Homeಮುಖಪುಟಜೈಲಿನಲ್ಲಿ ಸಂದರ್ಶಕರ ಕೈಗೆ 'ಜೈ ಶ್ರೀ ರಾಮ್' ಮುದ್ರೆ ಹಾಕುತ್ತಿರುವ ಅಧಿಕಾರಿಗಳು!

ಜೈಲಿನಲ್ಲಿ ಸಂದರ್ಶಕರ ಕೈಗೆ ‘ಜೈ ಶ್ರೀ ರಾಮ್’ ಮುದ್ರೆ ಹಾಕುತ್ತಿರುವ ಅಧಿಕಾರಿಗಳು!

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ಆತಂಕಕಾರಿ ಬೆಳವಣಿಗೆ ನಡೆದಿದ್ದು, ಉತ್ತರಪ್ರದೇಶದ ಫರೂಕಾಬಾದ್‌ನಲ್ಲಿರುವ ಫತೇಘರ್ ಜೈಲಿನಲ್ಲಿ ಕೈದಿಗಳ ಸಂದರ್ಶಕರ ಕೈಗೆ  ‘ಜೈ ಶ್ರೀ ರಾಮ್’ ಎಂದು ಮುದ್ರೆ ಹಾಕಲಾಗುತ್ತಿದೆ, ಇದಲ್ಲದೆ ಜೈಲಿನಲ್ಲಿ ಭಜನೆ , ಕೀರ್ತನೆ, ರಾಮಯಾಣದ ಸುಂದರಕಾಂಡ ಪಠಣದಂತಹ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜೈಲಿನಲ್ಲಿ ವಿವಿಧ ಧರ್ಮದ ಕೈದಿಗಳಿದ್ದು, ಅವರ ಧಾರ್ಮಿಕ ಹಕ್ಕಿನ ಉಲ್ಲಂಘನೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಜೈಲು ಅಧೀಕ್ಷಕ ಭೀಮಸೇನ್ ಮುಕುಂದ್ ಅವರು ಮಾಹಿತಿಯನ್ನು ನೀಡಿದ್ದು, ಕೈದಿಗಳ ಭೇಟಿಗೆ ಆಗಮಿಸುವ ಸಂದರ್ಶಕರನ್ನು ಗುರುತಿಸಲು ಅವರ ಕೈಗಳಿಗೆ ಹಚ್ಚಲಾಗುತ್ತಿದ್ದ ಮಾಮೂಲಿ ಸ್ಟಾಂಪ್ ಮುದ್ರೆಯ ಬದಲಿಗೆ ಜೈಲಾಧಿಕಾರಿಗಳು ಕೇಸರಿ ಬಣ್ಣದ ಶಾಯಿಯಿಂದ ಬರೆದಿರುವ ‘ಜೈಶ್ರೀರಾಮ್’ ಮುದ್ರೆಯನ್ನು ಹಾಕಲಾಗುತ್ತಿದೆ. ಕಳೆದ ಒಂದು ವಾರದಿಂದ ಈ ಪದ್ದತಿ ಜಾರಿಯಲ್ಲಿದೆ ಎಂದು ಸ್ವತಃ ಜೈಲು ಅಧೀಕ್ಷಕ ಭೀಮಸೇನ್ ಮುಕುಂದ್ ಅವರು ಹೇಳಿದ್ದಾರೆ.

ಮುಕುಂದ್ ಜೈಶ್ರೀರಾಮ್‌ ಮುದ್ರೆಯನ್ನು ಹಾಕುತ್ತಿರುವುದನ್ನು ಸಮರ್ಥಿಸಿಕೊಂಡಿದ್ದು, ಕೈದಿಗಳ ಮನಪರಿವರ್ತನೆ ಪ್ರಯತ್ನಗಳ ಭಾಗವಾಗಿ ಜೈಲಿನಲ್ಲಿ ರಾಮಯಾಣದ ಸುಂದರಕಾಂಡ ಪಠಣದಂತಹ ಧಾರ್ಮಿಕ ವಿಧಿವಿಧಾನಗಳನ್ನು ಆಯೋಜಿಸಲಾಗುತ್ತಿದೆ ಮತ್ತು ‘ಒಂದು ಜಿಲ್ಲೆ, ಒಂದು ಉತ್ಪನ್ನ’ ಯೋಜನೆಯಡಿ ಬ್ಲಾಕ್ ಪ್ರಿಂಟಿಂಗ್ ತರಬೇತಿಯನ್ನು ನೀಡಲಾಗುತ್ತಿದೆ. ಹಿಂದೂ ಮತ್ತು ಮುಸ್ಲಿಂ ಕೈದಿಗಳು ಭಗವಾನ್ ರಾಮನ ಧ್ವಜಗಳನ್ನು ಬ್ಲಾಕ್ ಪ್ರಿಂಟ್ ಮಾಡುವಲ್ಲಿ ಸಹಕರಿಸುತ್ತಿದ್ದಾರೆ, ಇದನ್ನು ಸಂದರ್ಶಕರಿಗೆ ಉಡುಗೊರೆಯಾಗಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಭದ್ರತಾ ಕಾರಣಗಳಿಗಾಗಿ ನಾವು ಸ್ಟಾಂಪ್ ವಿನ್ಯಾಸವನ್ನು ಬದಲಾಯಿಸುತ್ತಲೇ ಇದ್ದೇವೆ. ನಾವು ಇಂತಹ ಮುದ್ರೆಗಳನ್ನು ಬಳಸುತ್ತಿರುವುದು ಇದೇ ಮೊದಲಲ್ಲ. ಹಬ್ಬದ ಸಮಯದಲ್ಲಿ ನಾವು ‘ಹ್ಯಾಪಿ ದೀಪಾವಳಿ’ ಮುದ್ರೆಗಳನ್ನು ಬಳಸಿದ್ದೇವೆ. ಒಬ್ಬ ಖೈದಿಯನ್ನು ಭೇಟಿಯಾಗಲು ಅವನ ಕುಟುಂಬದ ಸದಸ್ಯರು, ಸ್ನೇಹಿತರು ಅಥವಾ ಸಂಬಂಧಿಕರು ಬಂದಾಗ ಅವರ ಕೈಯಲ್ಲಿ ‘ಜೈ ಶ್ರೀ ರಾಮ್’ ಮುದ್ರೆಯನ್ನು ಹಾಕಲಾಗುತ್ತದೆ ಎಂದು ಹೇಳಿದ್ದಾರೆ.

