Homeಮುಖಪುಟವೀಸಾ ವಂಚನೆ: ಭಾರತೀಯ ವಿದ್ಯಾರ್ಥಿಗಳಿಗೆ ನಿಷೇಧ ಹೇರಿದ ಆಸ್ಟ್ರೇಲಿಯಾದ ಎರಡು ವಿಶ್ವವಿದ್ಯಾಲಯಗಳು

ವೀಸಾ ವಂಚನೆ: ಭಾರತೀಯ ವಿದ್ಯಾರ್ಥಿಗಳಿಗೆ ನಿಷೇಧ ಹೇರಿದ ಆಸ್ಟ್ರೇಲಿಯಾದ ಎರಡು ವಿಶ್ವವಿದ್ಯಾಲಯಗಳು

- Advertisement -
- Advertisement -

ಭಾರತೀಯ ವಿದ್ಯಾರ್ಥಿಗಳ ವೀಸಾ ವಂಚನೆಯ ಬಗ್ಗೆ ಆಸ್ಟ್ರೇಲಿಯಾದ ಸರ್ಕಾರವು ಕಳವಳ ವ್ಯಕ್ತಪಡಿಸಿದ ನಂತರ ಅಲ್ಲಿಯ ಇನ್ನೂ ಎರಡು ವಿಶ್ವವಿದ್ಯಾಲಯಗಳು ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಕೆಲವು ರಾಜ್ಯಗಳ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳುವುದಕ್ಕೆ ನಿಷೇಧ ಹೇರಿವೆ ಎಂದು ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.

ವಿಕ್ಟೋರಿಯಾದಲ್ಲಿನ ಫೆಡರೇಶನ್ ವಿಶ್ವವಿದ್ಯಾನಿಲಯ ಮತ್ತು ನ್ಯೂ ಸೌತ್ ವೇಲ್ಸ್‌ನ ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾನಿಲಯವು ಈ ನಿರ್ಧಾರವನ್ನು ತೆಗೆದುಕೊಂಡಿವೆ. ಆಸ್ಟ್ರೇಲಿಯಾದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಅರ್ಜಿಗಳನ್ನು ನಿರಾಕರಿಸಲಾಗುತ್ತಿದೆ. ಗೃಹ ವ್ಯವಹಾರಗಳ ಇಲಾಖೆಯ ಪ್ರಕಾರ, ಈಗ ನಾಲ್ಕು ಅರ್ಜಿಗಳಲ್ಲಿ ಒಂದು ನಕಲಿ ವೀಸಾ ಹೊಂದಿರುವವರದ್ದಾಗಿರುತ್ತದೆ ಎಂದು ಹೇಳಿದೆ.

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು, ಬುಧವಾರ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬೆನೀಸ್ ಅವರೊಂದಿಗೆ ಆಸ್ಟ್ರೇಲಿಯಾಕ್ಕೆ ಬರುವ ಭಾರತೀಯ ವಿದ್ಯಾರ್ಥಿಗಳು ಮತ್ತು ವ್ಯಾಪಾರ ಪ್ರಯಾಣವನ್ನು ಹೆಚ್ಚಿಸಲು ವಲಸೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ನಡುವೆ ಈ ಬೆಳವಣಿಗೆ ನಡೆದಿದೆ.

ಅಗ್ಗದ ದರದಲ್ಲಿ ವೃತ್ತಿಪರ ಶಿಕ್ಷಣ ನೀಡುವುದಾಗಿ ವಿಶ್ವವಿದ್ಯಾನಿಲಯಗಳಿಂದ ವಿದ್ಯಾರ್ಥಿಗಳನ್ನು ಸಂಸ್ಥೆಗಳಿಗೆ ತೆರಳಲು ಪ್ರೇರಣೆಗಳನ್ನು ನೀಡುತ್ತಿರುವ ಶಿಕ್ಷಣ ಏಜೆಂಟ್‌ಗಳ ”ನಿರ್ಲಜ್ಜ ವರ್ತನೆ”ಯ ಬಗ್ಗೆ ತನಗೆ ತಿಳಿದಿದೆ ಎಂದು ಆಸ್ಟ್ರೇಲಿಯನ್ ಶಿಕ್ಷಣ ಇಲಾಖೆ ಹೇಳಿದೆ.

ಇದನ್ನೂ ಓದಿ: ನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳಿಗೆ ಸೇರಲು ಶಿಕ್ಷಣ ಏಜೆಂಟ್‌ಗಳು ಪ್ರಮುಖ ಸಾಧನವಾಗಿದೆ. ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಿಗೆ ಸೇರಿಸಲು ಪ್ರತಿ ವಿದ್ಯಾರ್ಥಿಯು ದಾಖಲಾತಿಗಳಿಗಾಗಿ ಏಜೆಂಟರ್‌ಗೆ ಸಾವಿರಾರು ಡಾಲರ್‌ಗಳ ಕಮಿಷನ್‌ಗಳನ್ನು ನೀಡುತ್ತಾರೆ.

