Homeಅಂತರಾಷ್ಟ್ರೀಯಡ್ರಗ್ ದೊರೆ 'ಎಲ್ ಮೆಂಚೊ' ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

- Advertisement -
- Advertisement -

‘ಎಲ್ ಮೆಂಚೊ’ ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು ವರದಿಯಾಗಿದೆ.

ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್‌ ಸಂಘಟನೆಯ ನಾಯಕನಾಗಿದ್ದ 59 ವರ್ಷದ ಎಲ್ ಮೆಂಚೊ, ಜಲಿಸ್ಕೊ ರಾಜ್ಯದ ತಪಲ್ಪಾ ಪಟ್ಟಣದಲ್ಲಿ ಸೈನಿಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಕ್ಸಿಕೋ ನಗರಕ್ಕೆ ವಿಮಾನದ ಮೂಲಕ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ ಎಂದು ಸೇನೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ ಮೆಂಚೊ ಹತ್ಯೆಯ ವಿರುದ್ಧ ಪ್ರತಿಭಟಿಸಿದ ಬಂದೂಕುಧಾರಿಗಳು ಪಶ್ಚಿಮ ಜಲಿಸ್ಕೊ ರಾಜ್ಯದ (ತಪಲ್ಪಾ ಸೇರಿದಂತೆ) ಸುಮಾರು 20ಕ್ಕೂ ಹೆಚ್ಚು ರಸ್ತೆಗಳನ್ನು ವಾಹನಗಳಿಗೆ ಬೆಂಕಿ ಹಚ್ಚುವ ಮೂಲಕ ಬಂದ್ ಮಾಡಿದ್ದಾರೆ. ಈ ಹಿಂಸಾಚಾರ ಇತರ ರಾಜ್ಯಗಳಿಗೂ ಹಬ್ಬಿದೆ.

ಕಾರ್ಟೆಲ್ ಸದಸ್ಯರು ಮೆಕ್ಸಿಕೋದ ಸುಮಾರು 20 ರಾಜ್ಯಗಳಲ್ಲಿ 250ಕ್ಕೂ ಹೆಚ್ಚು ಕಡೆ ರಸ್ತೆ ತಡೆ ನಡೆಸಿದ್ದಾರೆ ಎಂದು ಸಿಎನ್‌ಎನ್‌ ವರದಿ ಮಾಡಿದೆ.

ಹಿಂಸಾಚಾರದ ಹಿನ್ನೆಲೆ ಅಮೆರಿಕ ಮತ್ತು ಕೆನಡಾ ಸರ್ಕಾರಗಳು ತಮ್ಮ ನಾಗರಿಕರಿಗೆ ಮನೆಯಲ್ಲೇ ಇರಲು ಸೂಚಿಸಿವೆ. ಜಲಿಸ್ಕೊ, ಮಿಚೋವಾಕನ್ ಮತ್ತು ಗುವಾನಾಜುವಾಟೊ ರಾಜ್ಯಗಳಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಗುವಾಡಲಜಾರ ಮತ್ತು ಪೋರ್ಟೊ ವಲ್ಲಾರ್ಟಾದಂತಹ ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸಲಾಗಿದ್ದು, ಹಲವು ಅಂತಾರಾಷ್ಟ್ರೀಯ ವಿಮಾನಯಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಬಿಬಿಸಿ ವರದಿ ಮಾಡಿದೆ.

ಜಲಿಸ್ಕೊ ರಾಜ್ಯವು ಈ ವರ್ಷ ನಡೆಯಲಿರುವ ಫಿಫಾ ವಿಶ್ವಕಪ್‌ನ ಆತಿಥ್ಯ ವಹಿಸಲಿದ್ದು, ಸದ್ಯದ ಪರಿಸ್ಥಿತಿಯಿಂದಾಗಿ ಎಲ್ಲಾ ದೊಡ್ಡ ಸಾರ್ವಜನಿಕ ಸಮಾರಂಭಗಳು ಮತ್ತು ಫುಟ್‌ಬಾಲ್ ಪಂದ್ಯಗಳನ್ನು ಮುಂದೂಡಲಾಗಿದೆ ಎಂದು ದಿ ಹಿಂದೂ ಸ್ಪೋರ್ಟ್ಸ್ ಸ್ಟಾರ್ ವರದಿ ತಿಳಿಸಿದೆ.

