Homeಕರ್ನಾಟಕಕರ್ನಾಟಕಕ್ಕೂ ಬಂತು ವಿಸ್ಟಾಡೋಮ್ ರೈಲು: ಮಂಗಳೂರು-ಬೆಂಗಳೂರು ನಡುವೆ ಮೊದಲ ಓಡಾಟ

ಕರ್ನಾಟಕಕ್ಕೂ ಬಂತು ವಿಸ್ಟಾಡೋಮ್ ರೈಲು: ಮಂಗಳೂರು-ಬೆಂಗಳೂರು ನಡುವೆ ಮೊದಲ ಓಡಾಟ

- Advertisement -
- Advertisement -

ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸಿರುವವರಿಗೆ ಅಲ್ಲಿನ ಪ್ರಕೃತಿ ಸೌಂದರ್ಯದ ಬಗ್ಗೆ ಹೇಳ ಬೇಕೆಂದಿಲ್ಲ. ಸಕಲೇಶಪುರ, ಮೂಡಿಗೆರೆ, ಸುಬ್ರಹ್ಮಣ್ಯ ವ್ಯಾಪ್ತಿಯ ಝರಿ ತೊರೆ ಗಿರಿ ಗಹ್ವರಗಳ ರುದ್ರ ರಮಣೀಯತೆಯೇ ಅಂತಹದ್ದು. ಪ್ರತಿವರ್ಷ ಪ್ರವಾಸಿಗರನ್ನು ಪಶ್ಚಿಮ ಘಟ್ಟದ ಈ ತಾಣ ತನ್ನತ್ತ ಕೈಬೀಸಿ ಕರೆಯುತ್ತದೆ.  ಪಶ್ಚಿಮ ಘಟ್ಟದ ವಿಶೇಷ ಪರಿಸರವನ್ನು ಸವಿಯಲಿಕ್ಕೆ ಈಗ ಹೊಸ ಹೊಸ ಸಾಧ್ಯತೆಗಳು ಆರಂಭವಾಗಿವೆ. ಪ್ರವಾಸೋದ್ಯಮವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಒಂದು ಹೊಸ ಪ್ರಯತ್ನಕ್ಕೆ ಕೈ ಹಾಕಿದೆ.

ಪಶ್ಚಿಮ ಘಟ್ಟದ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಇನ್ನು ಬೈಕ್ ಅಥವಾ ಕಾರಿನಲ್ಲಿಯೇ ತೆರಳ ಬೇಕೆಂದಿಲ್ಲ. ರೈಲಿನಲ್ಲಿ ಕೂಡ ಪ್ರವಾಸದ ಅದ್ಭುತ ಕ್ಷಣಗಳನ್ನು ಸವಿಯುವ ಅವಕಾಶ ಒದಗಿ ಬಂದಿದೆ. ರೈಲಿನಲ್ಲಿ ಪ್ರವಾಸ ಪಶ್ಚಿಮ ಘಟ್ಟ ಪ್ರವಾಸ ಏನಿದು ವಿಶೇಷ ಎಂಬ ಕುತೂಹಲವೇ?

