Homeಮುಖಪುಟಕೇರಳ: ದಲಿತ ಸಮುದಾಯದ ಸಚಿವರಿಗೆ ದೇವಸ್ಥಾನದಲ್ಲಿ ದೀಪ ನೀಡಲು ಹಿಂಜರಿದ ಅರ್ಚಕರು

ಕೇರಳ: ದಲಿತ ಸಮುದಾಯದ ಸಚಿವರಿಗೆ ದೇವಸ್ಥಾನದಲ್ಲಿ ದೀಪ ನೀಡಲು ಹಿಂಜರಿದ ಅರ್ಚಕರು

- Advertisement -
- Advertisement -

ಕೇರಳದ ಎಸ್‌ಸಿ,ಎಸ್‌ಟಿ ಕಲ್ಯಾಣ ಸಚಿವ ಕೆ. ರಾಧಾಕೃಷ್ಣನ್ ಅವರು ಕಣ್ಣೂರಿನ ದೇವಸ್ಥಾನದಲ್ಲಿ ಜಾತಿ ತಾರತಮ್ಯವನ್ನು ಎದುರಿಸಿದ್ದಾರೆ ಎಂದು ಹೇಳಿದ್ದು, ಅರ್ಚಕರು ಅವರಿಗೆ ದೀಪವನ್ನು ನೀಡಲು ಹಿಂಜರಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆ ಬಗ್ಗೆ ಅಖಿಲ ಕೇರಳ ತಂತ್ರಿ ಸಮಾಜಮ್ ಪ್ರತಿಕ್ರಿಯಿಸಿದ್ದು, ಈ ಘಟನೆಯು ಸಚಿವರ ತಪ್ಪು ತಿಳುವಳಿಕೆಯ ಭಾಗವಾಗಿದೆ ಮತ್ತು ದೇವಾಲಯಗಳಲ್ಲಿ ಯಾರಿಗೂ ತಾರತಮ್ಯ ಮಾಡಲಾಗಿಲ್ಲ ಎಂದು ಹೇಳಿದೆ.

ಸಿಪಿಐ(ಎಂ) ಕೇಂದ್ರ ಸಮಿತಿಯ ಸದಸ್ಯರಾದ ರಾಧಾಕೃಷ್ಣನ್ ಅವರು ಪಕ್ಷದ ಯುವ ಘಟಕವಾದ ಡಿವೈಎಫ್‌ಐನಿಂದ ರಾಜಕೀಯಕ್ಕೆ ಬಂದವರು. ಇವರು ಐದು ಬಾರಿ ಶಾಸಕರಾಗಿ  ಆಯ್ಕೆಯಾಗಿದ್ದು, ಪ್ರಸ್ತುತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೇರಳದಲ್ಲಿ ಪ್ರಮುಖ ದಲಿತ ನಾಯಕರಾಗಿರುವ ರಾಧಾಕೃಷ್ಣನ್, ಘಟನೆಯ ಬಗ್ಗೆ  ಮಾತನಾಡುತ್ತಾ, ದೇಶದಲ್ಲಿ ಇತ್ತೀಚೆಗೆ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯದಿಂದ ನಾನು ಹೇಳಿಕೆ ಕೊಟ್ಟಿದ್ದೇನೆ. ನಾನು ಹಲವು ರಾಜ್ಯಗಳಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಕೇಳಿಕೊಂಡಿದ್ದು ನನಗೆ ನೋವು ತಂದಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೂಲಿ ಕೇಳಿದ್ದಕ್ಕೆ ದಲಿತನೊಬ್ಬನನ್ನು ಹೊಡೆದು ಕೊಲೆ ಮಾಡಲಾಗಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಮುಖಂಡರೊಬ್ಬರು ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ಎಲ್ಲಾ ಘಟನೆಗಳು ದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರ ಬೆಳೆಯುತ್ತಿರುವುದನ್ನು ಸೂಚಿಸುತ್ತದೆ. ಈ ಘಟನೆಗಳು ಜಾತಿ ವ್ಯವಸ್ಥೆಯನ್ನು ಮರುಸ್ಥಾಪಿಸುವ ಸಂಘಪರಿವಾರದ ಅಜೆಂಡಾದ ಭಾಗವಾಗಿ ನಾನು ನೋಡುತ್ತೇನೆ ಎಂದು ರಾಧಾಕೃಷ್ಣನ್ ಅವರು ಹೇಳಿದ್ದಾರೆ.

