Homeಅಂತರಾಷ್ಟ್ರೀಯಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

- Advertisement -
- Advertisement -

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ.

ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕನ ಮನೆಗೆ ಹೊರಗಿನಿಂದ ಬೀಗ ಹಾಕಿ ಬೆಂಕಿ ಹಚ್ಚಿದ್ದು, ಅವರ ಏಳು ವರ್ಷದ ಮಗಳು ಸಜೀವ ದಹನಗೊಂಡಿದ್ದಾರೆ. ಇತರ ಇಬ್ಬರು ಹೆಣ್ಣುಮಕ್ಕಳು ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ.

ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಬಿಎನ್‌ಪಿ ನಾಯಕ ಬಿಲಾಲ್ ಹುಸೈನ್ ಅವರ ಲಕ್ಷ್ಮಿಪುರದ ಮನೆಗೆ ಶನಿವಾರ ಮುಂಜಾನೆ ಬೆಂಕಿ ಹಚ್ಚಲಾಗಿದೆ.

ಹುಸೈನ್ ಭಬಾನಿಗಂಜ್ ಯೂನಿಯನ್ ಬಿಎನ್‌ಪಿಯ ಸಹಾಯಕ ಸಂಘಟನಾ ಕಾರ್ಯದರ್ಶಿ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಹುಸೈನ್ ಅವರ ಪುತ್ರಿ ಆಯಿಷಾ ಅಕ್ತರ್ ಸುಟ್ಟು ಕರಕಲಾಗಿದ್ದು, ಅವರ ಇನ್ನಿಬ್ಬರು ಪುತ್ರಿಯರಾದ ಸಲ್ಮಾ ಅಕ್ತರ್ (16) ಮತ್ತು ಸಮಿಯಾ ಅಕ್ತರ್ (14) ಗಂಭೀರ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಬಿಲಾಲ್ ಅವರು ಲಕ್ಷ್ಮಿಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಅವರ ಪುತ್ರಿಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಢಾಕಾಗೆ ಕಳುಹಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಷರೀಫ್ ಉಸ್ಮಾನ್ ಹಾದಿ ಸಿಂಗಾಪುರದಲ್ಲಿ ನಿಧನರಾದರು ಎಂಬ ಸುದ್ದಿ ಹೊರಬಿದ್ದ ನಂತರ, ಕಳೆದ ಗುರುವಾರ ರಾತ್ರಿ ರಾಜಧಾನಿ ಢಾಕಾ ಸೇರಿದಂತೆ ಬಾಂಗ್ಲಾದೇಶದ ಹಲವು ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಎರಡು ಪ್ರಮುಖ ಮಾಧ್ಯಮ ಸಂಸ್ಥೆಗಳಾದ ಡೈಲಿ ಸ್ಟಾರ್ ಮತ್ತು ಪ್ರೋಥೋಮ್ ಅಲೋ ಕಟ್ಟಡಗಳಿಗೆ ಪ್ರತಿಭಟನಾ ನಿರತರು ಬೆಂಕಿ ಹಚ್ಚಿದ್ದಾರೆ. ಬಾಂಗ್ಲಾದೇಶದ ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರ ಮನೆ ‘ಧನ್ಮೊಂಡಿ 32’ ಮೇಲೆ ಮತ್ತೊಮ್ಮೆ ದಾಳಿ ನಡೆಸಿದ್ದಾರೆ.

ರಾಜ್‌ಶಾಹಿ ಮತ್ತು ಚಿತ್ತಗಾಂಗ್‌ನಲ್ಲಿ ಭಾರತೀಯ ರಾಯಭಾರ ಕಚೇರಿಗಳ ವಿರುದ್ಧ ಪ್ರತಿಭಟನಾ ಮೆರವಣಿಗೆಗಳು ನಡೆದಿವೆ.

‘ಹಾದಿ’ ‘ಭಾರತೀಯ ಆಧಿಪತ್ಯ’ ಎಂದು ಕರೆಯುತ್ತಿದ್ದದ್ದಕ್ಕೆ ವಿರುದ್ಧವಾಗಿ ತೀವ್ರವಾದ ನಿಲುವುಗಳಿಗೆ ಹೆಸರಾಗಿದ್ದರು. ಅವರನ್ನು ಗುಂಡಿಟ್ಟು ಕೊಂದವರು ದಾಳಿಯ ನಂತರ ಭಾರತಕ್ಕೆ ಆಗಮಿಸಿದ್ದಾರೆ ಆರೋಪಿಸಲಾಗಿದೆ. ಆದರೆ, ಈ ಆರೋಪಕ್ಕೆ ಇದುವರೆಗೆ ಅಧಿಕಾರಿಗಳು ಯಾವುದೇ ದೃಢವಾದ ಪುರಾವೆಗಳನ್ನು ನೀಡಿಲ್ಲ.

ಅಶಾಂತಿ ಹರಡುತ್ತಿದ್ದಂತೆ, ಕನಿಷ್ಠ ಒಂದು ಕೋಮು ಘಟನೆ ವರದಿಯಾಗಿದೆ. ಪೊಲೀಸರ ಪ್ರಕಾರ, ಮೈಮೆನ್‌ಸಿಂಗ್‌ನಲ್ಲಿ ದೇವದೂಷಣೆಯ ಆರೋಪದ ಮೇಲೆ ಗುಂಪೊಂದು ಹಿಂದೂ ವ್ಯಕ್ತಿಯನ್ನು ಥಳಿಸಿ ಕೊಂದಿದೆ.

ಡಿಸೆಂಬರ್ 12ರಂದು ಮಧ್ಯ ಢಾಕಾದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ಹಾದಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ವಿದೇಶಕ್ಕೆ ವಿಮಾನದಲ್ಲಿ ಸಾಗಿಸಲಾಗಿತ್ತು. ಡಿಸೆಂಬರ್ 18ರಂದು ಹಾದಿ ಸಾವನ್ನಪ್ಪಿದರು. ಹಾದಿ ತೀವ್ರಗಾಮಿ ವೇದಿಕೆಯ ಇಂಕ್ವಿಲಾಬ್ ಮೊಂಚೊದ ಪ್ರಮುಖ ವ್ಯಕ್ತಿಯಾಗಿದ್ದರು.

ಹಾದಿ ಅವರ ನಿಧನವನ್ನು ಘೋಷಿಸಿದ ಬಾಂಗ್ಲಾದೇಶದ ಮಧ್ಯಂತರ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್, ಒಂದು ದಿನ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ್ದರು ಮತ್ತು ದೇಶಾದ್ಯಂತ ಧಾರ್ಮಿಕ ಸ್ಥಳಗಳಲ್ಲಿ ವಿಶೇಷ ಪ್ರಾರ್ಥನೆಗಳನ್ನು ಆಯೋಜಿಸಲು ಆದೇಶಿಸಿದ್ದರು.

ಹಾದಿ ಅವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ಢಾಕಾ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...