Homeಕರ್ನಾಟಕಹರ್ಷ ಹತ್ಯೆ ಬಳಿಕ ಹಿಂಸಾಚಾರ: ಸಚಿವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ನ್ಯಾಯಾಲಯದಲ್ಲಿ ಖಾಸಗಿ...

ಹರ್ಷ ಹತ್ಯೆ ಬಳಿಕ ಹಿಂಸಾಚಾರ: ಸಚಿವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ನ್ಯಾಯಾಲಯದಲ್ಲಿ ಖಾಸಗಿ ಅರ್ಜಿ

- Advertisement -
- Advertisement -

ಬಿಜೆಪಿ ಪರ ಸಂಘಟನೆ ಬಜರಂಗದಳದ ಕಾರ್ಯಕರ್ತ ಶಿವಮೊಗ್ಗ ಜಿಲ್ಲೆಯ ಹರ್ಷ ಕೊಲೆ ನಡೆದು ಪ್ರಾಥಮಿಕ ತನಿಖೆ ಪ್ರಗತಿಯಲ್ಲಿರುವಾಗಲೆ ಮುಸ್ಲಿಮರ ಮೇಲೆ ಕೊಲೆ ಆರೋಪ ಮಾಡಿ, ನಂತರ ಶವಮೆರವಣಿಗೆಯ ಸಮಯದಲ್ಲಿ ಗಲಭೆಗೆ ಪ್ರಚೋಧಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯ ಚೆನ್ನ ಬಸಪ್ಪ ವಿರುದ್ಧ ಖಾಸಗಿ ದೂರು ದಾಖಲಾಗಿದ್ದು, ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

ಫೆಬ್ರವರಿ 20ರ ರಾತ್ರಿ ಸಮಯದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಎಂಬ ವ್ಯಕ್ತಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಈ ಕೊಲೆಯಲ್ಲಿ ಶಾಮೀಲಾಗಿದ್ದಾರೆ ಎಂದು ಈಗಾಗಲೆ ಪೊಲೀಸರು ಸುಮಾರು 10 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಸುಧಾಕರ್‌‌ ಸದನದಲ್ಲೇ ಕ್ಷಮೆ ಕೇಳಬೇಕು: ಬಿಜೆಪಿ ಶಾಸಕ ಹರ್ಷವರ್ಧನ್‌ ಆಗ್ರಹ

ಆದರೆ ಸಚಿವ ಈಶ್ವರಪ್ಪ ಮತ್ತು ಚೆನ್ನ ಬಸಪ್ಪ ಅವರು ಪ್ರಾಥಮಿಕ ತನಿಖೆಗೂ ಮೊದಲೇ ಕೊಲೆಗಾರರು ಮುಸ್ಲಿಮರು ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿ, ಜನರನ್ನು ಮುಸ್ಲಿಮರ ಪ್ರಚೋದನೆ ಮಾಡಿದ್ದರು. ಈ ಪ್ರಚೋದನೆಯಿಂದಾಗಿ ಮರುದಿನ ನಡೆದ ಮೆರವಣಿಗೆಯಲ್ಲಿ ಮುಸ್ಲಿಮರ ಮನೆ, ಅಂಗಡಿ-ಮುಂಗ್ಗಟ್ಟುಗಳ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಲಾಗಿತ್ತು.

ಈ ಎಲ್ಲಾ ಗಲಭೆಗೆ ಸಚಿವ ಈಶ್ವರಪ್ಪ ಮತ್ತು ಮಹಾನಗರ ಪಾಲಿಕೆ ಸದಸ್ಯ ಚೆನ್ನ ಬಸಪ್ಪ ಅವರೇ ಕಾರಣ ಎಂದು ಶಿವಮೊಗ್ಗ ಪೀಸ್‌ ಆರ್ಗನೈಝೇಷನ್ ಕಾರ್ಯದರ್ಶಿ ರಿಯಾಜ್ ಅಹ್ಮದ್‌ ಅವರು ಪೊಲೀಸರು ದೂರು ನೀಡಿದ್ದರು. ಆದರೆ ಆರೋಪಿಗಳು ಪೊಲೀಸರ ಮೇಲೆ ರಾಜಕೀಯ ಪ್ರಭಾವ ಬಳಸಿ ಎಫ್‌ಐಆರ್‌ ದಾಖಲಾದಂತೆ ನೋಡಿಕೊಂಡಿದ್ದಾರೆ ಎಂದು ರಿಯಾಜ್ ಅಹ್ಮದ್ ಅವರು ನ್ಯಾಯಾಲಯಕ್ಕೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಹೀಗಾಗಿ ಆರೋಪಿಗಳಾದ ಈಶ್ವರಪ್ಪ ಮತ್ತು ಚೆನ್ನಬಸಪ್ಪ ವಿರುದ್ದ ಪ್ರಕರಣ ದಾಖಲಿಸಿ, ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡುವಂತೆ ಮತ್ತು ಆರೋಪಿಗಳನ್ನು ವಿಚಾರಣೆ ನಡೆಸುವಂತೆ ನ್ಯಾಯಾಲಯದಲ್ಲಿ ರಿಯಾಜ್ ಅಹ್ಮದ್ ಕೋರಿದ್ದಾರೆ.

ಇದನ್ನೂ ಓದಿ: ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...