Homeಮುಖಪುಟಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳಕ್ಕೆ ಯತ್ನ: ಬೆಂಗಳೂರಿನಲ್ಲಿ ನೂತನ ಪತ್ರಿಕೋದ್ಯಮ ಕಾಲೇಜು ಆರಂಭ

ಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳಕ್ಕೆ ಯತ್ನ: ಬೆಂಗಳೂರಿನಲ್ಲಿ ನೂತನ ಪತ್ರಿಕೋದ್ಯಮ ಕಾಲೇಜು ಆರಂಭ

- Advertisement -
- Advertisement -

ಶಿಕ್ಷಣದಿಂದ ವಂಚಿತರಾದ ಮತ್ತು ಶೋಷಿತ ಸಮುದಾಯಗಳ ಅಭಿವೃದ್ಧಿಗಾಗಿ ಕಳೆದ 30 ವರ್ಷಗಳಿಂದ ಕೆಲಸ ಮಾಡುತ್ತಿರುವ ವಿಸ್ತಾರ್‌ ಟ್ರಸ್ಟ್‌, ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ. ಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳ ಮತ್ತು ಮುಖ್ಯವಾಹಿನಿ ಮಾಧ್ಯಮಗಳ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರು ಹೆಚ್ಚಾಗುವಂತೆ ಮಾಡುವ ಪ್ರಯತ್ನಕ್ಕಾಗಿ ಬೆಂಗಳೂರಿನಲ್ಲಿ ‘ವಿಸ್ತಾರ್‌ ಕಾಲೇಜ್‌ ಆಫ್‌ ಆರ್ಟ್ಸ್‌ ಫಾರ್‌ ವುಮೆನ್ಸ್‌’ (VCAW) ಎಂಬ ನೂತನ ಪದವಿ ಕಾಲೇಜನ್ನು ಪ್ರಾರಂಭಿಸಿದೆ.

ವಿದ್ಯಾರ್ಥಿನಿಯರಿಗಾಗಿ ‘ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಾಗೂ ಇಂಗ್ಲಿಷ್‌’ ನಲ್ಲಿ ಪದವಿ ತರಗತಿಗಳು ಇದೇ ನವೆಂಬರ್ ತಿಂಗಳಿನಿಂದ ಆರಂಭವಾಗಲಿದೆ. ಬೆಂಗಳೂರು ನಗರದ ಹೊರವಲಯದ ಹೆಣ್ಣೂರು ರಸ್ತೆಯಲ್ಲಿರುವ ಗುಬ್ಬಿ ಕ್ಯಾಂಪಸ್‌ನಲ್ಲಿ ತರಗತಿಗಳು ಆರಂಭವಾಗಲಿವೆ. ಇಂಗ್ಲಿಷ್ ಭಾಷೆಯಲ್ಲಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ವಿಶೇಷ ಬ್ರಿಡ್ಜ್‌ಕೋರ್ಸ್ ಸಹ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ವಿಸ್ತಾರ್‌ ಟ್ರಸ್ಟ್‌ನ ಸಂಸ್ಥಾಪಕರು ಮತ್ತು ಕಾರ್ಯನಿರ್ವಾಹಕ ಟ್ರಸ್ಟಿಯಾದ ದೇವಿಡ್‌ ಸೆಲ್ವರಾಜ್‌, “ನೂತನ ಕಾಲೇಜಿನಲ್ಲಿ ಸಮರ್ಥ ಸಿಬ್ಬಂದಿ ಮತ್ತು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೋಧಿಸುವ ಸಹಾಯಕ ಪ್ರಾಧ್ಯಪಕರು ಇದ್ದಾರೆ. ವೃತ್ತಿನಿರತ ಪತ್ರಕರ್ತರು, ನೀತಿ ನಿರೂಪಕರು ಮತ್ತು ಸಾರ್ವಜನಿಕ ಬುದ್ಧಿಜೀವಿಗಳು ಸಹ ತರಗತಿಗಳನ್ನು ತೆಗೆದುಕೊಳ್ಳುತ್ತಾರೆ. ಇಲ್ಲಿನ ವಿದ್ಯಾರ್ಥಿಗಳಿಗೆ ಮುಖ್ಯವಾಹಿನಿ ಮತ್ತು ಪರ್ಯಾಯ ಮಾಧ್ಯಮಗಳಲ್ಲಿ ಇಂಟರ್ನ್‌ಶಿಪ್ ಮಾಡಲು ಮತ್ತು ಉದ್ಯೋಗ ಒದಗಿಸಲು ನೆರವು ನೀಡಲಾಗುತ್ತದೆ. ನೇರ ತರಗತಿ ಮತ್ತು ಆನ್‌ಲೈನ್ ಮೂಲಕ ಕಲಿಕೆ ಎರಡು ರೀತಿಯಲ್ಲಿ ಕಲಿಸುತ್ತಿದ್ದು, ಬೆಂಗಳೂರಿನಲ್ಲಿರುವ ಆರು ಎಕರೆ ವಿಶಾಲ ಕ್ಯಾಂಪಸ್‌ನಲ್ಲಿ ನೇರ ತರಗತಿಗಳು ನಡೆಯುತ್ತವೆ” ಎಂದಿದ್ದಾರೆ.

