Homeಮುಖಪುಟಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ: 9 ಜನರ ಸಾವು

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ: 9 ಜನರ ಸಾವು

- Advertisement -
- Advertisement -

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು ಇದುವರೆಗೂ 9 ಜನರು ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಆಡಳಿತರೂಢ ಟಿಎಂಸಿ ಮತ್ತು ಪ್ರತಿಪಕ್ಷ ಬಿಜೆಪಿ ಪರಸ್ಪರ ದೋಷರೋಪಣೆಯಲ್ಲಿ ತೊಡಗಿವೆ.

ಕೂಚ್ ಬೆಹಾರ್‌ನಲ್ಲಿ ಮತಗಟ್ಟೆಗಳನ್ನು ಧ್ವಂಸಗೊಳಿಸಿ, ಮತಪತ್ರಗಳಿಗೆ ಬೆಂಕಿ ಹಚ್ಚಲಾಗಿದೆ.

ಪಶ್ಚಿಮ ಬಂಗಾಳದ ಸಚಿವ ಶಶಿ ಪಂಜಾ ಅವರು “ಟಿಎಂಸಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ” ಎಂದು ಆರೋಪಿಸಿ ಕೇಂದ್ರ ಪಡೆಗಳು ನಾಗರಿಕರನ್ನು ರಕ್ಷಿಸಲು ವಿಫಲರಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಬಿಜೆಪಿ, ಸಿಪಿಐ(ಎಂ) ಮತ್ತು ಕಾಂಗ್ರೆಸ್ ಜತೆಗೂಡಿ ಕೇಂದ್ರೀಯ ಪಡೆಗಳ ಮೊರೆ ಹೋಗಿದ್ದವು. ಆದರೆ ಅವುಗಳ ನಿಯೋಜನೆ ಎಲ್ಲಿದೆ? ನಾಗರಿಕರನ್ನು ರಕ್ಷಿಸುವಲ್ಲಿ ಕೇಂದ್ರ ಪಡೆಗಳು ಏಕೆ ವಿಫಲವಾಗಿವೆ? ಎಂದು ಅವರು ಪ್ರಶ್ನಿಸಿದ್ದಾರೆ.

ಕೂಚ್‌ಬೆಹಾರ್ ಜಿಲ್ಲೆಯ ಫಲಿಮಾರಿ ಗ್ರಾಮ ಪಂಚಾಯತ್‌ನಲ್ಲಿ ಬಿಜೆಪಿ ಮತಗಟ್ಟೆ ಏಜೆಂಟ್ ಮಾಧಬ್ ಬಿಸ್ವಾಸ್ ಅವರನ್ನು ಹತ್ಯೆ ಮಾಡಲಾಗಿದೆ. ಬಿಸ್ವಾಸ್ ಮತಗಟ್ಟೆಗೆ ಪ್ರವೇಶಿಸಲು ಪ್ರಯತ್ನಿಸಿದಾಗ ಅವರನ್ನು ಟಿಎಂಸಿ ಬೆಂಬಲಿಗರು ತಡೆದರು ಮತ್ತು ಪರಿಸ್ಥಿತಿ ಉಲ್ಬಣಗೊಳ್ಳುತ್ತಿದ್ದಂತೆ ಅವರನ್ನು ಕೊಂದರು ಎಂದು ಬಿಜೆಪಿ ಆರೋಪಿಸಿದೆ. ಈ ಆರೋಪಗಳನ್ನು ಟಿಎಂಸಿ ನಿರಾಕರಿಸಿದೆ.

ಉತ್ತರ 24 ಪರಗಣ ಜಿಲ್ಲೆಯ ಕದಂಬಗಚಿ ಪ್ರದೇಶದಲ್ಲಿ ಸ್ವತಂತ್ರ ಅಭ್ಯರ್ಥಿಯ ಬೆಂಬಲಿಗನನ್ನು ರಾತ್ರಿಯಿಡೀ ಥಳಿಸಿದ ಪರಿಣಾಮ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೂರ್ವ ಬುರ್ದ್ವಾನ್ ಜಿಲ್ಲೆಯಲ್ಲಿ ನಿನ್ನೆ ಸಂಜೆ ತೀವ್ರವಾಗಿ ಗಾಯಗೊಂಡಿದ್ದ ಸಿಪಿಐ(ಎಂ) ಕಾರ್ಯಕರ್ತ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಾಂಗ್ರೆಸ್ ಮತ್ತು ಸಿಪಿಐ(ಎಂ)ನ ಅಪವಿತ್ರ ಮೈತ್ರಿಯು ತನ್ನ ಪಕ್ಷದ ಬೆಂಬಲಿಗರ ಮೇಲೆ ಬಹಿರಂಗವಾಗಿ ದಾಳಿ ನಡೆಸಿದೆ ಎಂದಿರುವ ಟಿಎಂಸಿ ಉತ್ತರ 24 ಪರಗಣದ ಹಸ್ನಾಬಾದ್‌ನಲ್ಲಿ “ಪ್ರಚಂಡ ಹಿಂಸಾಚಾರ” ಪ್ರದರ್ಶಿಸಲಾಗಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ; ಬೆತ್ತಲೆ ವಿಡಿಯೋಗಾಗಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಮಾರಿದ RSS ಹಿನ್ನಲೆಯ DRDO ನಿರ್ದೇಶಕನ ಮೇಲೆ ಚಾರ್ಜ್ ಶೀಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...