Homeಮುಖಪುಟಸಿಎಂ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕಲು ವೀರೇಂದ್ರ ಹೆಗಡೆ ಪತ್ರ ಬರೆದಿದ್ದಾರೆ: ಮಹೇಶ್ ತಿಮರೋಡಿ

ಸಿಎಂ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕಲು ವೀರೇಂದ್ರ ಹೆಗಡೆ ಪತ್ರ ಬರೆದಿದ್ದಾರೆ: ಮಹೇಶ್ ತಿಮರೋಡಿ

ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಜುಲೈ 17 ರಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಒಡನಾಡಿ ಸಂಸ್ಥೆ ತೀರ್ಮಾನಿಸಿದೆ.

- Advertisement -
- Advertisement -

2012ರ ಅಕ್ಟೋಬರ್‌ 9ರಂದು ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹೋರಾಟ ಮತ್ತೆ ಭುಗಿಲೆದ್ದಿದೆ. ಸೌಜನ್ಯಗೆ ನ್ಯಾಯ ಸಿಗಬೇಕು. ದುರುಳ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯ ಜೋರಾದ ಕೂಡಲೇ ಸಿಎಂ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕಲು ಅವರಿಗೆ ವೀರೇಂದ್ರ ಹೆಗಡೆ ಪತ್ರ ಬರೆದಿದ್ದಾರೆ ಎಂದು ಹೋರಾಟಗಾರ ಮಹೇಶ್ ತಿಮರೋಡಿ ಆರೋಪಿಸಿದ್ದಾರೆ.

ಜಲದರ್ಶಿನಿ ಅತಿಥಿಗೃಹದಲ್ಲಿ ಒಡನಾಡಿ ಸೇವಾ ಸಂಸ್ಥೆ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸೌಜನ್ಯ ಪ್ರಕರಣ ಮತ್ತೆ ಮುನ್ನೆಲೆಗೆ ಬರುತ್ತಿದ್ದಂತೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೆಂದ್ರ ಹೆಗ್ಡೆ ಅವರು ಶಕ್ತಿಯೋಜನೆಯನ್ನು ಹೊಗಳುವ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣದಲ್ಲಿ ತಲೆಹಾಕದಂತೆ ಕಟ್ಟಿಹಾಕುವ ಉದ್ದೇಶದಿಂದ ಅವರಿಗೆ ಪತ್ರ ಬರೆದಿದ್ದಾರೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಇವರ ಮಾತಿಗೆ ಮರುಳಾಗದೇ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಆದೇಶ ಮಾಡುವ ಮೂಲಕ ಧರ್ಮಸ್ಥಳದಲ್ಲಿ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಧರ್ಮಸ್ಥದಲ್ಲಿ ಸೌಜನ್ಯ ಪ್ರಕರಣದಂತಹ ನೂರಾರು ಕೊಲೆ, ಅತ್ಯಾಚಾರಗಳು ನಡೆದು ಬೆಳಕಿಗೆ ಬಾರದೆ ಕತ್ತಲಲ್ಲೇ ಕರಗಿ ಹೋಗಿವೆ. ಇಂತಹ ಪ್ರಕರಣಗಳು ಮರುಕಳಿಸುತ್ತಿರುವುದು ರಾಜ್ಯದ ಜನರು ತಲೆ ತಗ್ಗಿಸುವಂತ ವಿಚಾರ.  ಧರ್ಮಸ್ಥಳದಲ್ಲಿ ಸೌಜನ್ಯ ಪ್ರಕರಣದಂತೆ, ಪದ್ಮ, ನೇತ್ರಾವತಿಯಂತಹ ನೂರಾರು ಹಿಂದೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆದಾಗ ಈ ನಕಲಿ ಹಿಂದುತ್ವಾದಿಗಳಾದ ಬಜರಂಗದಳ, ವಿಶ್ವಹಿಂದೂ ಪರಿಷತ್, ಆರೆಸ್‍ಎಸ್ ಸಂಘಟನೆಗಳು ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಲೇ ಇಲ್ಲ. ಇವರೆಲ್ಲ ಬಾಡಿಗೆ ಹೋರಾಟಗಾರರು ಎಂದು ಮಹೇಶ್ ಶೆಟ್ಟಿ ಆರೋಪಿಸಿದ್ದಾರೆ.

ಒತ್ತಾಯಿಸಿ ಜುಲೈ 17 ರಂದು ಮೈಸೂರಿನಲ್ಲಿ ಪ್ರತಿಭಟನೆ

ಸೌಜನ್ಯ ಕೊಲೆ ಪ್ರಕರಣದ ಮರುತನಿಖೆ ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಜುಲೈ 17 ರಂದು ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಿಂದ ಗಾಂಧಿವೃತ್ತದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ ತಿಳಿಸಿದ್ದಾರೆ.

“ಸೌಜನ್ಯ ಪ್ರಕರಣಕ್ಕೆ ನ್ಯಾಯ ಸಿಗುವಂತೆ ಜನರಲ್ಲಿ ಹೇಗೆ ಜಾಗೃತ ಮೂಡಿಸಬೇಕು ಎಂಬ ವಿಚಾರವಾಗಿ ಈ ಹಿಂದಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಅದರ ಭಾಗವಾಗಿ ಈ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ” ಎಂದರು.

ಹಲವಾರು ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನೆಡಸಲಾಗುತ್ತಿದೆ. ಧರ್ಮಸ್ಥಳದಲ್ಲಿ ನಡೆಯುತ್ತಿರುವ ದೌರ್ಜನ್ಯಗಳು, ಅತ್ಯಾಚಾರಗಳು ಮತ್ತೆ ಮರುಕಳಿಸದಂತೆ ತಡೆಯಲು ಈ ಹೋರಾಟ ಅತ್ಯವಶ್ಯಕ ಎಂದು ಅವರು ಹೇಳಿದ್ದಾರೆ.

ಎಂ.ಎಲ್ ಪರಶುರಾಂ ಮಾತನಾಡಿ, ಸೌಜನ್ಯ ಪ್ರಕರಣದಲ್ಲಿ ಸಂತೋಷ್ ರಾವ್ ಎಂಬ ವ್ಯಕ್ತಿಯನ್ನು ಅಪರಾಧಿ ಎಂದು ಸುಳ್ಳು ಪ್ರಕರಣ ದಾಖಲಿಸಿ ಆರುವರೆ ವರ್ಷಗಳ ಕಾಲ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ. ಆದರೆ ಸಿಬಿಐ ಕೋರ್ಟ್ ಆತನನ್ನು ನಿರಪರಾಧಿ ಎಂದು ಬಿಡುಗಡೆ ಮಾಡಿದೆ. ಅಧಿಕಾರಿಗಳು ಕೊಟ್ಟಿರುವ ಸಾಕ್ಷಿಗಳು ಹಾಗೂ ವೈದ್ಯರು ನೀಡಿರುವ ಡಿಎನ್‍ಎ ವರದಿಗಳು ಹೊಲಿಕೆಯಾಗುತ್ತಿಲ್ಲ ಎಂದು ಹೇಳಿದ್ದು, ನೈಜ ಆರೋಪಿಗಳ ತನಿಖೆ ಮಾಡುವಂತೆ ಆದೇಶವನ್ನೂ ನೀಡಿದೆ. ಅದರಂತೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಈ ಸೌಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಜೆಡಿಎಸ್ ಜೊತೆ ಹೊಂದಾಣಿಕೆಯ ಪ್ರಸ್ತಾಪವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...