ಇದಲ್ಲದೆ ಜ.22ರಂದು ಕಾರಾಗೃಹದಲ್ಲಿ ಕೈದಿಗಳಿಗೆ ಪ್ರಾಣ ಪ್ರತಿಷ್ಠಾನ ಸಮಾರಂಭವನ್ನು ನೇರವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಇದಕ್ಕಾಗಿ ಸ್ಥಳದಲ್ಲಿ ದೊಡ್ಡ ಟಿವಿ ಪರದೆಯ ವ್ಯವಸ್ಥೆಯನ್ನು ಮಾಡಲಾಗಿತ್ತು. ಜೈಲಿನೊಳಗೆ ಕೈದಿಗಳು ಸುಮಾರು ಒಂದು ವಾರ ಕಾಲ ಸುಂದರ ಕಾಂಡವನ್ನು ಪಠಿಸಿದ್ದಾರೆ. ಭಜನೆ ,ಕೀರ್ತನೆ, ಪ್ರಸಾರ ವಿತರಣೆ ಹಾಗೂ ಭೋಜನಕೂಟಗಳನ್ನು ಈ ಅವಧಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೈಲು ಅಧೀಕ್ಷಕ ಭೀಮಸೇನ್ ಮುಕುಂದ್ ಅವರು ಹೇಳಿದ್ದಾರೆ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆಯಂದು ಸಂವಿಧಾನದ ಪೀಠಿಕೆ ಹಂಚಿಕೊಂಡ ನಟ, ನಟಿಯರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: SIR ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತರು, ತಜ್ಞರ ಕಳವಳ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗದೊಳಗೆ ದಾಖಲಾಗಿರುವ ಭಿನ್ನಾಭಿಪ್ರಾಯಗಳು ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿವೆ. ದಿ ಇಂಡಿಯನ್ ಎಕ್ಸ್‌ಪ್ರೆಸ್  ನಡೆಸಿದ ತನಿಖಾ ವರದಿ ಪ್ರಕಾರ,...

ಚಲಿಸುವ ರೈಲಿನಲ್ಲಿ ಹಲ್ಲೆ ನಡೆಸಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯ: ಮುಸ್ಲಿಂ ಯುವಕನ ಆರೋಪ

ಮುಂಬೈಯಿಂದ ಉತ್ತರ ಪ್ರದೇಶಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮುಸ್ಲಿಂ ಯುವಕನೊಬ್ಬ ಆರೋಪಿಸಿದ್ದಾನೆ. ದಾಳಿಕೋರರು ತನ್ನ ಶರ್ಟ್ ಹರಿದು, ಥಳಿಸಿ, ಬಲವಂತವಾಗಿ "ಜೈ ಶ್ರೀ ರಾಮ್" ಎಂದು ಜಪಿಸುವಂತೆ...

ಫಾರ್ಮ್ 6 ರಲ್ಲಿನ ಬದಲಾವಣೆಗಳು ಕಾನೂನುಬಾಹಿರ; ಆಯೋಗದೊಳಗಿನ ಭಿನ್ನಾಭಿಪ್ರಾಯ ಗಂಭೀರ: ಮಾಜಿ ಸಿಇಸಿ ಓ.ಪಿ. ರಾವತ್

"ಶಾಸನಬದ್ಧ ಮತದಾರರ ನೋಂದಣಿ ಫಾರ್ಮ್ ನಂ 6 ರಲ್ಲಿ ಮಾಡಲಾದ ಬದಲಾವಣೆಗಳು ಸಂಪೂರ್ಣವಾಗಿ ತಪ್ಪು ಮತ್ತು ಕಾನೂನುಬಾಹಿರ" ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಓ.ಪಿ. ರಾವತ್ ತಿಳಿಸಿದ್ದಾರೆ. "ಚುನಾವಣಾ ಆಯೋಗದೊಳಗಿನ...

