Homeಕರ್ನಾಟಕವಿಸ್ಟ್ರಾನ್ ಬಿಕ್ಕಟ್ಟು: 100 ಜನರನ್ನು ಬಂಧಿಸಿದ ನರಸಾಪುರ ಪೊಲೀಸರು

ವಿಸ್ಟ್ರಾನ್ ಬಿಕ್ಕಟ್ಟು: 100 ಜನರನ್ನು ಬಂಧಿಸಿದ ನರಸಾಪುರ ಪೊಲೀಸರು

ಇಂದು ಬೆಳಿಗ್ಗೆ ತಾಳ್ಮೆ ಕಳೆದುಕೊಂಡ ಸಾವಿರಾರು ಕಾರ್ಮಿಕರು ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

- Advertisement -
- Advertisement -

ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಐಫೋನ್ ತಯಾರಿಕ ಕಂಪೆನಿಯಾದ ವಿಸ್ಟ್ರಾನ್‌ನ‌ ಕಾರ್ಮಿಕರು ಕಂಪೆನಿಯು ತಮಗೆ ಸಂಬಳ ನೀಡಿಲ್ಲ ಹಾಗೂ ಅವಧಿ ಮೀರಿ ದುಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಕಂಪೆನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿದ್ದು, ಪ್ರಕರಣ ದಾಖಲಿಸಿರುವ ಪೊಲೀಸರು ಸುಮಾರು 100 ಜನರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಂಪೆನಿಯು ಕಳೆದ ಮೂರು-ನಾಲ್ಕು ತಿಂಗಳಿನಿಂದ ಸಂಬಳ ನೀಡಿಲ್ಲ ಹಾಗೂ 8 ಗಂಟೆಗಳ ಬದಲು 12 ಗಂಟೆಗಳ ಕಾಲ ದುಡಿಸಿಕೊಳ್ಳುತ್ತಿದೆ ಎಂದು ಹಲವು ದಿನಗಳಿಂದ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗೆ ತಾಳ್ಮೆ ಕಳೆದುಕೊಂಡ ಸಾವಿರಾರು ಕಾರ್ಮಿಕರು ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ್ದ ನರಸಾಪುರ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ನರಸಾಪುರ ಪೊಲೀಸ್ ಠಾಣೆಯ ಪಿಎಸ್‌ಐ ಕೇಶವ ಗೌಡ, ಘಟನೆಯ ಬಗ್ಗೆ ನೂರು ಜನರನ್ನು ಬಂಧಿಸಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ ಘಟನೆಯ ಬಗ್ಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, “ಪರಿಸ್ಥಿತಿ ಸದ್ಯಕ್ಕೆ ನಿಯಂತ್ರಣದಲ್ಲಿದ್ದು, ಆದಷ್ಟು ಬೇಗ ಬಿಕ್ಕಟ್ಟು ಬಗೆಹರಿಯಲಿದೆ. ಹಿರಿಯ ಅಧಿಕಾರಿಗಳು ಕೂಡ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ವಿಸ್ಟ್ರಾನ್ ಸಂಸ್ಥೆಯ ಪ್ರತಿನಿಧಿಗಳ ಜತೆಗೂ ಮಾತುಕತೆ ನಡೆಸಿ, ಬಿಕ್ಕಟ್ಟು ಶಮನ ಮಾಡಲಾಗುವುದು” ಎಂದು ಹೇಳಿದ್ದಾರೆಂದು ಪ್ರಜಾವಾಣಿ ವರದಿ ಮಾಡಿದೆ.

“ಇಂಥ ಘಟನೆ ನಡೆಯಬಾರದಿತ್ತು. ದುರದೃಷ್ಟಕರ ಘಟನೆ. ಯಾರೂ ಇಂಥ ಘಟನೆಯನ್ನು ಒಪ್ಪಲು ಸಾಧ್ಯವಿಲ್ಲ ಹಾಗೂ ಸಹಿಸುವ ಪ್ರಶ್ನೆಯೂ ಇಲ್ಲ. ಆ ಕಾರ್ಖಾನೆಯ ವಿರುದ್ಧ ದಾಳಿ ನಡೆಸಿ ಅದರ ಆಸ್ತಿ ನಷ್ಟಕ್ಕೆ ಕಾರಣವಾಗಿರುವ ಕಾರ್ಮಿಕರೇ ಇರಲಿ, ಇನ್ನು ಯಾರೇ ಇರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

“ಕಾರ್ಮಿಕರಿಗೆ ವೇತನ ನೀಡಿಲ್ಲ ಅಥವಾ ವೇತನ ಕಡಿತ ಮಾಡಿ ನೀಡಲಾಗುತ್ತಿತ್ತು ಎಂಬ ಅಂಶಗಳ ಬಗ್ಗೆಯೂ ವಿಚಾರಣೆ ನಡೆಸಲಾಗುವುದು. ಕಾರ್ಮಿಕರಿಗೆ ಅಂಥ ಸಮಸ್ಯೆ ಇದ್ದರೆ ಕಾರ್ಮಿಕ ಆಯುಕ್ತರಿಗೆ ದೂರು ನೀಡಬಹುದಿತ್ತು ಅಥವಾ ಜಿಲ್ಲಾಧಿಕಾರಿಗೆ ದೂರು ನೀಡಬಹುದಿತ್ತು. ಅದನ್ನು ಬಿಟ್ಟು ಕಾನೂನನ್ನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ಕಾನೂನನ್ನು ಕೈಗೆತ್ತಿಕೊಳ್ಳುವ ಇಂಥ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ವಿಸ್ಟ್ರಾನ್ ಕಾರ್ಪ್‌ನ ಫೋನ್ ಉತ್ಪಾದನಾ ಘಟಕವು ಕರ್ನಾಟಕ ಸರ್ಕಾರವು ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಮಂಜೂರು ಮಾಡಿದ 43 ಎಕರೆ ಜಮೀನಿನಲ್ಲಿದೆ. 2,9000 ಕೋಟಿ ರೂ. ಹೂಡಿಕೆ ಮಾಡುತ್ತಿರುವ ಕಂಪನಿಯು ಸುಮಾರು 15 ಸಾವಿರ ಜನರಿಗೆ ಉದ್ಯೋಗ ಕೊಡುವುದಾಗಿ ಘೋಷಿಸಿತ್ತು. ಆದರೆ ಕಂಪನಿಯ ಖಾಯಂ ಉದ್ಯೋಗಗಳನ್ನು ಬೇರೆ ರಾಜ್ಯದವರಿಗೆ ನೀಡಿ, 12 ಸಾವಿರಕ್ಕೆ ನಾಲ್ಕನೇ ದರ್ಜೆಯ ಗುತ್ತಿಗೆ ಉದ್ಯೋಗಗಳನ್ನು ಮಾತ್ರ ಸ್ಥಳೀಯರಿಗೆ ನೀಡಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ದೇಶವ್ಯಾಪಿ ಕಾರ್ಮಿಕ ಮುಷ್ಕರ: ಕರ್ನಾಟಕದಲ್ಲೂ ಯಶಸ್ವಿ – ಒಂದು ಝಲಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...