆದ ಎರಡು ದಿನಗಳಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ 7,778 ಪ್ರಕರಣಗಳಲ್ಲಿ, 1.54 ಕೋಟಿ ರೂಪಾಯಿಗಳನ್ನು ದಂಡವಾಗಿ ಸಂಗ್ರಹಿಸಿದೆ ಎಂದು ವರದಿಯಾಗಿದೆ. ಇದು ಇತ್ತೀಚಿನ ವಾರಗಳಲ್ಲಿ ಸಂಗ್ರಹವಾದ ಅತ್ಯಧಿಕ ಮೊತ್ತವಾಗಿ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪೂರ್ವ ದೆಹಲಿಯಲ್ಲಿ 1,245 ಕೊರೊನಾ ನಿಯಮ ಉಲ್ಲಂಘನೆಗಳು ದಾಖಲಾಗಿದ್ದರೆ, ಉತ್ತರದಲ್ಲಿ 1,446 ಪ್ರಕರಣಗಳು ದಾಖಲಾಗಿವೆ. ಒಟ್ಟು 7,778 ಮಂದಿಯ ವಿರುದ್ಧ ಮಾಸ್ಕ್‌ ಧರಿಸದಿರುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದಿರುವುದು ಮತ್ತು ಜನಸಂದಣಿಯ ಮೂಲಕ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾಗಿ ದಂಡ ವಸೂಲಿ ಮಾಡಲಾಗಿದೆ. ಅಲ್ಲದೆ, 163 ಎಫ್‌ಐಆರ್‌ಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಒಮೈಕ್ರಾನ್ ಆತಂಕ: ದೆಹಲಿಯಲ್ಲಿ ಕ್ರಿಸ್ಮಸ್‌ ಮತ್ತು ಹೊಸ ವರ್ಷಾಚರಣೆ ನಿಷೇಧ

ಕೊರೊನಾ ನಿಯಮಾವಳಿಗಳನ್ನು ಮೀರಿ ಸರೋಜಿನಿ ನಗರದಲ್ಲಿ ಜನರು ಸೇರಿರುವ ವೀಡಿಯೊವೊಂದು ಇತ್ತೀಚೆಗೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಸೇರಿದಂತೆ ಅಧಿಕಾರಿಗಳ ಗಮನ ಸೆಳೆದಿತ್ತು. ಈ ಹಿನ್ನೆಲಯಲ್ಲಿ ಎಫ್ಟಿನೆಂಟ್ ಗವರ್ನರ್‌ ಕಚೇರಿಯು ಹೇಳಿಕೆ ನೀಡಿದೆ.

“ಮಾಧ್ಯಮ ವರದಿಗಳು ಮತ್ತು ಆಂತರಿಕ ಮಾಹಿತಿಗಳ ಪ್ರಕಾರ ಅಲ್ಲಿನ ಮಾರುಕಟ್ಟೆಗಳು ಕಿಕ್ಕಿರಿದಿವೆ. ಎಲ್ಲಾ ಮಾರುಕಟ್ಟೆಗಳು, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ನಿಯಮಾವಳಿಗಳ ಉಲ್ಲಂಘನೆ ಆಗುತ್ತಿವೆ. ಇದರಿಂದಾಗಿ ಕೊರೊನಾ ಪ್ರಕರಣಗಳ ಸಂಖ್ಯೆ ಏರುತ್ತಿವೆ” ಎಂದು ಲೆಫ್ಟಿನೆಂಟ್‌ ಕಚೇರಿ ತಿಳಿಸಿದೆ.

ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಈ ವರ್ಷ ರಾಷ್ಟ್ರ ರಾಜಧಾನಿಯಲ್ಲಿ ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಆಚರಣೆಗಳನ್ನು ನಿಷೇಧಿಸಿದೆ. ಒಮೈಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಶುಕ್ರವಾರದಂದು ದೆಹಲಿಯಲ್ಲಿ 180 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದು ಕಳೆದ ಆರು ತಿಂಗಳಲ್ಲೇ ವರದಿಯಾದ ಅತಿ ಹೆಚ್ಚು ಪ್ರಕರಣವಾಗಿದೆ.

ಇದನ್ನೂ ಓದಿ: ಸಂಪೂರ್ಣ ಲಸಿಕೆ ಪಡೆದಿರುವ ದೆಹಲಿಗರಿಗೆ ಬೂಸ್ಟರ್ ಡೋಸ್ ನೀಡಲು ಅನುಮತಿ ಕೊಡಿ: ಕೇಂದ್ರಕ್ಕೆ ಕೇಜ್ರಿವಾಲ್ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...