Homeಮುಖಪುಟಅಧಿಕಾರ ಕೇಂದ್ರದ ಅತ್ಯಾಪ್ತ ಹಿಮಾಚಲದ ವೀರಭದ್ರ ಸಿಂಗ್‌

ಅಧಿಕಾರ ಕೇಂದ್ರದ ಅತ್ಯಾಪ್ತ ಹಿಮಾಚಲದ ವೀರಭದ್ರ ಸಿಂಗ್‌

- Advertisement -
- Advertisement -

ಜುಲೈ 8 ರಂದು ನಿಧನರಾದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ತಮ್ಮ ಹೆಸರಿನಲ್ಲಿ ವಿಶಿಷ್ಟ ದಾಖಲೆಯನ್ನು ಹೊಂದಿದ್ದಾರೆ. ಇವರ ರಾಜಕೀಯದ ಆರಂಭದ ದಿನಗಳಿಂದಲೂ ಅಧಿಕಾರ ಒಲಿದು ಬಂದಿದೆ. ಯುವ ರಾಜಕಾರಣಿಯಾಗಿದ್ದಲೇ ವೀರಭದ್ರ ಸಿಂಗ್ ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದರು.

ಇಂದಿರಾಗಂಧಿ ಆಪ್ತರಲ್ಲಿ ಒಬ್ಬರಾಗಿದ್ದ ವೀರಭದ್ರ ಸಿಂಗ್ ಸತತ 6 ದಶಕಗಳ ಕಾಲ ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ಗೆ ಅತ್ಯಂತ ಆಪ್ತರಾಗಿಯೇ ಮುಂದುವರೆದಿದ್ದರು. 1976 ರಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ವಿಮಾನಯಾನ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಮಂತ್ರಿಯಾಗಿದ್ದ ವೀರಭದ್ರ ಸಿಂಗ್‌ ಮನಮೋಹನ್‌ ಸಿಂಗ್‌ ಪ್ರಧಾನಿಯಾದ  ಅವಧಿಯಲ್ಲೂ ಬಹು ಮಖ್ಯ ಖಾತೆಯನ್ನು ಹೊಂದಿದ್ದರು. ಕೇಂದ್ರದಲ್ಲಿ 4 ಸಾರಿ ಮಂತ್ರಿ ರಾಜ್ಯದಲ್ಲಿ 6 ಸಾರಿ ಮುಖ್ಯಮಂತ್ರಿ, 9 ಅವಧಿಗೆ ಶಾಸಕ, 5 ಅವಧಿಗೆ ಸಂಸದ ಭಾರತ ರಾಜಕೀಯದಲ್ಲಿ ಇಂದೊಂದು ದಾಖಲೆಯಾಗಿ ಉಳಿದಿದೆ. 1971 ರಲ್ಲಿ ಹಿಮಾಚಲ ಪ್ರದೇಶ ಸ್ಥಾಪನೆಯಾದಾಗಿನಿಂದ ಇದುವರೆ ವೀರಭಧ್ರ ಸಿಂಗ್‌ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿದ್ದ ದಾಖಲೆಯನ್ನು ಹೊಂದಿದ್ದರು. ಹಿಮಾಚಲದಲ್ಲಿ ಅವರನ್ನು ರಾಜಾ ಸಾಹೇಬ್ ಎಂದೇ ಕರೆಯುತ್ತಿದ್ದುದು ವಿಶೇಷ.

