ಬಿಜೆಪಿ ಪರ ಸಂಘಟನೆ ಬಜರಂಗದಳದ ಕಾರ್ಯಕರ್ತ ಶಿವಮೊಗ್ಗ ಜಿಲ್ಲೆಯ ಹರ್ಷ ಕೊಲೆ ನಡೆದು ಪ್ರಾಥಮಿಕ ತನಿಖೆ ಪ್ರಗತಿಯಲ್ಲಿರುವಾಗಲೆ ಮುಸ್ಲಿಮರ ಮೇಲೆ ಕೊಲೆ ಆರೋಪ ಮಾಡಿ, ನಂತರ ಶವಮೆರವಣಿಗೆಯ ಸಮಯದಲ್ಲಿ ಗಲಭೆಗೆ ಪ್ರಚೋಧಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯ ಚೆನ್ನ ಬಸಪ್ಪ ವಿರುದ್ಧ ಖಾಸಗಿ ದೂರು ದಾಖಲಾಗಿದ್ದು, ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.
ಫೆಬ್ರವರಿ 20ರ ರಾತ್ರಿ ಸಮಯದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಎಂಬ ವ್ಯಕ್ತಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಈ ಕೊಲೆಯಲ್ಲಿ ಶಾಮೀಲಾಗಿದ್ದಾರೆ ಎಂದು ಈಗಾಗಲೆ ಪೊಲೀಸರು ಸುಮಾರು 10 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ: ಸುಧಾಕರ್ ಸದನದಲ್ಲೇ ಕ್ಷಮೆ ಕೇಳಬೇಕು: ಬಿಜೆಪಿ ಶಾಸಕ ಹರ್ಷವರ್ಧನ್ ಆಗ್ರಹ
ಆದರೆ ಸಚಿವ ಈಶ್ವರಪ್ಪ ಮತ್ತು ಚೆನ್ನ ಬಸಪ್ಪ ಅವರು ಪ್ರಾಥಮಿಕ ತನಿಖೆಗೂ ಮೊದಲೇ ಕೊಲೆಗಾರರು ಮುಸ್ಲಿಮರು ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿ, ಜನರನ್ನು ಮುಸ್ಲಿಮರ ಪ್ರಚೋದನೆ ಮಾಡಿದ್ದರು. ಈ ಪ್ರಚೋದನೆಯಿಂದಾಗಿ ಮರುದಿನ ನಡೆದ ಮೆರವಣಿಗೆಯಲ್ಲಿ ಮುಸ್ಲಿಮರ ಮನೆ, ಅಂಗಡಿ-ಮುಂಗ್ಗಟ್ಟುಗಳ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಲಾಗಿತ್ತು.
ಈ ಎಲ್ಲಾ ಗಲಭೆಗೆ ಸಚಿವ ಈಶ್ವರಪ್ಪ ಮತ್ತು ಮಹಾನಗರ ಪಾಲಿಕೆ ಸದಸ್ಯ ಚೆನ್ನ ಬಸಪ್ಪ ಅವರೇ ಕಾರಣ ಎಂದು ಶಿವಮೊಗ್ಗ ಪೀಸ್ ಆರ್ಗನೈಝೇಷನ್ ಕಾರ್ಯದರ್ಶಿ ರಿಯಾಜ್ ಅಹ್ಮದ್ ಅವರು ಪೊಲೀಸರು ದೂರು ನೀಡಿದ್ದರು. ಆದರೆ ಆರೋಪಿಗಳು ಪೊಲೀಸರ ಮೇಲೆ ರಾಜಕೀಯ ಪ್ರಭಾವ ಬಳಸಿ ಎಫ್‌ಐಆರ್ ದಾಖಲಾದಂತೆ ನೋಡಿಕೊಂಡಿದ್ದಾರೆ ಎಂದು ರಿಯಾಜ್ ಅಹ್ಮದ್ ಅವರು ನ್ಯಾಯಾಲಯಕ್ಕೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಹೀಗಾಗಿ ಆರೋಪಿಗಳಾದ ಈಶ್ವರಪ್ಪ ಮತ್ತು ಚೆನ್ನಬಸಪ್ಪ ವಿರುದ್ದ ಪ್ರಕರಣ ದಾಖಲಿಸಿ, ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡುವಂತೆ ಮತ್ತು ಆರೋಪಿಗಳನ್ನು ವಿಚಾರಣೆ ನಡೆಸುವಂತೆ ನ್ಯಾಯಾಲಯದಲ್ಲಿ ರಿಯಾಜ್ ಅಹ್ಮದ್ ಕೋರಿದ್ದಾರೆ.
ಇದನ್ನೂ ಓದಿ: ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ



ಈ ನಿಟ್ಟಿನಲ್ಲಿ ಸರಿಯಾದ , ನಿಷ್ಪಕ್ಷವಾಗಿ ತನಿಖೆಯಾಗಲಿ.