Homeದಲಿತ್ ಫೈಲ್ಸ್ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ಲಿಂಗಾಯತ ಸಮುದಾಯದ ಪ್ರಾಬಲ್ಯವಿರುವ ಊರಿನಲ್ಲಿ ದಲಿತರ ದೇವಾಸ್ಥಾನ ಪ್ರವೇಶ ಕೂಡ ನಿಷೇಧಿಸಲಾಗಿದೆ.

- Advertisement -
- Advertisement -

ತನ್ನ ಸ್ನೇಹಿತನೊಡನೆ ಊರಿನ ಸಾರ್ವಜನಿಕ ರಸ್ತೆಯಲ್ಲಿ ಬೈಕ್‌ನಲ್ಲಿ ಸಂಚರಿಸಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕವಾಗಿ ಥಳಿಸಿಲಾಗಿದೆ. ದಲಿತರ ವಿರುದ್ಧ ಜಾತಿನಿಂದನೆ ಮಾಡಿ ಬಹಿರಂಗ ಅಸ್ಪೃಶ್ಯತೆ ಆಚರಿಸಿರುವ ಆಘಾತಕಾರಿ ಘಟನೆ ಮೈಸೂರು ಜಿಲ್ಲೆಯ ಎಚ್‌.ಡಿ ಕೋಟೆ ತಾಲ್ಲೂಕಿನ ಅಣ್ಣೂರು-ಹೊಸಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಊರಿನ ಪರಿಶಿಷ್ಟ ಜಾತಿಗೆ ಸೇರಿದ 29 ವರ್ಷದ ಮಹೇಶ್ ಎಂಬ ಯುವಕನು ತನ್ನ ಸ್ನೇಹತ ಸುರೇಶ್ ಎಂಬುವವರ ಜೊತೆ ಊರಿನ ಸಾರ್ವಜನಿಕ ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದರು. ಲಿಂಗಾಯತ ಸಮುದಾಯದ ಪ್ರಾಬಲ್ಯವಿರುವ ಊರಿನ ಕೆಲವರು ಈ ರಸ್ತೆಯಲ್ಲಿ ದಲಿತರು ಬರಬೇಡಿ ಎಂದು ತಾಕೀತು ಮಾಡಿದ್ದಾರೆ. ಈ ರಸ್ತೆಯಲ್ಲಿ ಏಕೆ ಬರಬಾರದು? ಬೇರೆ ಯಾವ ರಸ್ತೆಯಲ್ಲಿ ಹೋಗಬೇಕು ಎಂದು ಮಹೇಶ್ ಪ್ರಶ್ನಿಸಿದ್ದಕ್ಕೆ ಗುಂಪೊಂದು ಜಾತಿನಿಂದನೆ ಮಾಡಿ, ತೀವ್ರವಾಗಿ ಥಳಿಸಲಾಗಿದೆ.

ಈ ಕುರಿತು ಪ್ರಕರಣ ದಾಖಲಾಗಿದ್ದು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 11 ಜನರ ವಿರುದ್ದ ಎಸ್‌ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

5 ವರ್ಷದ ಹಿಂದೆ ದೇವಾಲಯ ಪ್ರವೇಶಕ್ಕೆ ತಡೆ

5 ವರ್ಷದ ಹಿಂದೆ ಊರಿನಲ್ಲಿ ಮಹಾದೇವ ದೇವಾಲಯ ನಿರ್ಮಾಣ ಕೆಲಸ ಆರಂಭವಾಗಿತ್ತು. ಸುಮಾರು 300 ಕುಟುಂಬಗಳು ಇರುವ ಊರಿನಲ್ಲಿ 40 ದಲಿತ ಕುಟುಂಬಗಳಿದ್ದು ದಲಿತರೂ ಸೇರಿದಂತೆ ಎಲ್ಲರೂ ದೇವಾಲಯ ನಿರ್ಮಾಣಕ್ಕೆ ಚಂದಾ ನೀಡಿದ್ದಾರೆ. ಆದರೆ ದೇವಾಲಯ ನಿರ್ಮಾಣವಾದ ನಂತರ ಲಿಂಗಾಯತ ಜಾತಿಯ ಮುಖಂಡರು ದಲಿತರು ದೇವಾಲಯ ಪ್ರವೇಶ ಮಾಡಬಾರದೆಂದು ತಾಕೀತು ಮಾಡಿದ್ದರು. ಆಗ ಕೆಲ ದಲಿತ ಯುವಕರು ಅದನ್ನು ಪ್ರಶ್ನಿಸಿದ್ದಾಗ ಜಗಳ ನಡೆದು ವಿವಾದವಾಗಿತ್ತು. ಅದು ಈಗ ದೇವಾಲಯವಿರುವ ರಸ್ತೆಯನ್ನು ಬಳಸಬೇಡಿ ಎನ್ನುವಷ್ಟರ ಮಟ್ಟಿಗೆ ಅಸ್ಪೃಶ್ಯತೆ ಆಚರಿಸಲಾಗುತ್ತಿದೆ ಎಂದು ಸಂತ್ರಸ್ತ ಮಹೇಶ್ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ನೋವು ತೋಡಿಕೊಂಡಿದ್ದಾರೆ.