ಇದು ಕೇರಳದಲ್ಲಿ ಅಥವಾ ಇಲ್ಲಿನ ದೇವಸ್ಥಾನಗಳಲ್ಲಿ ಮಾತ್ರ ನಡೆದ ಪ್ರತ್ಯೇಕ ಪ್ರಕರಣವೆಂದು ನಾನು ಭಾವಿಸುವುದಿಲ್ಲ. ಇಂತಹ ಘಟನೆಗಳು ಹಲವು ಕಡೆಗಳಲ್ಲಿ ನಡೆಯುತ್ತಿದೆ. ಕೇರಳದಲ್ಲಿ ಜಾತಿ ವ್ಯವಸ್ಥೆಯ ಅವಶೇಷಗಳು ಇನ್ನೂ ಕೆಲವು ಜನರ ಮನಸ್ಸಿನಲ್ಲಿ ಉಳಿದಿವೆ ಎಂದು ಸಚಿವರು ಹೇಳಿದ್ದಾರೆ.

ಕೇರಳವು ಜಾತಿ ವ್ಯವಸ್ಥೆಯನ್ನು ತೊಡೆದುಹಾಕಲು ಮತ್ತು ಸಮಾನತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಹಲವಾರು ಚಳುವಳಿಗಳನ್ನು ಮಾಡಿದೆ. ನಾವು ಕೇರಳದಲ್ಲಿ ಹಲವಾರು ನವೋದಯ ಚಳುವಳಿಗಳನ್ನು ಮಾಡಿದ್ದೇವೆ. ದಲಿತರು ಅದರಿಂದ ಪ್ರಯೋಜನ ಪಡೆದಿದ್ದಾರೆ. ನಮ್ಮ ರಾಜ್ಯವು ಪ್ರಗತಿಪರ ಧೋರಣೆಯನ್ನು ಹೊಂದಿದೆ. ಆದರೆ ಸಮಕಾಲೀನ ಭಾರತೀಯ ಪರಿಸ್ಥಿತಿಗಳು ಇಂತಹ ಪ್ರತಿಗಾಮಿ ವರ್ತನೆಗಳಿಗೆ ಪ್ರಚೋದನೆಯನ್ನು ನೀಡುತ್ತವೆ ಎಂದು ರಾಧಾಕೃಷ್ಣನ್‌ ಅವರು ಹೇಳಿದ್ದಾರೆ.

ಈ ವಿಚಾರದಲ್ಲಿ ನಾನು ಸಮಾಜದ ಯಾವುದೇ ನಿರ್ದಿಷ್ಟ ವಿಭಾಗವನ್ನು ದೂಷಿಸಲು ಬಯಸುವುದಿಲ್ಲ. ಈ ತಾರತಮ್ಯಕ್ಕೆ ದೇವಸ್ಥಾನದ ಅರ್ಚಕರು ಮಾತ್ರ ಕಾರಣ ಎಂದು ನಾನು ಭಾವಿಸುವುದಿಲ್ಲ. ಜಾತಿ ವ್ಯವಸ್ಥೆಯ ವಿರುದ್ಧ ಸಂಘಟಿತ ಹೋರಾಟ ಇಂದಿನ ಅಗತ್ಯವಾಗಿದೆ. ನಮ್ಮ ಗುರಿ ಜಾತಿರಹಿತ ಸಮಾಜ, ಆದರೆ ಅದನ್ನು ರಾತ್ರೋರಾತ್ರಿ ಸಾಧಿಸಲು ಸಾಧ್ಯವಿಲ್ಲ. ಬದಲಾಗಿ ಆ ದೇವಸ್ಥಾನದಲ್ಲಿ ನಡೆದಂತಹ ಹೇಯ ಕೃತ್ಯಗಳ ವಿರುದ್ಧ ಸಾಮೂಹಿಕ ಚಳವಳಿಯ ಅಗತ್ಯವಿದೆ ಎಂದು ರಾಧಾಕೃಷ್ಣನ್‌ ಹೇಳಿದ್ದಾರೆ.

ಇದನ್ನು ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...