‘ಸಲ್ವಾರ್ ತೆಗೆಯಲು ಯತ್ನ, ಎದೆ ಒತ್ತುವುದು ಅತ್ಯಾಚಾರ ಯತ್ನವಲ್ಲವೇ?’: ಪಾಟ್ನಾ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಚಾಟಿ 

ನವದೆಹಲಿ: ಮಹಿಳೆಯ ಸಲ್ವಾರ್ ತೆಗೆಯಲು ಯತ್ನಿಸುವುದು ಮತ್ತು ಆಕೆಯ ಎದೆಯನ್ನು ಒತ್ತುವುದು ಸೇರಿದಂತೆ ಲೈಂಗಿಕ ದೌರ್ಜನ್ಯದ ಆರೋಪಗಳು ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪಾಟ್ನಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ...

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಜಾಗೊಳಿಸಿ; ಕೂಡಲೇ ಎಸ್‌ಐಆರ್ ನಿಲ್ಲಿಸಿ: ವಿಪಕ್ಷಗಳ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಇಬ್ಬರು ಚುನಾವಣಾ ಆಯುಕ್ತರು ಗಂಭೀರ ಕಳವಳ ವ್ಯಕ್ತಪಡಿಸಿರುವುದು ದೊಡ್ಡ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. "ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್...

‘ಸಹೋದರಿಯರು, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧ’: ಮುಸ್ಲಿಂ ಮಹಿಳೆಯರ ವಿರುದ್ಧ ಮಧ್ಯಪ್ರದೇಶ ಬಿಜೆಪಿ ಶಾಸಕನ ಅತ್ಯಾಚಾರ ಬೆದರಿಕೆ

ಭೋಪಾಲ್: ನವರಾತ್ರಿ ಸಂದರ್ಭದಲ್ಲಿ ನಡೆಯುವ ಗರ್ಬಾ ಕಾರ್ಯಕ್ರಮಗಳಿಗೆ ಮುಸ್ಲಿಂ ಯುವಕರು ಆಗಮಿಸುವುದನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶದ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ನೀಡಿರುವ ಹೇಳಿಕೆ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. “ಮುಸ್ಲಿಂ ಹುಡುಗರು ಮಾತ್ರ...

BWSSB ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಜಲಮಂಡಳಿ ಗುತ್ತಿಗೆ ಕಾರ್ಮಿಕರ ಸರಣಿ ಸಾವಿಗೆ ಆಕ್ರೋಶ, ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅಹೋರಾತ್ರಿ ಸುಗಮವಾಗಿ ನಿರ್ವಹಿಸುವ BWSSB ಜಲಮಂಡಳಿಯ ಸಾವಿರಾರು ಗುತ್ತಿಗೆ ಕಾರ್ಮಿಕರು ತಮ್ಮ ಜೀವಭದ್ರತೆ ಹಾಗೂ ಮೂಲಭೂತ ಹಕ್ಕುಗಳಿಗಾಗಿ ಆಗ್ರಹಿಸಿ ಇಂದು (ಸೆಪ್ಟೆಂಬರ್ 23)...

ಕೋಲ್ಕತ್ತಾ: ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಉಪಾಸನಾ ಚೌಧರಿ ಮನೆ ಮೇಲೆ ಕಲ್ಲುತೂರಾಟ, ಮಾಜಿ ಶಾಸಕ ಹುಮಾಯೂನ್ ಕಬೀರ್ ಮೇಲೂ ಹಲ್ಲೆ!

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮುಕುಂದಪುರದಲ್ಲಿ ಮಂಗಳವಾರ (ಸೆ. 22) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಘರ್ಷಣೆ ನಡೆದಿದೆ. ಘಟನೆಯಲ್ಲಿ ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಹಾಗೂ ವಕ್ತಾರೆ...

SIR ಏಕಪಕ್ಷೀಯ ತೀರ್ಮಾನ ಖಂಡಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರಿ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision – SIR / ವಿಶೇಷ...

‘ವಂದೇ ಮಾತರಂ’ ಹಾಡಲು ಬಾರದ ಬಿಜೆಪಿಗರಿಗೆ ಕೋರ್ಟ್ ಆದೇಶ ನೆಮ್ಮದಿ ತಂದಿದೆ: ಬಿ.ಕೆ. ಹರಿಪ್ರಸಾದ್ ವ್ಯಂಗ್ಯ

'ವಂದೇ ಮಾತರಂ' ಹಾಡದಿದ್ದರೆ ಒಬ್ಬ ವ್ಯಕ್ತಿಯನ್ನು ಅಪರಾಧಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂಬ ಸಂವಿಧಾನಾತ್ಮಕ ನಿಲುವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿರುವುದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸ್ವಾಗತಿಸಿದ್ದಾರೆ. ಧಾರ್ಮಿಕ...