Homeಮುಖಪುಟಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ ‘ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ’ ಉಂಟಾದ ಗಂಭೀರ ಹಿನ್ನಡೆ ಎಂದು ಕರೆದಿದೆ. ಅಲ್ಲದೆ, ಈ ಬೆಳವಣಿಗೆಯಿಂದ ಸ್ವಘೋಷಿತ ವಿಶ್ವಗುರು (ಮೋದಿ) ಸಂಪೂರ್ಣ ಬೆತ್ತಲಾಗಿದ್ದಾರೆ ಎಂದಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಮಾತನಾಡಿ, ಅಮೆರಿಕ ಮತ್ತು ಇಸ್ರೇಲ್ ಒಂದು ಕಡೆ ಹಾಗೂ ಇರಾನ್ ಇನ್ನೊಂದು ಕಡೆಯಾಗಿ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ, ಎರಡು ವಾರಗಳ ಕಾಲದ ಕದನ ವಿರಾಮವನ್ನು ಜಾಗತಿಕ ಸಮುದಾಯವು ಎಚ್ಚರಿಕೆಯಿಂದ ಸ್ವಾಗತಿಸಲಿದೆ ಎಂದು ತಿಳಿಸಿದ್ದಾರೆ.

ಇರಾನ್ ಆಡಳಿತದ ಉನ್ನತ ಮಟ್ಟದ ನಾಯಕರ ಉದ್ದೇಶಿತ ಹತ್ಯೆಗಳೊಂದಿಗೆ ಫೆಬ್ರವರಿ 28ರಂದು ಈ ಸಂಘರ್ಷ ಪ್ರಾರಂಭವಾಗಿತ್ತು. ಪ್ರಧಾನಿ ಮೋದಿಯವರು ಇಸ್ರೇಲ್‌ಗೆ ಕೈಗೊಂಡಿದ್ದ ಬಹು ಪ್ರಚಾರಿತ ಭೇಟಿ ಮುಗಿದ ಕೇವಲ ಎರಡು ದಿನಗಳ ನಂತರ ಇವು ಆರಂಭವಾಗಿದ್ದವು; ಈ ಭೇಟಿಯು ಭಾರತದ ಜಾಗತಿಕ ಘನತೆ ಮತ್ತು ಸ್ಥಾನಮಾನವನ್ನು ಕುಗ್ಗಿಸಿದೆ ಎಂದು ಜೈರಾಮ್ ರಮೇಶ್ ವಾಗ್ದಾಳಿ ನಡೆಸಿದ್ದಾರೆ.

ಇಸ್ರೇಲ್‌ನ ಕ್ರಮಗಳ ಬಗ್ಗೆ ಪ್ರಧಾನಿ ಮೋದಿಯವರು ಮೌನ ವಹಿಸಿರುವುದನ್ನು ಟೀಕಿಸಿ ರಮೇಶ್, ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಜನಾಂಗೀಯ ಹತ್ಯೆ ಮತ್ತು ಆಕ್ರಮಿತ ಪಶ್ಚಿಮ ದಂಡೆಯಲ್ಲಿ (ವೆಸ್ಟ್ ಬ್ಯಾಂಕ್) ಅದರ ಆಕ್ರಮಣಕಾರಿ ವಿಸ್ತರಣಾ ನೀತಿಗಳ ಬಗ್ಗೆ ಪ್ರಧಾನಿ ಮೋದಿ ಏನನ್ನೂ ಹೇಳಿಲ್ಲ ಎಂದು ದೂರಿದ್ದಾರೆ.