ಫೆಡರೇಶನ್ ವಿಶ್ವವಿದ್ಯಾಲಯವು ಪಂಜಾಬ್, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ವಿದ್ಯಾರ್ಥಿಗಳನ್ನು ನೇಮಿಸಿಕೊಳ್ಳದಂತೆ ಏಜೆಂಟರಿಗೆ ನಿರ್ದೇಶನ ನೀಡಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಫೆಡರೇಶನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಜನರಲ್ಲಿ ನಾಲ್ಕನೇ ಒಂದು ಭಾಗದಷ್ಟು ಜನರು ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ. ಅವರಲ್ಲಿ ಎಷ್ಟು ವಿದ್ಯಾರ್ಥಿಗಳು ಭಾರತೀಯರು ಎಂಬುದು ಸ್ಪಷ್ಟವಾಗಿಲ್ಲ.

ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾನಿಲಯವು ಪಂಜಾಬ್, ಹರಿಯಾಣ ಮತ್ತು ಗುಜರಾತ್‌ನ ವಿದ್ಯಾರ್ಥಿಗಳ ನೇಮಕಾತಿಯನ್ನು ನಿಲ್ಲಿಸಿದೆ. 2022 ರಲ್ಲಿ ದಾಖಲಾದವರಲ್ಲಿ ಹೆಚ್ಚಿನ ಸಂಖ್ಯೆಯವರು ಹೊರಗುಳಿದಿದ್ದಾರೆ ಎಂದು ಹೇಳಿದೆ.

ಕಳೆದ ವಾರ, ಗೃಹ ವ್ಯವಹಾರಗಳ ಇಲಾಖೆಯು ಫೆಡರಲ್ ಸಂಸದೀಯ ವಿಚಾರಣೆಯ ಸಮಯದಲ್ಲಿ ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳು 2019ರಲ್ಲಿ, 12.5% ರಿಂದ 20.1% ಅರ್ಜಿಗಳನ್ನು ನಿರಾಕರಿಸುತ್ತಿವೆ ಎಂದು ಹೇಳಿತ್ತು. ಆದರೆ ಈಗ ಭಾರತದಿಂದ ಅರ್ಜಿಗಳ ನಿರಾಕರಣೆ ಪ್ರಮಾಣವು 24.3% ಆಗಿದೆ, ಇದು 2012 ರಿಂದ ಅತ್ಯಧಿಕವಾಗಿದೆ ಎಂದು ಹೇಳಿದೆ.

ಆಸ್ಟ್ರೇಲಿಯಾದ ಇಂಟರ್‌ನ್ಯಾಶನಲ್ ಎಜುಕೇಶನ್ ಅಸೋಸಿಯೇಷನ್‌ನ ಮುಖ್ಯ ಕಾರ್ಯನಿರ್ವಾಹಕ ಫಿಲ್ ಹನಿವುಡ್ ವಿಚಾರಣೆಯ ಸಮಯದಲ್ಲಿ, ”ಬೇರೆ ದೇಶಗಳ ಅನೇಕ ಪೋಷಕರು ತಮ್ಮ ಮಕ್ಕಳನ್ನು ವಿದೇಶಕ್ಕೆ ಕಳುಹಿಸಲು ಬಯಸುತ್ತಾರೆ ಮತ್ತು ಸಾಮಾನ್ಯವಾಗಿ ಶಿಕ್ಷಣ ಏಜೆಂಟ್‌ಗಳ ಸಹಾಯವನ್ನು ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.

ಕಳೆದ ತಿಂಗಳು, ನಾಲ್ಕು ವಿಶ್ವವಿದ್ಯಾನಿಲಯಗಳು ಪಂಜಾಬ್ ಮತ್ತು ಹರಿಯಾಣದಂತಹ ನಿರ್ದಿಷ್ಟ ಭಾರತೀಯ ರಾಜ್ಯಗಳಿಂದ ವಿದ್ಯಾರ್ಥಿಗಳ ದಾಖಲಾತಿಯನ್ನು ನಿಷೇಧಿಸಿವೆ ಎಂದು ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ. ಇತರ ಎರಡು ವಿಶ್ವವಿದ್ಯಾನಿಲಯಗಳು ದಾಖಲಾತಿಯನ್ನು ನಿಷೇಧಿಸಿವೆ ಆದರೆ ಯಾವುದೇ ನಿರ್ದಿಷ್ಟ ರಾಜ್ಯವನ್ನು ಉಲ್ಲೇಖಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...