“ಸಾಮಾಜಿಕ ಬದ್ದತೆ ಹೊಂದಿರುವ ಪತ್ರಕರ್ತರಿಗೆ ಈ ಕೋರ್ಸ್‌ ಅನ್ನು ಅರ್ಪಿಸುತ್ತೇವೆ. ಈ ಸಂದರ್ಭದಲ್ಲಿ ನಮಗೆ ಗೌರಿ ಲಂಕೇಶ್‌ ಮತ್ತು ರಾಮನ್‌ ಕಶ್ಯಪ್‌ ನೆನಪಾಗುತ್ತಾರೆ. ಗೌರಿ ಕರ್ನಾಟಕದ ಪ್ರಸಿದ್ಧ ಪತ್ರಕರ್ತೆಯಾಗಿದ್ದರೆ ರಾಮನ್‌ ಲಖಿಂಪುರ್‌ ಖೇರಿಯಲ್ಲಿ ರೈತರ ಹೋರಾಟವನ್ನು ವರದಿ ಮಾಡುವಾಗ ಕೊಲೆಯಾದ ಪತ್ರಕರ್ತರಾಗಿದ್ದಾರೆ. ನಮ್ಮ ಕಾಲೇಜಿನ ಪ್ರಾರಂಭದ ಸಮಯದಲ್ಲಿಯೇ ಫಿಲಿಫೈನ್ಸ್‌ನ ಪತ್ರಕರ್ತೆ ಶ್ರೀಮತಿ ಮರಿಯಾ ರೆಸ್ಸಾ ಅವರಿಗೆ 2021ನೇ ಸಾಲಿನ ನೊಬೆಲ್‌ ಶಾಂತಿ ಪ್ರಶಸ್ತಿ ಲಭಿಸಿದೆ. ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ರಕ್ಷಿಸುವ ನಿಟ್ಟಿನಲ್ಲಿ ಅವರ ನಿರಂತರ ಬದ್ಧತೆಯ ಕೆಲಸವನ್ನು ನಾವು ಪ್ರಶಂಸಿಸುತ್ತೇವೆ” ಎಂದಿದ್ದಾರೆ.

“ಪ್ರಜಾಪ್ರಭುತ್ವ ಮೌಲ್ಯಗಳನ್ನು ಹೆಚ್ಚಿಸುವುದು ನಮ್ಮ ನೈತಿಕ ಹೊಣೆಗಾರಿಕೆ ಎಂದು ನಾವು ನಂಬುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಖಚಿತಪಡಿಸುವುದು ಅದರ ಒಂದು ಮಾರ್ಗವಾಗಿದೆ. ಮೂಲಭೂತ ಹಕ್ಕುಗಳು ಎಲ್ಲರಿಗೂ ಸಮಾನವಾಗಿ ಸಿಗುವಂತೆ ಮಾಡುವುದು ನಮ್ಮ ಯೋಜನೆಯ ಉದ್ದೇಶವಾಗಿದೆ” ಎಂದು ಅವರು ವಿವರಿಸಿದ್ದಾರೆ.

