Homeಮುಖಪುಟಲಖಿಂಪುರ್‌ ಭೇಟಿ: ರಾಹುಲ್‌ ಗಾಂಧಿಗೆ ಅನುಮತಿ ನೀಡಿ ಏರ್‌ಪೋರ್ಟ್‌ನಲ್ಲಿ ತಡೆದ ಆದಿತ್ಯನಾಥ್‌ ಸರ್ಕಾರ

ಲಖಿಂಪುರ್‌ ಭೇಟಿ: ರಾಹುಲ್‌ ಗಾಂಧಿಗೆ ಅನುಮತಿ ನೀಡಿ ಏರ್‌ಪೋರ್ಟ್‌ನಲ್ಲಿ ತಡೆದ ಆದಿತ್ಯನಾಥ್‌ ಸರ್ಕಾರ

ಸರ್ಕಾರಕ್ಕೆ ಇಷ್ಟೊಂದು ಭಯ ಯಾಕೆ? ಎಂದು ಅವರು ಕೇಳಿದ್ದಾರೆ

- Advertisement -
- Advertisement -

ರೈತರ ಹತ್ಯಾಕಾಂಡ ನಡೆದ ಲಖಿಂಪುರ್‌ ಗೆ ತೆರಳಲು ಮಧ್ಯಾಹ್ನ ಲಕ್ನೋಗೆ ತೆರಳಿದ್ದ ರಾಹುಲ್ ಗಾಂಧಿ ಅವರನ್ನು ವಿಮಾನ ನಿಲ್ದಾಣಲ್ಲಿ ತಡೆಯಲಾಗಿದೆ. ಭದ್ರತಾ ಸಿಬ್ಬಂದಿಗಳು ಅವರನ್ನು ಪೊಲೀಸ್‌ ಕಾರಿನಲ್ಲಿ ತೆರಳಲು ಕೇಳಿಕೊಂಡಿದ್ದು, ಇದಕ್ಕೆ ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. ನಂತರ ರಾಹುಲ್ ಗಾಂಧಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದು, ಕೊನೆಗೆ ಅವರದೆ ಸ್ವಂತ ಕಾರಿನಲ್ಲಿ ತೆರಳಲು ಅನುಮತಿ ನೀಡಲಾಗಿದೆ.

ಉತ್ತರ ಪ್ರದೇಶದ ಭದ್ರತಾ ಸಿಬ್ಬಂದಿಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನನ್ನ ಪ್ರಯಾಣ ವ್ಯವಸ್ಥೆ ಮಾಡಲು ನೀವು ಯಾರು? ನಾನು ನನ್ನ ಕಾರಿನಲ್ಲಿ ತೆರಳಲು ಬಯಸುತ್ತೇನೆ” ಹೇಳಿದ್ದಾರೆ.

“ಅವರು 100% ಏನೋ ಕಿಡಿಗೇಡಿ ಕ್ರಮಕ್ಕೆ ಹೊಂಚು ಹಾಕಿದ್ದಾರೆ” ಎಂದು ರಾಹುಲ್ ಗಾಂಧಿ ಸುದ್ದಿಗಾರರಿಗೆ ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

ಲಖಿಂಪುರಕ್ಕೆ ರಾಜಕೀಯ ನಾಯಕರ ಭೇಟಿಗೆ ಬಿಜೆಪಿ ಸರ್ಕಾರ ನಿರ್ಬಂಧಿಸಿತ್ತು ಮತ್ತು ಸೋಮವಾರದಂದು ಅಲ್ಲಿಗೆ ತೆರಳಿದ್ದ ಪ್ರಿಯಾಂಕ ಗಾಂಧಿ ಅವರನ್ನು ಗೃಹ ಬಂಧನದಲ್ಲಿ ಇಟ್ಟಿತ್ತು. ಇಂದು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ರಾಹುಲ್ ಗಾಂಧಿ ಅವರ ನಿಯೋಗಕ್ಕೆ ಲಖಿಂಪುರಕ್ಕೆ ತೆರಳಲು ಅನುಮತಿ ನೀಡಿದೆ.

ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಚನ್ನಿ, ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ವೇಣುಗೋಪಾಲ್‌ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ ಕೂತಿರುವ ಚಿತ್ರವನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಚಿತ್ರದಲ್ಲಿ ಕಾಂಗ್ರೆಸ್ ನಾಯಕರು ಸ್ಥಳವನ್ನು ಬಿಟ್ಟು ಮುಂದೆ ಬರದಂತೆ ಭದ್ರತಾ ಸಿಬ್ಬಂದಿ ಹಗ್ಗ ಹಿಡಿದು ಅಡ್ಡ ನಿಂತಿದ್ದಾರೆ. ಈ ಟ್ವೀಟ್‌ನಲ್ಲಿ, “ಇದು ಬಿಜೆಪಿ ಸರ್ಕಾರದ ‘ಅನುಮತಿ’. ಸರ್ಕಾರಕ್ಕೆ ಇಷ್ಟೊಂದು ಭಯ ಯಾಕೆ?” ಎಂದು ರಾಹುಲ್ ಗಾಂಧಿ ಬರೆದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

“ನನ್ನನ್ನು ಹೊರಡಲು ಬಿಡಿ, ಅವರು ನನ್ನನ್ನು ವಿಮಾನ ನಿಲ್ದಾಣದಿಂದ ಹೊರಡಲು ಬಿಡುತ್ತಿಲ್ಲ. ಇದನ್ನು ನೋಡಿ – ಇದು ಯಾವ ರೀತಿಯ ಅನುಮತಿ? ಯುಪಿ ಸರ್ಕಾರದ ‘ಅನುಮತಿ’ ಯ ಸ್ಥಿತಿಯನ್ನು ನೋಡಿ. ನಾನು ವಿಮಾನ ನಿಲ್ದಾಣವನ್ನು ತೊರೆಯಲು ಬಯಸುತ್ತಿದ್ದೇನೆ, ಆದರೆ ಅವರು ಅನುಮತಿಸುತ್ತಿಲ್ಲ. ಈ ದೃಶ್ಯವನ್ನು ಸರಿಯಾಗಿ ತೋರಿಸಿ” ಎಂದು ರಾಹುಲ್ ಗಾಂಧಿ ಮಾಧ್ಯಮದತ್ತ ತಿರುಗಿ ಹೇಳಿದ್ದಾರೆ.

“ನಾನು ಇಲ್ಲಿ 10 ದಿನಗಳೋ, 20 ದಿನಗಳೋ, ಎಷ್ಟಾದರೂ ಆಗಲಿ, ಇಲ್ಲೇ ಇರುತ್ತೇನೆ” ಎಂದು ಅವರು ಘೋಷಿಸಿದ್ದಾರೆ.

ಅಧಿಕಾರಿಗಳ ಜೊತೆಗೆ ರಾಹುಲ್ ಗಾಂಧಿ ವಾಗ್ವಾದ ನಡೆಸಿದ ನಂತರ, ಕೊನೆಗೆ ಅವರದೆ ಸ್ವಂತ ಕಾರಿನಲ್ಲಿ ತೆರಳಲು ಅನುಮತಿ ನೀಡಿದ್ದಾರೆ. ನಂತರ ವಿಮಾನ ನಿಲ್ದಾಣದಿಂದ ರಾಹುಲ್ ಗಾಂಧಿ ಲಿಖಿಂಪುರಕ್ಕೆ ತೆರಳಿದ್ದು, ಮೊದಲಿಗೆ ಸೋಮವಾರದಿಂದ ಬಂಧನದಲ್ಲಿದ್ದ ತನ್ನ ಸಹೊದರಿ ಪ್ರಿಯಾಂಕ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ.

ಇದನ್ನೂ ಓದಿ: RSS ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...