ಹೌದು ರೈಲ್ವೆ ಇಲಖೆ ವಿಸ್ಟೊಡೋಮ್ ರೈಲ್ವೆ ಸೇವೆಯನ್ನು ಕರ್ನಾಟಕಕ್ಕೂ ವಿಸ್ತರಿಸಿದೆ. ಅದೂ ಮಂಗಳೂರು ಬೆಂಗಳೂರು ಮಾರ್ಗದಲ್ಲಿ. ವಿಸ್ಟೋಡಾಮ್ ಎಂಬ ಹೊಸ ಮಾದರಿಯ ರೈಲು ಈಗಾಗಲೇ ಡಾರ್ಜಿಲಿಂಗ್, ಶಿಮ್ಲಾ ಸೇರಿದಂತೆ ರಮ್ಯ ಮನೋಹರ ಪ್ರವಾಸಿ ತಾಣಗಳಲ್ಲಿ ಯಶಸ್ವಿಯಾಗಿ ಸಂಚರಿಸುತ್ತಿವೆ. ದಕ್ಷಿಣ ಭಾರತದಲ್ಲಿ ಇದುವರೆಗೆ ಇಂತಹ ರೈಲಿನ ವ್ಯವಸ್ಥೆ ಇದುವರೆಗೆ ಇರಲಿಲ್ಲ. ಮಂಗಳೂರು ಬೆಂಗಳೂರು ಮಾರ್ಗದಲ್ಲಿ ಈ ಹೊಸ ಮಾದರಿಯ ಪ್ರವಾಸಿ ವಶೇಷ ರೈಲಿನ ವ್ಯವಸ್ಥೆ ಭಾನುವಾರ ಆರಂಭವಾಗಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಜುಲೈ 11 ರ ಭಾನುವಾರದಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್‌ ನಿಲ್ಧಾಣದಲ್ಲಿ ಈ ರೈಲಿಗೆ ಹಸಿರು ನಿಶಾನೆಯನ್ನು ನೀಡಲಿದ್ದಾರೆ. ಈ ರೈಲು ವಾರದಲ್ಲಿ ಒಮ್ಮೆ ಮಂಗಳೂರು-ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ.

ವಿಸ್ಟಾಡೋಮ್ ಬೋಗಿಯ ವಿಶೇಷ 

ವಿಸ್ಟಾಡೋಮ್ ಬೋಗಿಗಳು ಸಂಪೂರ್ಣ ಪಾರದರ್ಶಕ ಗಾಜಿನಿಂದ ಮಾಡಲ್ಪಟ್ಟಿರುತ್ತವೆ. ವಿಶೇಷ ಪಾರದರ್ಶಕ ಗಾಜಿನ ಮೇಲ್ಛಾವಣಿ, ವಿಶೇಷ ಗಾಜಿನ ಕಿಟಕಿಗಳು, ಹೊರ ದೃಶ್ಯವನ್ನು ಬಿತ್ತರಿಸುವ ವಿಶೇಷ ಪರದೆ ಹೀಗೆ ಪ್ರಕೃತಿ ಸೌಂದರ್ಯವನ್ನು ಸವಿಯುವ ವಿಶೇಷ ವಿನ್ಯಾಸವನ್ನು ಹೊಂದಿದೆ. ವಿಸ್ಟಾಡೋಮ್  ಬೋಗಿಯಲ್ಲಿ ವಿಶೇಷ ಸಿಸಿಟಿವಿ, ಏಸಿ, ರೆಫ್ರಿಜಿರೇಟರ್‌, ಓವನ್, ಅಗ್ನಿಶಾಮಕ ಉಪಕರಣಗಳು, ಮೊಬೈಲ್ ಚಾರ್ಜಿಂಗ್ ಸಾಕೆಟ್, ಸ್ಟೀಲ್ ಲಗೇಜ್ ಕಪಾಟುಗಳು, ಮಿನಿ ಪ್ಯಾಂಟ್ರಿ, ಜೈವಿಕ ಶೌಚಾಲಯ ಸೇರಿದಂತೆ ಇನ್ನಿತರ ಅತ್ಯಾಧುನಿಕ ಸೌಲಭ್ಯ ಲಭ್ಯವಿದೆ.

ಸದ್ಯ ಬೆಂಗಳೂರು ಮಂಗಳೂರು ನಡುವಿನ ಯಶವಂತಪುರ ಎಕ್ಸ್‌ಪ್ರೆಸ್‌ ರೈಲಿಗೆ ಎರಡು ವಿಸ್ಟಾಡೋಮ್ ಬೋಗಿಗಳನ್ನು ಅಳವಡಿಸಲಾಗಿದ್ದು ಪ್ರತಿ ಬೋಗಿಯಲ್ಲಿ 44 ಜನರಿಗೆ ಪ್ರಯಾಣಿಸುವ ಅವಕಾಶವಿದೆ.

ಇದನ್ನೂ ಓದಿ: ಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...