‘ಮಾಧ್ಯಮಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಅತಿ ಕಡಿಮೆ ಮಟ್ಟದಲ್ಲಿದೆ. ಮುಖ್ಯವಾಹಿನಿ ಮಾಧ್ಯಮಗಳ ಸಂಪಾದಕರ ಮತ್ತು ಮುಖ್ಯ ಹುದ್ದೆಗಳಲ್ಲಿ ಮಹಿಳೆಯರು ಇಲ್ಲವೇ ಇಲ್ಲ ಎನ್ನುವಷ್ಟು ಕಡಿಮೆ ಇದೆ. ಹಾಗಾಗಿ ಅಲ್ಲಿ ಲಿಂಗ ಸಮಾನತೆಯನ್ನು ಸಾಧಿಸುವುದು, ಅತ್ಯುತ್ತಮ ಶಿಕ್ಷಣ ನೀಡಿ, ಗುಣಮಟ್ಟದ ಮಹಿಳಾ ಪತ್ರಕರ್ತರನ್ನು ಸೃಷ್ಟಿಸುವುದು ನಮ್ಮ ಮೊದಲ ಉದ್ದೇಶವಾಗಿದೆ. ಮುಖ್ಯವಾಹಿನಿ ಮಾಧ್ಯಮಗಳಿಂದ ಹೊರಗುಳಿದಿರುವ ಜನಸಾಮಾನ್ಯರ, ಶೋಷಿತರ ಸಮಸ್ಯೆಗಳು, ಸಮಕಾಲೀನ ವಿಷಯಗಳು ಮುನ್ನೆಲೆಗೆ ಬರುವುದನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಎರಡನೆ ಉದ್ದೇಶ.  ತಳ ಸಮುದಾಯಗಳ ಯುವತಿಯರಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ಪಡೆಯಲು ಅನುವು ಮಾಡಿಕೊಡುವುದು ಮತ್ತು ಉದ್ಯೋಗದ ಸಾಧ್ಯತೆಗಳನ್ನು ವಿಸ್ತರಿಸುವುದು ನಮ್ಮ ಮೂರನೇ ಉದ್ದೇಶ. ಈ ವಿಷಯಗಳನ್ನು ಕೇಂದ್ರೀಕರಿಸಿ ಪದವಿ ಶಿಕ್ಷಣವನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

VCAW ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಮಾನ್ಯತೆ ಪಡೆದ ಸಂಸ್ಥೆಯಾಗಿದೆ. ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಸಂಯೋಜಿತವಾಗಿದೆ. ಈಗಾಗಲೇ ಪ್ರವೇಶಾತಿ ಪ್ರಕ್ರಿಯೆ ಅರಂಭವಾಗಿದ್ದು, ಹಲವು ಪರಿಣಿತ ಪತ್ರಕರ್ತರಿಂದ ತರಗತಿಗಳು ನಡೆಯಲಿವೆ. ಕನ್ನಡ ಭಾಷೆಗೆ ಮಹತ್ವ ನೀಡಿರುವ ಕಾಲೇಜು ಕನ್ನಡ ಪ್ರಾಧ್ಯಾಪಕರಾದ ನಾಗಮಣಿ ಶಿವಾರರನ್ನು ಪ್ರಾಂಶುಪಾಲರನ್ನಾಗಿ ನೇಮಿಸಿದೆ.

ಕಾಲೇಜಿಗೆ ಸೇರಲು ಆಸಕ್ತಿ ಉಳ್ಳವರು https://visthar.org/ ಅಥವಾ ಸಂಸ್ಥೆಯ ಅಖಿಲ ವಿದ್ಯಾಸಂದ್ರ (9845250955) ಅವರನ್ನು ಸಂಪರ್ಕಿಸಬಹುದು.


ಇದನ್ನೂ ಓದಿ; ರಾಷ್ಟ್ರೀಯ ಶಿಕ್ಷಣ ನೀತಿ 2020; ಶಿಕ್ಷಕರ ಮೇಲಿನ ಪರಿಣಾಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...