ಒಸೆಗುಯೆರಾ, ಸಿನಾಲೋವಾ ಕಾರ್ಟೆಲ್ ಸ್ಥಾಪಕರಾದ ಜೊವಾಕ್ವಿನ್ ಎಲ್ ಚಾಪೊ, ಗುಜ್ಮಾನ್ ಮತ್ತು ಇಸ್ಮಾಯೆಲ್ ಜಾಂಬಾಡಾ ಅವರ ಬಂಧನದ ನಂತರ ಮೆಕ್ಸಿಕೋದಲ್ಲಿ ಸೆರೆಹಿಡಿಯಲ್ಪಟ್ಟ ಅತ್ಯಂತ ದೊಡ್ಡ ಡ್ರಗ್ ದೊರೆ ಆಗಿದ್ದಾನೆ. ಸದ್ಯ ಎಲ್ ಚಾಪೊ ಮತ್ತು ಜಾಂಬಾಡಾ ಇಬ್ಬರೂ ಅಮೆರಿಕಾದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಎಲ್ ಮೆಂಚೊ ಸಾವಿನೊಂದಿಗೆ, ಅಮೆರಿಕಾದ ಡ್ರಗ್ ಎನ್‌ಫೋರ್ಸ್‌ಮೆಂಟ್ ಅಡ್ಮಿನಿಸ್ಟೇಶನ್ (ಡಿಇಎ) ದಶಕಗಳಿಂದ ನಡೆಸುತ್ತಿದ್ದ ಕಾರ್ಯಾಚರಣೆಗೆ ದೊಡ್ಡ ಯಶಸ್ಸು ಸಿಕ್ಕಂತಾಗಿದೆ. ಎಲ್ ಮೆಂಚೊನ ಮರಣದ ನಂತರ, ಜಲಿಸ್ಕೊ ಕಾರ್ಟೆಲ್‌ನೊಳಗೆ ಮುಂದಿನ ನಾಯಕತ್ವಕ್ಕಾಗಿ ಭಾರೀ ಅಂತರ್ಯುದ್ಧ ನಡೆಯುವ ಸಾಧ್ಯತೆಯಿದೆ ಎಂದು ದಿ ನ್ಯೂಯಾರ್ಕ್ ಟೈಮ್ಸ್ ವಿಶ್ಲೇಷಿಸಿದೆ.

ಹಿಂಸಾಚಾರವನ್ನು ಹತ್ತಿಕ್ಕಲು ಮೆಕ್ಸಿಕೋ ಸರ್ಕಾರವು ಜಲಿಸ್ಕೊ ರಾಜ್ಯಕ್ಕೆ ಹೆಚ್ಚುವರಿ 10,000 ಸೇನಾ ಸಿಬ್ಬಂದಿಯನ್ನು ರವಾನಿಸಿದೆ ಎಂದು ಎಬಿಸಿ ನ್ಯೂಸ್ ತಿಳಿಸಿದೆ.

ಮೆಕ್ಸಿಕನ್ ಸೇನೆ ಭಾನುವಾರ ನೀಡಿದ ಹೇಳಿಕೆಯ ಪ್ರಕಾರ, ಎಲ್‌ ಮೆಂಚೊ ಮೇಲಿನ ದಾಳಿಯನ್ನು ಮೆಕ್ಸಿಕೋದ ಮಿಲಿಟರಿ ಗುಪ್ತಚರ ಮಾಹಿತಿ ಮಾತ್ರವಲ್ಲದೆ, ಅಮೆರಿಕದ ಅಧಿಕಾರಿಗಳಿಂದ ಲಭ್ಯವಾದ ಪೂರಕ ಮಾಹಿತಿಯ ನೆರವಿನೊಂದಿಗೆ ನಡೆಸಲಾಗಿದೆ.

ಅಮೆರಿಕದ ಡಿಇಎ ಈ ಕಾರ್ಯಾಚರಣೆಗೆ ಅಗತ್ಯವಾದ ತಾಂತ್ರಿಕ ಮತ್ತು ಕಣ್ಗಾವಲು ಮಾಹಿತಿಯನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಲ್ ಮೆಂಚೊನನ್ನು ಪತ್ತೆಹಚ್ಚಲು ಅಮೆರಿಕ ಘೋಷಿಸಿದ್ದ 15 ಮಿಲಿಯನ್ ಡಾಲರ್ ಬಹುಮಾನದ ಮಾಹಿತಿಯನ್ನು ಹಂಚಿಕೊಳ್ಳುವವರಿಗೆ ನೀಡುವ ಪ್ರಕ್ರಿಯೆಯ ಕುರಿತು ಈಗ ಚರ್ಚೆ ನಡೆಯುತ್ತಿದೆ ಎಂದು ಸಿಬಿಎಸ್ ನ್ಯೂಸ್ ತಿಳಿಸಿದೆ.