ಕದನ ವಿರಾಮ ಏರ್ಪಡಿಸುವಲ್ಲಿ ಪಾಕಿಸ್ತಾನ ವಹಿಸಿರುವ ಪಾತ್ರವು ಮೋದಿಯವರ ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಯ ಸಾರ ಮತ್ತು ಶೈಲಿ ಎರಡಕ್ಕೂ ಬಿದ್ದಿರುವ ಗಂಭೀರ ಹೊಡೆತವಾಗಿದೆ ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ನಿರಂತರ ಬೆಂಬಲ ನೀಡುತ್ತಿರುವ ಪಾಕಿಸ್ತಾನವನ್ನು ಒಂಟಿಯಾಗಿಸುವ ಮತ್ತು ಅದು ಒಂದು ವಿಫಲ ರಾಷ್ಟ್ರ ಎಂದು ಜಗತ್ತಿಗೆ ಮನವರಿಕೆ ಮಾಡುವ ನೀತಿಯು ಸ್ಪಷ್ಟವಾಗಿ ಯಶಸ್ವಿಯಾಗಿಲ್ಲ. ಮುಂಬೈ ಭಯೋತ್ಪಾದನಾ ದಾಳಿಯ ನಂತರ ಮನಮೋಹನ್ ಸಿಂಗ್ ಅವರು ಸಾಧಿಸಿದ ಯಶಸ್ಸಿನಂತೆ, ಈಗಿನ ಪ್ರಯತ್ನಗಳು ಫಲ ನೀಡಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಂಪೂರ್ಣವಾಗಿ ವಿದೇಶಿ ದಾನಿಗಳ ನೆರವು ಮತ್ತು ಔದಾರ್ಯದ ಮೇಲೆ ಅವಲಂಬಿತವಾಗಿರುವ ದಿವಾಳಿಯಾದ ಆರ್ಥಿಕತೆ ಹಾಗೂ ಹಲವು ರೀತಿಯಲ್ಲಿ ಜರ್ಜರಿತವಾಗಿರುವ ದೇಶವೊಂದು (ಪಾಕಿಸ್ತಾನ) ಇಂತಹ ಮಹತ್ವದ ಪಾತ್ರ ವಹಿಸಲು ಸಾಧ್ಯವಾಗಿದೆ ಎಂದರೆ, ಅದು ಮೋದಿಯವರ ರಾಜತಾಂತ್ರಿಕ ಕಾರ್ಯತಂತ್ರ ಮತ್ತು ಅವರು ಕಟ್ಟಿಕೊಟ್ಟಿದ್ದ ನಿರೂಪಣೆಗಳನ್ನು (ನರೇಟಿವ್) ಪ್ರಶ್ನಿಸುವಂತೆ ಮಾಡಿದೆ ಜೈರಾಮ್ ರಮೇಶ್ ಹೇಳಿದ್ದಾರೆ.

ಆಪರೇಷನ್ ಸಿಂದೂರ್ ಅನ್ನು ಮೇ 10, 2025 ರಂದು ಇದ್ದಕ್ಕಿದ್ದಂತೆ ಮತ್ತು ಅನಿರೀಕ್ಷಿತವಾಗಿ ಏಕೆ ನಿಲ್ಲಿಸಲಾಯಿತು ಎಂಬುವುದನ್ನು ಮೋದಿ ಅಥವಾ ಅವರ ತಂಡ ಎಂದಿಗೂ ವಿವರಿಸಿಲ್ಲ. ಇದರ ಮೊದಲ ಘೋಷಣೆಯು ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯಿಂದ ಬಂದಿತ್ತು ಮತ್ತು ಅಂದಿನಿಂದ ಅಮೆರಿಕ ಅಧ್ಯಕ್ಷರು ಸುಮಾರು ನೂರು ಬಾರಿ ಇದರ ಕೀರ್ತಿಯನ್ನು ತಾವೇ ಪಡೆದುಕೊಂಡಿದ್ದಾರೆ ಎಂದು ರಮೇಶ್ ಪುನರುಚ್ಚರಿಸಿದ್ದಾರೆ.

ಎಲ್ಲೆಡೆ ನಿಟ್ಟುಸಿರು ಬಿಡುವಂತಹ ನೆಮ್ಮದಿಯ ವಾತಾವರಣ ಗೋಚರಿಸುತ್ತಿದೆ. ವಿದೇಶಾಂಗ ಸಚಿವರು (ಎಸ್. ಜೈಶಂಕರ್) ಪಾಕಿಸ್ತಾನವನ್ನು ಒಬ್ಬ ‘ದಳ್ಳಾಳಿ’ ಎಂದು ತಳ್ಳಿಹಾಕಿದ್ದರು. ಆದರೆ, ಈಗ ಸ್ವಯಂ ಘೋಷಿತ ವಿಶ್ವಗುರು ಸಂಪೂರ್ಣವಾಗಿ ಅನಾವರಣಗೊಂಡಿದ್ದಾರೆ ಮತ್ತು ಅವರ 56 ಇಂಚಿನ ಎದೆ ಅಕ್ಷರಶಃ ಕುಗ್ಗಿ ಹೋಗಿದೆ ಎಂದು ರಮೇಶ್ ಟೀಕಿಸಿದ್ದಾರೆ.

ಪ್ರಧಾನಮಂತ್ರಿಯವರ ಮೌನವು ಅವರ ದೌರ್ಬಲ್ಯವನ್ನು ಪ್ರತಿಬಿಂಬಿಸುತ್ತದೆ. ಇಸ್ರೇಲ್‌ನ ಆಕ್ರಮಣಕಾರಿ ಧೋರಣೆಯ ಬಗ್ಗೆ ಮಾತ್ರವಲ್ಲದೆ, ವೈಟ್ ಹೌಸ್‌ನಲ್ಲಿರುವ (ಅಮೆರಿಕ ಅಧ್ಯಕ್ಷರು) ಅವರ ಪರಮಾಪ್ತ ಸ್ನೇಹಿತ ಬಳಸುತ್ತಿರುವ ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲದ ಮತ್ತು ಅವಮಾನಕರ ಭಾಷೆಯ ಬಗ್ಗೆಯೂ ಅವರು ಮೌನವಾಗಿರುವುದು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ ಎಂದು ಹರಿಹಾಯ್ದಿದ್ದಾರೆ.








ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...