Homeಕರೋನಾ ತಲ್ಲಣಕೊರೊನಾ ನಿಯಮ ಉಲ್ಲಂಘನೆ: ಒಂದು ವಾರದಲ್ಲೆ 1.77 ಲಕ್ಷ ದಂಡ ವಸೂಲಿ ಮಾಡಿದ ‘ನಮ್ಮ ಮೆಟ್ರೋ’!

ಕೊರೊನಾ ನಿಯಮ ಉಲ್ಲಂಘನೆ: ಒಂದು ವಾರದಲ್ಲೆ 1.77 ಲಕ್ಷ ದಂಡ ವಸೂಲಿ ಮಾಡಿದ ‘ನಮ್ಮ ಮೆಟ್ರೋ’!

- Advertisement -
- Advertisement -

ಕೊರೊನಾ ಎರಡನೆ ಅಲೆ ಇಳಿಕೆಯಾಗುತ್ತಿದ್ದಂತೆ ಬೆಂಗಳೂರಿನ ‘ನಮ್ಮ ಮೆಟ್ರೋ’ ದಲ್ಲಿ 100% ಸಾಮರ್ಥ್ಯದೊಂದಿಗೆ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ಆದರೆ ಕೊರೊನಾ ನಿಯಮಗಳು ಕಟ್ಟುನಿಟ್ಟಾಗಿ ಜಾರಿಯಲ್ಲಿ ಇರುವಂತೆ ನೋಡಿಕೊಳ್ಳಲಾಗುತ್ತಿದೆ.

ನಿಯಮ ಮೀರಿದವರಿಂದ ಸ್ಥಳದಲ್ಲೇ 250 ರೂ. ದಂಡವನ್ನೂ ಕಟ್ಟಿಸಿಕೊಳ್ಳಲಾಗುತ್ತಿದ್ದು, ಕಳೆದ ಒಂದು ವಾರದಿಂದ 1.77 ಲಕ್ಷ ದಂಡವನ್ನು ವಸೂಲಿ ಮಾಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಹೋರಾಟ ನಿರತ ರೈತರಿಂದ ದೆಹಲಿಯಲ್ಲಿ ‘ಕಿಸಾನ್ ಮೆಟ್ರೋ’ ಆರಂಭ!

ಸಂಪೂರ್ಣ ಲಾಕ್‌ಡೌನ್‌ ನಂತರ ಬೆಳಿಗ್ಗೆ 7 ರಿಂದ ರಾತ್ರಿ 9 ರ ವರೆಗೆ ‘ನಮ್ಮ ಮೆಟ್ರೋ’ ಸೇವೆ ಒದಗಿಸಲಾಗುತ್ತಿದೆ. ಆದರೆ ಮೆಟ್ರೋ ಒಳಗೆ ಹಾಗೂ ನಿಲ್ದಾಣಗಳಲ್ಲಿ ನಿಯಮ ಉಲ್ಲಂಘನೆ ತಡೆಯಲು ವಿಶೇಷ ತಂಡ ರಚನೆ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದನ್ನು ಮೆಟ್ರೋ ಒಳಗೆ ಮತ್ತು ನಿಲ್ದಾಣಗಳಲ್ಲಿ ಪಾಲಿಸಬೇಕಾಗುತ್ತದೆ.

ವಿಶೇಷ ತಂಡವು ಕಳೆದ ಒಂದು ವಾರದಲ್ಲಿ 1,77,250 ರೂ. ದಂಡವನ್ನು ಸಂಗ್ರಹಿಸಿದ್ದು, ದಿನಕ್ಕೆ ಸರಾಸರಿ 25 ಸಾವಿರದಷ್ಟು ಸಂಗ್ರಹಣೆ ಮಾಡುತ್ತಿದೆ.

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದ್ದಂತೆ ಮೊದಲಿಗೆ 50% ಸಾಮರ್ಥ್ಯದೊಂದಿಗೆ ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಜುಲೈ 5 ರ ನಂತರ ಸಂಪೂರ್ಣ ಸಾಮರ್ಥ್ಯದೊಂದಿಗೆ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ದಂಡ ಸಂಗ್ರಹಿಸುವ ವಿಶೇಷ ತಂಡವು ಮೊದಲ ವಾರದಲ್ಲೇ 1.77 ಲಕ್ಷ ದಂಡವನ್ನು ನಿಯಮ ಉಲ್ಲಂಘಿಸಿದ ಪ್ರಯಾಣಿಕರಿಂದ ವಸೂಲಿ ಮಾಡಿದೆ.

ಇದನ್ನೂ ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...