Homeಮುಖಪುಟಅಹಿಂಸೆಗಾಗಿ ಹಿಂಸೆ ಅನಿವಾರ್ಯ: ಆರೆಸ್ಸೆಸ್‌ ನಾಯಕ ವಿವಾದಾತ್ಮಕ ಹೇಳಿಕೆ

ಅಹಿಂಸೆಗಾಗಿ ಹಿಂಸೆ ಅನಿವಾರ್ಯ: ಆರೆಸ್ಸೆಸ್‌ ನಾಯಕ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಅಹಿಂಸೆ ತತ್ವವನ್ನು ಕಾಪಾಡಬೇಕಾದರೆ ಕೆಲವೊಮ್ಮೆ ಹಿಂಸೆ ಅನಿವಾರ್ಯವಾಗುತ್ತದೆ ಎಂದು ಹೇಳಿರುವ ಆರೆಸ್ಸೆಸ್‌ ಹಿರಿಯ ನಾಯಕ ಭಯ್ಯಾಜಿ ಜೋಶಿ, ಅದಾಗ್ಯೂ, ಭಾರತವೂ ಎಲ್ಲರನ್ನು ಶಾಂತಿಯ ಪಥದಲ್ಲಿ ಕೊಂಡೊಯ್ಯಬೇಕೆಂದು ಎಂದು ಹೇಳಿದ್ದಾರೆ. ಈ ಹಿಂದೆಯೂ ಅವರು ಹಲವು ಬಾರಿ ವಿವಾದಾದತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಾಗಿದ್ದರು. ಅಹಿಂಸೆಗಾಗಿ ಹಿಂಸೆ ಅನಿವಾರ್ಯ

ಗುಜರಾತ್ ವಿಶ್ವವಿದ್ಯಾನಿಲಯದ ಆವರಣದ ಮೈದಾನದಲ್ಲಿ ನಡೆದ ಹಿಂದೂ ಸ್ಪಿರಿಚ್ಯುವಲ್ & ಸರ್ವಿಸ್ ಫೇರ್ ಅಥವಾ ಹಿಂದೂ ಆಧ್ಯಾತ್ಮಿಕ ಸೇವಾ ಮೇಳವನ್ನು ಉದ್ದೇಶಿಸಿ ಮಾತನಾಡುತ್ತಾ ಭಯ್ಯಾಜಿ ಜೋಶಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಹಿಂಸೆಗಾಗಿ ಹಿಂಸೆ ಅನಿವಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಹಿಂದೂಗಳು ಎಂದಿಗೂ ತಮ್ಮ ಧರ್ಮವನ್ನು ರಕ್ಷಿಸಲು ಬದ್ಧರಾಗಿರಬೇಕು. ನಾವು ನಮ್ಮ ಧರ್ಮವನ್ನು ಕಾಪಾಡಬೇಕಾದರೆ ಕೆಲವೊಮ್ಮೆ ಇತರರು ಯಾವುದನ್ನು ‘ಅಧರ್ಮ’ ಎಂದು ಕರೆಯುತ್ತಾರೋ ಅದನ್ನೇ ಮಾಡಬೇಕಾಗುತ್ತದೆ. ನಮ್ಮ ಪೂರ್ವಜರು ಕೂಡಾ ಹಾಗೆಯೇ ಮಾಡಿರುವುದು” ಎಂದು ಅವರು ಹೇಳಿದ್ದಾರೆ.

ಮಹಾಭಾರತವನ್ನು ಉಲ್ಲೇಖಿಸಿದ ಅವರು, “ಪಾಂಡವರು ಅಧರ್ಮವನ್ನು ನಾಶ ಮಾಡಲು ಯುದ್ಧದ ನೀತಿಯನ್ನು ಕೈಗೊಂಡರು. ಹಿಂದೂ ಧರ್ಮ ಅಹಿಂಸೆ ಸಾರುತ್ತದೆ ಎಂಬುದನ್ನು ನಾವು ಅಲ್ಲಗಳೆಯಲಾಗದು. ಆದರೆ ಕೆಲವೊಮ್ಮೆ ಅಹಿಂಸೆಯ ರಕ್ಷಣೆಗಾಗಿ ಹಿಂಸೆಯ ಹಾದಿ ತುಳಿಯಬೇಕಾಗುತ್ತದೆ. ಇಲ್ಲವಾದರೆ ಅಹಿಂಸೆ ತತ್ವವು ಸುರಕ್ಷಿತವಾಗಿರದು. ನಮ್ಮ ಪೂರ್ವಜರು ಈ ಸಂದೇಶವನ್ನು ನಮಗೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

“ಭಾರತವನ್ನು ಹೊರತುಪಡಿಸಿ ಇತರೆ ದೇಶಗಳ ಜೊತೆಯಲ್ಲೇ ಸಾಗುವಂತಹ ಯಾವುದೇ ದೇಶವಿಲ್ಲ. ವಸುದೈವ ಕುಟುಂಬಂ ಎಂಬುದು ನಮ್ಮ ಆಧ್ಯಾತ್ಮದ ತತ್ವವಾಗಿದೆ. ನಾವು ಇಡೀ ವಿಶ್ವವನ್ನೇ ಒಂದು ಕುಟುಂಬವಾಗಿ ಪರಿಗಣಿಸಿದರೆ ಯಾವುದೇ ಸಂಘರ್ಷ ಇರುವುದಿಲ್ಲ” ಎಂದು ಭಯ್ಯಾಜಿ ಜೋಶಿ ಹೇಳಿದ್ದಾರೆ.

“ನಾವು ಭಾರತ ಬಲಿಷ್ಠವಾಗಬೇಕು ಎನ್ನುತ್ತೇವೆ. ಅಂದರೆ ಬಲಿಷ್ಠ ಭಾರತ ಮತ್ತು ಬಲಿಷ್ಠ ಹಿಂದೂ ಸಮುದಾಯ ಮಾತ್ರ ಎಲ್ಲರಿಗೂ ಉಪಯೋಗಕರ ಎಂಬ ಭರವಸೆಯನ್ನು ಜಗತ್ತಿಗೆ ನೀಡುವುದಾಗಿದೆ. ನಾವು ಬಲಿಷ್ಠರಾದರೆ ದುರ್ಬಲರು ಮತ್ತು ಧಮನಿತರನ್ನು ರಕ್ಷಿಸುತ್ತೇವೆ” ಎಂದು ಅವರು ತಿಳಿಸಿದ್ದಾರೆ. ಭಯ್ಯಾಜಿ ಜೋಶಿ ಈ ಹಿಂದೆ ಕೂಡಾ ಹಲವು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿಂದೆ, ಹಿಂದೂ ಮತ್ತು ಹಿಂದುತ್ವ ಎರಡೂ ಕೂಡಾ ಒಂದೇ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು.

ಇದನ್ನೂಓದಿ:  ಉತ್ತರ ಪ್ರದೇಶ – ಗಂಟಲು ಸೀಳಿ, ಜನನಾಂಗ ವಿರೂಪಗೊಳಿಸಿ ಯುವಕನ ಕೊಲೆ

ಉತ್ತರ ಪ್ರದೇಶ – ಗಂಟಲು ಸೀಳಿ, ಜನನಾಂಗ ವಿರೂಪಗೊಳಿಸಿ ಯುವಕನ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...