Homeಮುಖಪುಟವಿಶಾಖಪಟ್ಟಣಂ: ಎಕ್ಸ್‌ಪ್ರೆಸ್ ರೈಲಿನ ಮೂರು ಎಸಿ ಕೋಚ್‌ನಲ್ಲಿ ಬೆಂಕಿ, ಯಾವುದೇ ಪ್ರಾಣಹಾನಿ ಇಲ್ಲ

ವಿಶಾಖಪಟ್ಟಣಂ: ಎಕ್ಸ್‌ಪ್ರೆಸ್ ರೈಲಿನ ಮೂರು ಎಸಿ ಕೋಚ್‌ನಲ್ಲಿ ಬೆಂಕಿ, ಯಾವುದೇ ಪ್ರಾಣಹಾನಿ ಇಲ್ಲ

- Advertisement -
- Advertisement -

ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಮೂರು ಹವಾನಿಯಂತ್ರಿತ ಕೋಚ್‌ಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊರ್ಬಾ-ವಿಶಾಖಪಟ್ಟಣಂ ಎಕ್ಸ್‌ಪ್ರೆಸ್‌ನಲ್ಲಿ (18517) ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಏಕೆಂದರೆ, ಬೆಂಕಿ ಹೊತ್ತಿಕೊಳ್ಳುವ ವೇಳೆಗೆ ಎಲ್ಲಾ ಪ್ರಯಾಣಿಕರು ಕೆಳಗೆ ಇಳಿದಿದ್ದರು. ರೈಲು ಬೆಳಿಗ್ಗೆ ಛತ್ತೀಸ್‌ಗಢದ ಕೊರ್ಬಾದಿಂದ ಪ್ಲಾಟ್‌ಫಾರ್ಮ್ ನಂಬರ್ ನಾಲ್ಕಕ್ಕೆ ಬಂದಿತ್ತು ಮತ್ತು ನಂತರ ತಿರುಪತಿಗೆ ಹೊರಡಬೇಕಿತ್ತು.

ಕೊರ್ಬಾ ಎಕ್ಸ್‌ಪ್ರೆಸ್ ಬೆಳಿಗ್ಗೆ 6.30 ಕ್ಕೆ ಆಗಮಿಸಿತು ಮತ್ತು ಕೋಚಿಂಗ್ ಡಿಪೋಗೆ ನಿರ್ವಹಣೆಗಾಗಿ ಹೋಗಬೇಕಾಗಿತ್ತು ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೈಲಿಗೆ ಬೀಗ ಹಾಕಲಾಗಿದ್ದು, ವಿದ್ಯುತ್ ಸ್ಥಗಿತಗೊಳಿಸಲಾಗಿದೆ ಎಂದರು.

ಬೆಳಗ್ಗೆ 9.20ರ ಸುಮಾರಿಗೆ ಬಿ7 ಬೋಗಿಯಲ್ಲಿ ಹೊಗೆ ಕಾಣಿಸಿಕೊಂಡಿರುವುದನ್ನು ಗಮನಿಸಿದ ರೈಲ್ವೇ ರಕ್ಷಣಾ ಪಡೆ ಸಿಬ್ಬಂದಿ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. “ಆಗ ಎಲ್ಲಾ ಪ್ರಯಾಣಿಕರು ರೈಲು ಬಂದ ನಂತರ ಅಲ್ಲಿಂದ ಇಳಿದಿದ್ದರು” ಎಂದು ಅಧಿಕಾರಿ ಹೇಳಿದರು.

ರೈಲ್ವೇ ಅಧಿಕಾರಿಗಳ ಪ್ರಕಾರ, ಬೆಂಕಿ ವೇಗವಾಗಿ ಪಕ್ಕದ ಬೋಗಿಗಳಿಗೆ ವ್ಯಾಪಿಸಿದೆ. ಬಿ7 ಕೋಚ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಿ6 ಮತ್ತು ಎಂ1 ಬೋಗಿಗಳು ಭಾಗಶಃ ಹಾನಿಗೊಳಗಾಗಿವೆ. ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದವು.

ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಜಂಟಿ ಪೊಲೀಸ್ ಆಯುಕ್ತ ಫಕೀರಪ್ಪ ತಿಳಿಸಿದ್ದಾರೆ. ಬೆಂಕಿಯ ಕಾರಣದ ಬಗ್ಗೆ ರೈಲ್ವೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

ಹಾನಿಗೊಳಗಾದ ಬೋಗಿಗಳನ್ನು ಹೊರತುಪಡಿಸಿ, ರೈಲ್ವೇ ಸಿಬ್ಬಂದಿ ನಿರ್ವಹಣೆಗಾಗಿ ರೈಲನ್ನು ಡಿಪೋಗೆ ಸ್ಥಳಾಂತರಿಸಿದರು. ವಿಶಾಖಪಟ್ಟಣಂ ಪೊಲೀಸ್ ಆಯುಕ್ತ ಶಂಕಬ್ರತ ಬಾಗ್ಚಿ ರೈಲು ನಿಲ್ದಾಣಕ್ಕೆ ಭೇಟಿ ನೀಡಿದರು. ಕೋಚ್‌ಗಳಲ್ಲಿ ದಹನಕಾರಿ ವಸ್ತುಗಳು ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲು ಸ್ವಲ್ಪ ಸಮಯ ತೆಗೆದುಕೊಂಡರು ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಇದನ್ನೂ ಓದಿ; ಶಿರೂರು ಭೂಕುಸಿತದಲ್ಲಿ ನಾಪತ್ತೆಯಾದ ಅರ್ಜುನ್ ಮನೆಗೆ ಭೇಟಿ ನೀಡಿದ ಸಿಎಂ ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...