ಇಂದಿಗೂ ಹಲವಾರು ಜನ ದಲಿತರು ಆ ರಸ್ತೆಯಲ್ಲಿ ಓಡಾಡುವುದಿಲ್ಲ. ಆದರೆ ನಾನು ಆ ರಸ್ತೆ ಬಳಸಬಾರದೆಂಬುದನ್ನು ಒಪ್ಪದೆ ರಸ್ತೆಯಲ್ಲಿ ಬಂದಿದ್ದಕ್ಕೆ ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆ ನಡೆದ ನಂತರ ಗ್ರಾಮಕ್ಕೆ ಎಸ್‌ಪಿ ಚೇತನ್, ಹುಣಸೂರು ಡಿವೈಎಸ್‌ಪಿ ರವಿಪ್ರಸಾದ್ ಭೇಟಿ ನೀಡಿದ್ದಾರೆ. ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸಂವಿಧಾನದ 17ನೇ ವಿಧಿಯು ಎಲ್ಲಾ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸುತ್ತದೆ. ದೇವಾಲಯ ಪ್ರವೇಶಕ್ಕೆ ನಿರಾಕರಣೆ, ಬಾವಿ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ತಡೆ, ಪ್ರಾರ್ಥನೆ ಮತ್ತು ಧಾರ್ಮಿಕ ವಿಧಿ-ವಿಧಾನಗಳನ್ನು ಆಚರಿಸುವುದರಲ್ಲಿ ತಾರತಮ್ಯವನ್ನು ನಿಷೇಧಿಸುತ್ತದೆ. ಈ ಆಚರಣೆಗೆಳು ಮುಂದುವರೆದರೆ ಅದನ್ನು ಅಸ್ಪೃಶ್ಯತೆ ಎಂದು ಪರಿಗಣಿಸುವುದು ಹಾಗೂ ಅದನ್ನು ಆಚರಿಸುವ ವ್ಯಕ್ತಿ ಆಪಾದಿತ ಎಂದು ಪರಿಗಣಿಸುವುದು ಹಾಗೂ ಅದನ್ನು ಅಲ್ಲಗಳೆಯುವ ಜವಾಬ್ದಾರಿಯನ್ನು ಆಪಾದಿತನ ಮೇಲೆ ಹೊರಿಸುವುದು ಕಾಯಿದೆಯ ಮುಖ್ಯ ಅಂಶವಾಗಿತ್ತು. ಆದರೆ ಶಿಕ್ಷೆಯ ಪ್ರಮಾಣ ಮುಂತಾದ ಹಲವು ನ್ಯೂನತೆಗಳಿಂದಾಗಿ ಕಾನೂನಿನಲ್ಲಿ ಬದಲಾವಣೆ ತರಬೇಕಾಯಿತು. ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟು (ದೌರ್ಜನ್ಯಗಳ ತಡೆ) ಕಾಯಿದೆ 1989 ಮತ್ತು 1995ರಲ್ಲಿ ಅದರಡಿ ರೂಪಿಸಲಾದ ನಿಯಮಗಳು ಜಾರಿಯಲ್ಲಿವೆ.


ಇದನ್ನೂ ಓದಿ; ಬಾವುಟಕ್ಕೆ ಬೆಂಕಿ ಇಟ್ಟವರನ್ನು ಶಿಕ್ಷಿಸಿ, ನಮ್ಮ ಧ್ವಜ ಹಿಡಿದ ಭುಜಗಳನ್ನು ರಕ್ಷಿಸಿ: ಡಾ.ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...