Homeಮುಖಪುಟಕೊನೆಯ ಹಂತದ ಮತದಾನ: ಪ.ಬಂಗಾಳದ ಹಲವೆಡೆ ಹಿಂಸಾಚಾರ; ಮತಯಂತ್ರಗಳನ್ನು ಹೊತ್ತೊಯ್ದು ನೀರಿಗೆ ಎಸೆದ ಗುಂಪು

ಕೊನೆಯ ಹಂತದ ಮತದಾನ: ಪ.ಬಂಗಾಳದ ಹಲವೆಡೆ ಹಿಂಸಾಚಾರ; ಮತಯಂತ್ರಗಳನ್ನು ಹೊತ್ತೊಯ್ದು ನೀರಿಗೆ ಎಸೆದ ಗುಂಪು

- Advertisement -
- Advertisement -

ಕೊನೆಯ ಮತ್ತು ಏಳನೇ ಹಂತದ ಚುನಾವಣೆ ಹಿನ್ನೆಲೆ 7 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಗಢದ 1 ಕ್ಷೇತ್ರ ಸೇರಿ ಒಟ್ಟು 57 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತ್ತು ಪಕ್ಷೇತರರು ಸೇರಿ 904 ಮಂದಿ ಕಣದಲ್ಲಿದ್ದಾರೆ. ಪ.ಬಂಗಾಳದ 9 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು, ಪ.ಬಂಗಾಳದ ವಿವಿಧ ಪ್ರದೇಶಗಳಲ್ಲಿ ಹಿಂಸಾಚಾರ ಮತ್ತು ಉದ್ವಿಗ್ನತೆ ನಡೆದಿದೆ.

ಕೋಲ್ಕತ್ತಾ ಬಳಿಯ ಜಾದವ್‌ಪುರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಭಾಂಗಾರ್‌ನ ಸತುಲಿಯಾ ಪ್ರದೇಶದಲ್ಲಿ ಇಂಡಿಯನ್ ಸೆಕ್ಯುಲರ್ ಫ್ರಂಟ್(ಐಎಸ್‌ಎಫ್) ಮತ್ತು ಸಿಪಿಐ(ಎಂ) ಬೆಂಬಲಿಗರ ನಡುವೆ ಘರ್ಷಣೆಗಳು ನಡೆದಿದೆ. ಕಚ್ಚಾ ಬಾಂಬ್‌ ಗಳನ್ನು ಎಸೆದಿರುವ ಪರಿಣಾಮ ಹಲವರು ಗಾಯಗೊಂಡಿದ್ದಾರೆ.

ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿಯಲ್ಲಿ, ಆಕ್ರೋಶಿತ ಜನಸಮೂಹವು ಮತಗಟ್ಟೆಗಳಿಗೆ ಬಲವಂತವಾಗಿ ನುಗ್ಗಿ, ಎಲೆಕ್ಟ್ರಾನಿಕ್ ಮತಯಂತ್ರವನ್ನು(ಇವಿಎಂ) ಮತ್ತು ವಿವಿಪ್ಯಾಟ್‌ ಮೆಷಿನ್‌ ತೆಗೆದುಕೊಂಡು ಪಕ್ಕದ ಕೊಳಕ್ಕೆ ಎಸೆದಿದ್ದಾರೆ. ಕೆಲವು ಮತಗಟ್ಟೆ ಏಜೆಂಟರನ್ನು ಬೂತ್‌ಗಳಿಗೆ ಪ್ರವೇಶಿಸದಂತೆ ನಿರ್ಬಂಧಿಸಿದ ನಂತರ ಈ ಘಟನೆ ಸಂಭವಿಸಿದೆ. ಈ ಕುರಿತು ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಸೆಕ್ಟರ್‌ನ ಎಲ್ಲಾ ಆರು ಬೂತ್‌ಗಳಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ ಮತ್ತು ಹೊಸ ಇವಿಎಂಗಳನ್ನು ಸೆಕ್ಟರ್ ಅಧಿಕಾರಿಗೆ ಒದಗಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶುಕ್ರವಾರ ತಡರಾತ್ರಿ ಬಸಿರ್‌ಹತ್ ಲೋಕಸಭೆ ವ್ಯಾಪ್ತಿಯ ಸಂದೇಶ್‌ಖಾಲಿಯಲ್ಲಿ ಉದ್ವಿಗ್ನತೆ ಉಂಟಾಗಿದೆ. ಸ್ಥಳೀಯ ಮಹಿಳೆಯರು ಬಿದಿರಿನ ಕೋಲುಗಳನ್ನು ಹಿಡಿದುಕೊಂಡು ತೃಣಮೂಲ ಕಾಂಗ್ರೆಸ್  ಕಾರ್ಯಕರ್ತರು ಮತ್ತು ಪೊಲೀಸರ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಇಟ್ಖೋಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟಿಎಂಸಿ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆಗಳು ನಡೆದಿದ್ದರಿಂದ, ದಕ್ಷಿಣ 24 ಪರಗಣ ಜಿಲ್ಲೆಯ ಕ್ಯಾನಿಂಗ್‌ನಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದ್ದು, ಮಾಧ್ಯಮದ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಪ್ರತಿಭಟನೆಯ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತದಾರರನ್ನು ಬೆದರಿಸಲು ಪಕ್ಷದ ಗೂಂಡಾಗಳು ಮತ್ತು ರಾಜ್ಯ ಪೊಲೀಸರನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾಂಗಾರ್‌ನಲ್ಲಿ ಟಿಎಂಸಿ ಮತ್ತು ಆಲ್ ಇಂಡಿಯಾ ಸೆಕ್ಯುಲರ್ ಫ್ರಂಟ್ (ಎಐಎಸ್‌ಎಫ್) ಕಾರ್ಯಕರ್ತರ ನಡುವಿನ ಘರ್ಷಣೆ ನಡೆದಿದೆ, ಈ ವೇಳೆ ಎಐಎಸ್‌ಎಫ್ ಮಹಿಳಾ ಕಾರ್ಯಕರ್ತೆ ಗಾಯಗೊಂಡಿದ್ದಾರೆ. ದುಷ್ಕರ್ಮಿಗಳು ಎಐಎಸ್‌ಎಫ್ ಅಭ್ಯರ್ಥಿ ನೂರ್ ಆಲಂ ಖಾನ್ ಅವರ ವಾಹನವನ್ನು ಧ್ವಂಸಗೊಳಿಸಿದ್ದಾರೆ.

ದಮ್‌ದಮ್‌, ಬರಾಸತ್, ಬಸಿರ್ಹತ್, ಜಯನಗರ, ಮಥುರಾಪುರ, ಡೈಮಂದ್ ಹಾರ್ಬರ್, ಜಾದವ್‌ಪುರ, ಕೋಲ್ಕತ್ತಾ ದಕ್ಷಿಣ ಮತ್ತು ಕೋಲ್ಕತ್ತಾ ಉತ್ತರ ಸೇರಿದಂತೆ ಪಶ್ಚಿಮ ಬಂಗಾಳದ ಒಂಬತ್ತು ಲೋಕಸಭಾ ಸ್ಥಾನಗಳಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳ ಅಡಿಯಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದೆ, ಆದರೂ ಹಲವೆಡೆ ಹಿಂಸಾಚಾರ ವರದಿಯಾಗಿರುವುದು ವಿಪರ್ಯಾಸವಾಗಿದೆ.

ಇದನ್ನು ಓದಿ: ಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಹರೀಶ್ ಪೂಂಜಾರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...