Homeಮುಖಪುಟತ್ರಿಪುರಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಹೆಚ್ಚಾದ ಹಿಂಸಾಚಾರ: ಸಿಪಿಐ(ಎಂ) ಆರೋಪ

ತ್ರಿಪುರಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಹೆಚ್ಚಾದ ಹಿಂಸಾಚಾರ: ಸಿಪಿಐ(ಎಂ) ಆರೋಪ

- Advertisement -
- Advertisement -

ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ತ್ರಿಪುರಾದಲ್ಲಿ 668 ಹಿಂಸಾಚಾರ ಘಟನೆಗಳು ನಡೆದಿವೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಮಾರ್ಕ್ಸ್‌ವಾದಿ) ಆರೋಪಿಸಿದೆ.

ಹಿಂಸಾಚಾರದ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸಿಪಿಐ(ಎಂ) ಹೇಳಿದೆ. ತ್ರಿಪುರಾ ಚುನಾವಣೆಯಲ್ಲಿ ಸಿಪಿಐ(ಎಂ) ಪಕ್ಷ ಮೂರನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ರಾಜ್ಯದಲ್ಲಿ ರಬ್ಬರ್ ತೋಟಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಆಸ್ತಿಗಳನ್ನು ನಾಶಪಡಿಸಲಾಗಿದೆ ಎಂದು ಸಿಪಿಐ(ಎಂ) ಆರೋಪಿಸಿದೆ.

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ ಭಾನುವಾರ ಮಾಜಿ ಸಚಿವ ತಪನ್ ಚಕ್ರವರ್ತಿ ಮತ್ತು ಎಡ ಸಂಚಾಲಕ ನಾರಾಯಣ್ ಕರ್ ಅವರೊಂದಿಗೆ ತ್ರಿಪುರಾದಲ್ಲಿನ ಸಧ್ಯದ ಪರಿಸ್ಥಿತಿಯನ್ನು ರಾಜ್ಯ ಮುಖ್ಯ ಕಾರ್ಯದರ್ಶಿಗೆ ತಿಳಿಸಿದರು.

ಇದನ್ನೂ ಓದಿ: ತ್ರಿಪುರಾ ವಿಧಾನಸಭಾ ಚುನಾವಣೆ: ಮೈತ್ರಿ ಮಾಡಿಕೊಳ್ಳಲಿರುವ ಕಾಂಗ್ರೆಸ್ ಮತ್ತು ಸಿಪಿಐ(ಎಂ)

”2018 ರ ಮಾರ್ಚ್‌ನಲ್ಲಿ ತ್ರಿಪುರಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನೆಯ ಆಳ್ವಿಕೆ ಪ್ರಾರಂಭವಾಯಿತು ಮತ್ತು ಚುನಾವಣೆಯ ಕಾರಣದಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿತ್ತು ಆ ಕಾರಣದಿಂದ ಅದು ಕೆಲವು ದಿನಗಳವರೆಗೆ ನಿಯಂತ್ರಣದಲ್ಲಿದೆ” ಎಂದು ಚೌಧರಿ ಹೇಳಿದರು.

”ಮಾರ್ಚ್ 2ರಿಂದ ಸರಣಿ ದಾಳಿಯಿಂದಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು ಕಾಡಿನಲ್ಲಿ ಮತ್ತು ಹೊರ ರಾಜ್ಯಗಳಲ್ಲಿ ಆಶ್ರಯ ಪಡೆದಿದ್ದಾರೆ” ಎಂದು ಚೌಧರಿ ಆರೋಪಿಸಿದ್ದಾರೆ.

“ಬಿಜೆಪಿಯ ಗೂಂಡಾಗಳು ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ಉಲ್ಲಂಘಿಸುತ್ತಿದ್ದಾರೆ ಮತ್ತು ಜನರ ಮೇಲೆ ದಾಳಿ ಮಾಡುತ್ತಿದ್ದಾರೆ ಮತ್ತು ಅವರ ಮನೆ ಮತ್ತು ಆಸ್ತಿಗಳನ್ನು ಸುಡುತ್ತಿದ್ದಾರೆ” ಎಂದು ಅವರು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

0
'ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ' ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ...