Homeಮುಖಪುಟಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ: ಮೂವರ ಸಾವು

ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ: ಮೂವರ ಸಾವು

- Advertisement -
- Advertisement -

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣವಾಗಿದ್ದು ಶನಿವಾರ ಮುಂಜಾನೆ ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾದಲ್ಲಿ ಮೈತೆಯ್ ಸಮುದಾಯದ ಮೂವರು ಕೊಲ್ಲಲ್ಪಟ್ಟಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಘಟನೆಯು ಮೈತೆಯ್ ಪ್ರಾಬಲ್ಯದ ಬಿಷ್ಣುಪುರ್ ಜಿಲ್ಲೆ ಮತ್ತು ಕುಕಿ-ಜೋಮಿ ಪ್ರಾಬಲ್ಯವಿರುವ ಚುರಾಚಂದ್‌ಪುರ ಜಿಲ್ಲೆಯ ಗಡಿಯಲ್ಲಿರುವ ಕ್ವಾಕ್ಟಾ ಪ್ರದೇಶದಲ್ಲಿ ನಡೆದಿದೆ. ಅಲ್ಲಿ ಪ್ರಸ್ತುತ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದ್ದು, ಗುಂಡಿನ ಚಕಮಕಿ ನಡೆಯುತ್ತಿದೆ ಎನ್ನಲಾಗಿದೆ.

ಸಾವನಪ್ಪಿದ 35 ಕುಕಿ-ಜೋಮಿ ಜನರ ಅಂತ್ಯಕ್ರಿಯೆ ನೇರವೇರದಿ ನಂತರ ಮತ್ತೆ ಹಿಂಸಾಚಾರ ಉಲ್ಭಣಗೊಂಡಿದ್ದು, ಪರಿಣಾಮ ಮೂವರು ಸಾವನಪ್ಪಿದ್ದಾರೆ.

ಟೊರ್ಬಂಗ್‌ ಪ್ರದೇಶದಲ್ಲಿ ಅಂತ್ಯ ಕ್ರಿಯೆ ನಡೆಸಲಾಯಿತು. ಇದು ಸಹ ಬಿಷ್ಣುಪುರ್ ಮತ್ತು ಚುರಾಚಂದ್‌ಪುರ ಜಿಲ್ಲೆಗಳ ಗಡಿ ಪ್ರದೇಶವಾಗಿದ್ದು, ಮೇ 03 ರಂದು ಇಲ್ಲಿಯೇ ಹಿಂಸಾಚಾರ ಆರಂಭವಾಗಿತ್ತು. ಅದೇ ಸ್ಥಳದಲ್ಲಿ ಮೃತ ಕುಕಿ ಜನರ ಅಂತ್ಯ ಕ್ರಿಯೆ ನಡೆದುದ್ದರಿಂದ ಅಲ್ಲಿನ ಜನರು ಕೋಪೋದ್ರಿಕ್ತರಾಗಿ ಹಿಂಸಾಚಾರಕ್ಕೆ ಇಳಿದಿದ್ದಾರೆ. ಈ ಬಗ್ಗೆ ಸರ್ಕಾರ ಎಚ್ಚರಿಕೆ ವಹಿಸಬೇಕಿತ್ತು ಎಂಬ ಮಾತುಗಳು ಕೇಳಿಬಂದಿವೆ.

ಇದನ್ನೂ ಓದಿ: ಸುಮ್ಮನಿರಿ, ಇಲ್ಲದಿದ್ದರೆ ಇಡಿ ನಿಮ್ಮ ಮನೆಗೆ ಬರುತ್ತದೆ: ಸದನದಲ್ಲಿ ಬೆದರಿಕೆಯೊಡ್ಡಿದ ಕೇಂದ್ರ ಸಚಿವೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ಮಾಡಿದ್ದಾರೆ ಎಂಬುವುದು ಸುಳ್ಳು

0
"ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದವರು ರಸ್ತೆ ಮಧ್ಯೆಯೇ ಬಹಿರಂಗವಾಗಿ ಗೋಹತ್ಯೆ ಮಾಡಿದ್ದಾರೆ" ಎಂದು ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಜೀಪ್‌ ಒಂದರ ಮುಂಭಾಗದಲ್ಲಿ ಹಸುವಿನ ಕಳೇಬರ ಕಟ್ಟಿದಂತೆ ಕಾಣುತ್ತಿದೆ. ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆಯನ್ನು ನಾವು...