ಈ ಯಶಸ್ವಿ ದಾಳಿಯು ಅಮೆರಿಕ ಮತ್ತು ಮೆಕ್ಸಿಕೋ ನಡುವಿನ ಭದ್ರತಾ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದು ಎರಡೂ ದೇಶಗಳ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಮೆಕ್ಸಿಕನ್ ಸೇನೆಯ ಪ್ರಕಟಣೆಯ ಪ್ರಕಾರ, ಕಾರ್ಯಾಚರಣೆಯಲ್ಲಿ ಒಸೆಗುಯೆರಾ ಮಾತ್ರವಲ್ಲದೆ ಕಾರ್ಟೆಲ್‌ನ ಆರು ಶಂಕಿತ ಬಂದೂಕುಧಾರಿಗಳು ಕೂಡ ಹತರಾಗಿದ್ದಾರೆ. ಇದೇ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ.

ಕಾರ್ಯಾಚರಣೆಯ ವೇಳೆ ಇಬ್ಬರು ಶಂಕಿತ ಕಾರ್ಟೆಲ್ ಸದಸ್ಯರನ್ನು ಬಂಧಿಸಲಾಗಿದೆ. ಅಲ್ಲದೆ, ವಿಮಾನಗಳನ್ನು ಹೊಡೆದುರುಳಿಸುವ ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ನಾಶಪಡಿಸುವ ಸಾಮರ್ಥ್ಯವಿರುವ ರಾಕೆಟ್ ಲಾಂಚರ್‌ಗಳು ಸೇರಿದಂತೆ ವಿವಿಧ ರೀತಿಯ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಏನಿದು ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್?

ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್ ಎಂಬುವುದು ಮೆಕ್ಸಿಕೋದ ಅತ್ಯಂತ ಪ್ರಬಲ ಮತ್ತು ಅಪಾಯಕಾರಿ ಅಪರಾಧ ಸಂಘಟನೆಯಾಗಿದೆ. ಇದು 2009-2010ರಲ್ಲಿ ಸಿನಾಲೋವಾ ಕಾರ್ಟೆಲ್‌ನಿಂದ ಬೇರ್ಪಟ್ಟ ಗುಂಪಾಗಿ ಉದಯಿಸಿತು. ಎಲ್ ಮೆಂಚೊ ಇದರ ಮುಖ್ಯಸ್ಥನಾಗಿದ್ದ.

ಈ ಗುಂಪು ಪ್ರಮುಖವಾಗಿ ಕೊಕೇನ್, ಹೆರಾಯಿನ್ ಮತ್ತು ಸಿಂಥೆಟಿಕ್ ಡ್ರಗ್ಸ್ (ಫೆಂಟಾನಿಲ್) ನಂತಹ ಮಾದಕ ದ್ರವ್ಯಗಳ ಅಕ್ರಮ ಸಾಗಾಟದಲ್ಲಿ ತೊಡಗಿದೆ. ಇದಲ್ಲದೆ ಹಣ ಅಕ್ರಮ ಸಾಗಾಟ, ಅಪಹರಣ ಮತ್ತು ತೈಲ ಕಳ್ಳತನದಂತಹ ಕೃತ್ಯಗಳಲ್ಲೂ ಇದು ಭಾಗಿಯಾಗಿದೆ ಎಂದು ವರದಿಗಳು ಹೇಳಿವೆ.

ಇದು ಅರೆಸೇನಾ ಪಡೆಯಂತೆಯೇ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದೆ. ಡ್ರೋನ್‌ಗಳ ಮೂಲಕ ಬಾಂಬ್ ದಾಳಿ ನಡೆಸುವುದು ಮತ್ತು ರಾಕೆಟ್ ಲಾಂಚರ್‌ಗಳನ್ನು ಬಳಸುವುದರಲ್ಲಿ ಕುಖ್ಯಾತವಾಗಿದೆ.

ಮೆಕ್ಸಿಕೋದ 32 ರಾಜ್ಯಗಳ ಪೈಕಿ ಸುಮಾರು 27ಕ್ಕೂ ಹೆಚ್ಚು ರಾಜ್ಯಗಳಲ್ಲಿ ಇದು ತನ್ನ ಜಾಲವನ್ನು ಹೊಂದಿದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಮೆರಿಕ, ಯುರೋಪ್ ಮತ್ತು ಏಷ್ಯಾದ ದೇಶಗಳಿಗೂ ತನ್ನ ವ್ಯವಹಾರವನ್ನು ವಿಸ್ತರಿಸಿದೆ.

ಈ ಕಾರ್ಟೆಲ್ ತನ್ನ ಎದುರಾಳಿ ಗುಂಪುಗಳು ಮತ್ತು ಸರ್ಕಾರಿ ಭದ್ರತಾ ಪಡೆಗಳ ಮೇಲೆ ತೀವ್ರವಾದ ದಾಳಿಗಳನ್ನು ನಡೆಸಲು ಹೆಸರಾಗಿದೆ. ಅಮೆರಿಕ ಸರ್ಕಾರವು ಇದನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...