ಕೊನೆಗೆ ತಾವು ಕೊನೆಯುಸಿರೆಳೆಯುವ ದಿನದಲ್ಲೂ ವೀರಭದ್ರ ಸಿಂಗ್ ಹಿಮಾಚಲ ಪ್ರದೇಶ ವಿಧಾನಸಭೆ ಸದಸ್ಯರಾಗಿದ್ರು ಎಂಬುದು ವಿಶೇಷ.1962ರ ಲೋಕಸಭೆ ಚುನಾವಣೆಯಿಂದ 2017ರ ಚುನಾವಣೆಯ ನಡುವಿನ ಅವಧಿಯಲ್ಲಿ ವೀರಭದ್ರ ಸಿಂಗ್ ಭಾರತ ರಾಜಕೀಯ ಮತ್ತು ಹಿಮಾಚಲ ಪ್ರದೇಶದ ರಾಜಕೀಯದಲ್ಲಿ ವಿಶೇಷ ಛಾಪನ್ನು ಒತ್ತಿಹೋಗಿದ್ದಾರೆ.

ವೀರಭದ್ರ ಸಿಂಗ್ ಪತ್ನಿ ಪ್ರತಿಭಾ ಸಿಂಗ್ ಹಾಗೂ ಪುತ್ರ ವಿಕ್ರಮಾದಿತ್ಯ ಸಿಂಗ್‌ ಕೂಡ ರಾಜಕಾರಣಿಗಳಾಗಿದ್ದಾರೆ. ಪ್ರತಿಭಾ ಅವರು ಹಿಂದೆ ಲೋಕಸಭೆ ಸದಸ್ಯರಾಗಿದ್ರು, ವಿಕ್ರಮಾದಿತ್ಯ ಸಿಂಗ್ ಶಿಮ್ಲಾ ಗ್ರಾಮೀಣ ಕ್ಷೇತದ ಶಾಸಕರಾಗಿದ್ದಾರೆ.

ಸಿಂಗ್‌ ಕುಟುಂಬ ಜೂನ್‌ 23 ರಂದು ವೀರಭದ್ರ ಸಿಂಗ್ ಅವರ 87 ನೇ ಹುಟ್ಟಿದ ದಿನವನ್ನು ಆಚರಿಸಿತ್ತು. ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯ ಬೆಂಬಲಿಗರು ನೆರೆದಿದ್ದರು. 1983 ರಿಂದ 2012 ರ ಅವಧಿಯಲ್ಲಿ ವೀರಭದ್ರ ಸಿಂಗ್ 6 ಭಾರಿ ಹಿಮಾಚಲ ಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಇಂದಿರಾ ಗಾಂಧಿ ಪ್ರಧಾನಿಯಾದ ಕಾಲದಿಂದ ಮನಮೋಹನ್‌ ಸಿಂಗ್ ಅವಧಿಯಲ್ಲಿ ಒಟ್ಟು 4 ಸಾರಿ ಕೇಂದ್ರ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. 65 ವರ್ಷಗಳ ತಮ್ಮ ರಾಜಕೀಯದ ಸುದೀರ್ಘ ಪ್ರಯಾಣದಲ್ಲಿ ಸುಮಾರು 50 ವರ್ಷಗಳ ಕಾಲ ವೀರಭದ್ರ ಸಿಂಗ್ ಮಂತ್ರಿಯಾಗಿ ಅಥವಾ ಮುಖ್ಯ ಮಂತ್ರಿಯಾಗಿ ಅಧಿಕಾರವನ್ನು ಹೊಂದಿದ್ದರೆಂಬುದು ವಿಶೇಷ.

2015 ರ ಅವಧಿಯಲ್ಲಿ ಭೃಷ್ಟಾಚಾರ ಮತ್ತು ಆದಾಯಕ್ಕು ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ವೀರಭದ್ರ ಸಿಂಗ್ ಹೆಸರು ತಳಕು ಹಾಕಿಕೊಂಡಿತ್ತು ಮತ್ತು ಸಿಬಿಐ ಈ ಸಂಬಂಧ ತನಿಖೆಯನ್ನು ಸಹ ನಡೆಸುತ್ತಿತ್ತು.

-ರಾಜೇಶ್ ಹೆಬ್ಬಾರ್

ಇದನ್ನೂ ಓದಿ: ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ, 3 ದಿನಗಳ ಶೋಕಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...