Homeಮುಖಪುಟಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

- Advertisement -
- Advertisement -

ಲೋಕಸಭೆಯ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಐದು ಮೈತ್ರಿ ಪಕ್ಷದ ಸಂಸದರೊಂದಿಗೆ ಹಿಂಸಾಚಾರ ಪೀಡಿತ ಸಂಭಾಲ್ ಜಿಲ್ಲೆಗೆ ಬುಧವಾರ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ. ಈ ವೇಳೆ ವಯನಾಡ್‌ನ ನೂತನ ಸಂಸದೆ ಪ್ರಿಯಾಂಕಾ ಗಾಂಧಿ ಕೂಡ ಸಂಭಾಲ್‌ಗೆ ಭೇಟಿ ನೀಡಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ನಿಯೋಗದಲ್ಲಿ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಮತ್ತು ಯುಪಿ ಉಸ್ತುವಾರಿ ಅವಿನಾಶ್ ಪಾಂಡೆ ಕೂಡ ಇರುತ್ತಾರೆ ಎಂದು ಪಕ್ಷವು ಪಿಟಿಐಗೆ ತಿಳಿಸಿದೆ. ಸೋಮವಾರದಂದು ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರ ನಿಯೋಗ ಜಿಲ್ಲೆಗೆ ಭೇಟಿ ನೀಡುವುದನ್ನು ತಡೆಯಲಾಗಿತ್ತು. ಡಿಸೆಂಬರ್ 10ರವರೆಗೆ ಈ ಪ್ರದೇಶಕ್ಕೆ ಹೊರಗಿನವರು ಮತ್ತು ಸಾರ್ವಜನಿಕ ಪ್ರತಿನಿಧಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಹಿಂಸಾಚಾರ ಪೀಡಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಭಾಲ್‌ನ ಸುಮಾರು 500 ವರ್ಷಗಳ ಹಳೆಯ ಮಸೀದಿಯಿರುವ ಸ್ಥಳದಲ್ಲಿ ಹರಿಹರ ದೇವಾಲಯ ಇತ್ತು ಪ್ರತಿಪಾದಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾದ ನಂತರ ನವೆಂಬರ್ 19 ರಿಂದ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಮಸೀದಿಯ ಸಮೀಕ್ಷೆ ನಡೆಸುವ ವೇಳೆ ಸ್ಥಳದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.

ನವೆಂಬರ್ 24 ರಂದು ನಡೆದ ಎರಡನೇ ಸಮೀಕ್ಷೆಯ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಶಾಹಿ ಜಾಮಾ ಮಸೀದಿ ಬಳಿ ಜಮಾಯಿಸಿ ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ್ದಾರೆ. ಉಂಟಾದ ಹಿಂಸಾಚಾರದಲ್ಲಿ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಈ ನಡುವೆ, ಹಿಂಸಾಚಾರದ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಬಹುತೇಕ ಸಂಪೂರ್ಣ ಪ್ರತಿಪಕ್ಷಗಳು ಮಂಗಳವಾರ ಸದನದಿಂದ ಸಂಕ್ಷಿಪ್ತವಾಗಿ ಹೊರನಡೆದಿವೆ. ಸದನವು ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಳ್ಳಲು ಸಭೆ ಸೇರಿದ ತಕ್ಷಣ, ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಎದ್ದುನಿಂತು ವಿಷಯ ಪ್ರಸ್ತಾಪಿಸಿ, ವಿಷಯದ ಬಗ್ಗೆ ಮಾತನಾಡಲು ಸ್ಪೀಕರ್ ಓಂ ಬಿರ್ಲಾ ಅವರ ಅನುಮತಿ ಕೋರಿದ್ದರು.

“ಇದು ತುಂಬಾ ಗಂಭೀರವಾದ ವಿಷಯ. ಐದು ಜನರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಅಖಿಲೇಶ್ ಯಾದವ್ ಹೇಳಿದರು. ಆದರೆ, ಇದಕ್ಕೆ ಅನುಮತಿ ನೀಡದ ಸ್ಪೀಕರ್‌, ಶೂನ್ಯವೇಳೆಯಲ್ಲಿ ಸದಸ್ಯರು ಈ ವಿಷಯವನ್ನು ಪ್ರಸ್ತಾಪಿಸಬಹುದು ಎಂದು ಹೇಳಿದರು. ಇದನ್ನು ಪ್ರತಿಭಟಿಸಿದ ಅಖಿಲೇಶ್ ಯಾದವ್ ಮತ್ತು ಅವರ ಪಕ್ಷದ ಸಹೋದ್ಯೋಗಿಗಳು ಸದನದಿಂದ ಹೊರನಡೆಯಲು ಪ್ರಾರಂಭಿಸಿದರು.

ಇದನ್ನೂ ಓದಿ: ಪ್ರಚೋದನಕಾರಿ ಸುದ್ದಿ | ಭಾರತೀಯ ಟಿವಿ ಚಾನೆಲ್‌ಗಳನ್ನು ನಿಷೇಧಿಸುವಂತೆ ಬಾಂಗ್ಲಾದೇಶ ಹೈಕೋರ್ಟ್‌ಗೆ ಅರ್ಜಿ

ಪ್ರಚೋದನಕಾರಿ ಸುದ್ದಿ | ಭಾರತೀಯ ಟಿವಿ ಚಾನೆಲ್‌ಗಳನ್ನು ನಿಷೇಧಿಸುವಂತೆ ಬಾಂಗ್ಲಾದೇಶ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...