Homeಕರ್ನಾಟಕವಿಟ್ಲ | ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಂಖಡನ ಬಂಧನಕ್ಕೆ ಆಗ್ರಹಿಸಿ...

ವಿಟ್ಲ | ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಂಖಡನ ಬಂಧನಕ್ಕೆ ಆಗ್ರಹಿಸಿ ಡಿಎಚ್‌ಎಸ್ ಪ್ರತಿಭಟನಾ ರ‍್ಯಾಲಿ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಸಮೀಪದ ಮುರುವ ಎಂಬಲ್ಲಿ ದಲಿತ ಬಾಲಕಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಮೆ ಆಗ್ರಹಿಸಿ, ಪ್ರಕರಣದ ಅಮೂಲಾಗ್ರ ತನಿಖೆಗೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ(ಡಿಎಚ್‌ಎಸ್) ನೇತೃತ್ವದಲ್ಲಿ ಎಡ ಹಾಗೂ ದಲಿತ ಸಂಘಟನೆಗಳು ವಿಟ್ಲ ಪೇಟೆಯಲ್ಲಿ ಗುರುವಾರ ಬೃಹತ್ ಮೆರವಣಿಗೆ ನಡೆಸಿವೆ. ಪ್ರಕರಣದಲ್ಲಿ ಪೋಕ್ಸೋ ದಾಖಲಾದರೂ ಪ್ರಭಾವಿ ಭೂಮಾಲಕನ ಬಂಧನಕ್ಕೆ ಹಿಂದೇಟು ಹಾಕುತ್ತಿರುವ ಪೊಲೀಸರ ನಡೆಯನ್ನು ಖಂಡಿಸಿದ ಹೋರಾಟಗಾರರು ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಸದ್ಯದಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಎಸ್ ಪಿ ಕಚೇರಿಗೆ ಮೆರವಣಿಗೆ ನಡೆಸುವುದಾಗಿ ಎಚ್ಚರಿಸಿವೆ. ವಿಟ್ಲ | ದಲಿತ ಬಾಲಕಿ ಮೇಲೆ

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಲಿತ ಹಕ್ಕುಗಳ ರಾಜ್ಯ ಸಮಿತಿ ಸದಸ್ಯೆ ಈಶ್ವರಿ ಪದ್ಮುಂಜ, “ಪ್ರಕರಣವನ್ನು ಪೊಲೀಸರು ಮರೆಮಾಚುತ್ತಿದ್ದಾರೆ. ಹೆತ್ತವರಿಗೆ ಕೊಲೆ ಬೆದರಿಕೆ ಬಂದರೂ ಪೊಲೀಸರು ಮೌನವಾಗಿದ್ದಾರೆ. ಮುಂದೆ ನಮ್ಮ ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಸಂದೇಶ ನೀಡಲು ಈ ಹೋರಾಟ ನಡೆಸಲಾಗುತ್ತಿದೆ” ಎಂದು ಹೇಳಿದರು. ವಿಟ್ಲದ ಖಾಸಗಿ ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ವಿಟ್ಲದ ಮುಖ್ಯ ರಸ್ತೆಯಲ್ಲಿ ಸಂಚರಿಸಿ, ನಾಡಕಚೇರಿ ಬಳಿ ಪ್ರತಿಭಟನಾ ಸಭೆ ನಡೆಯಿತು.

ದಲಿತ ಬಾಲಕಿ, ಲೈಂಗಿಕ ದೌರ್ಜನ್ಯ, ಪೋಕ್ಸೋ, ಬಿಜೆಪಿ ಮುಖಂಡ, ಬಂಧನ, ಹೋರಾಟ, ಡಿಎಚ್‌ಎಸ್, Dalit girl, sexual assault, POCSO, BJP leader, arrest, struggle, DHS,
ಆರೋಪಿ ಮಹೇಶ್ ಭಟ್

ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ ಈಶ್ವರಿ ಅವರು, ಆರೋಪಿ ಮಹೇಶ್ ಭಟ್‌ನನ್ನು ತಕ್ಷಣವೇ ಬಂಧಿಸಬೇಕು. ಒಂದು ವೇಳೆ ಪೊಲೀಸರ ಮಕ್ಕಳ ಮೇಲೆ ಈ ರೀತಿಯ ದೌರ್ಜನ್ಯವಾದರೆ ಪೊಲೀಸರು ಈ ರೀತಿಯಾಗಿ ವರ್ತಿಸುತ್ತಿದ್ದರಾ? ಎಂದು ಪ್ರಶ್ನಿಸಿದರು.

ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, “ಬಾಲಕಿ ಮೇಲೆ ಕೇವಲ ಲೈಂಗಿಕ ಕಿರುಕುಳ ಮಾತ್ರ ನಡೆದಿಲ್ಲ. ಬದಲಾಗಿ, ಅತ್ಯಾಚಾರ ನಡೆದಿರುವ ಶಂಕೆ ಇದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆ ನಡೆದು ಹಲವು ದಿನಗಳು ಕಳೆದರೂ ಆರೋಪಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದರೆ ನಂಬಲು ಅಸಾಧ್ಯ. ಪೊಲೀಸರು ಅತ್ಯಾಚಾರಿಯನ್ನು ರಕ್ಷಣೆ ನೀಡುತ್ತಿದ್ದಾರೆ. ಆತನನ್ನು ಪತ್ತೆ ಹಚ್ಚಲು ಸಾಧ್ಯವಾಗದಿದ್ದರೆ ವಿಟ್ಲ ಪೊಲೀಸರು ಖಾಕಿ ಕಳಚಿ ಭೂ ಮಾಲಕನ ತೋಟದಲ್ಲಿ ಕೂಲಿ ಕೆಲಸ ಮಾಡಲಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಹೆಣ್ಮಕ್ಕಳೆಂದರೆ ಮೇಲ್ವರ್ಗದ ಕಾಮುಕರಿಗೆ ಬೋಗದ ವಸ್ತು ಮಾತ್ರವಾಗಿದೆ. ಇದಕ್ಕೆ ಅವರ ಮನುವಾದ ಸಂಸ್ಕೃತಿ ಕೂಡಾ ಕಾರಣ. ಡಾ.ಬಿ.ಆರ್. ಅಂಬೇಡ್ಕರ್ ಮನುಸ್ಮೃತಿಯನ್ನು ಸುಟ್ಟಿದ್ದು ಕೇವಲ ಜಾತಿ ವಿರೋಧಿ ಎಂಬ ಕಾರಣಕಷ್ಟೇ ಅಲ್ಲ, ಅದು ಸ್ರೀ ವಿರೋಧಿ ಎಂಬ ಕಾರಣಕ್ಕೂ ಆಗಿದೆ. ಧರ್ಮ‌ರಕ್ಷಣೆಯ ಹೆಸರಲ್ಲಿ ಅನ್ಯ ಧರ್ಮೀಯರ ಮೇಲೆ ಎತ್ತಿಕಟ್ಟಲು ಓಡೋಡಿ ಬರುವ ಬಿಜೆಪಿ ಶಾಸಕರುಗಳು ಮಾಣಿಲ ಗ್ರಾಮದ ಕಡೆ ಯಾಕೆ ಬರಲಿಲ್ಲ” ಎಂದು ಪ್ರಶ್ನಿಸಿದರು.

ವಿಟ್ಲ ಪೇಟೆಯಲ್ಲಿ ನಡೆದ ಡಿಎಚ್‌ಎಸ್ ನೇತೃತ್ವದ ಪ್ರತಿಭಟನಾ ಮೆರವಣಿಗೆ

ಪೊಲೀಸರು ಪ್ರಮಾಣಿಕವಾಗಿ ತನಿಖೆ ನಡೆಸಿ ಈ ಘಟನೆಯ ಸತ್ಯಾಸತ್ಯತೆ ಹೊರಗಡೆ ತರಬೇಕು. ಇಲ್ಲದಿದ್ದಲ್ಲಿ ಮುಂದೆ ಎಸ್ಪಿ ಚಲೋ ಕಚೇರಿ ಹೋರಾಟ ನಡೆಸಲಾಗುತ್ತದೆ ಎಂದು ಸಂತೋಷ್ ಬಜಾಲ್ ಎಚ್ಚರಿಸಿದರು.

ಕಾರ್ಮಿಕ ಮುಖಂಡ ಶೇಖರ ಮಾತನಾಡಿ, ಜಾತಿ ಧರ್ಮ ಬಿಟ್ಟು ಎಲ್ಲರೂ ಇಲ್ಲಿ ಸೇರಿದ್ದೇವೆ. ನಮ್ಮೆಲ್ಲರ ಉದ್ದೇಶ ಬಡ ದಲಿತ ಕುಟುಂಬಕ್ಕೆ ನ್ಯಾಯ ಒದಗಿಸುವುದಾಗಿದೆ. ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆಯಿಂದಾಗಿ ಜನರು ನ್ಯಾಯ ವಂಚಿತರಾಗುತ್ತಿದ್ದಾರೆ ಎಂದರು.

ವಿಟ್ಲ ಪೇಟೆಯಲ್ಲಿ ನಡೆದ ಡಿಎಚ್‌ಎಸ್ ನೇತೃತ್ವದ ಪ್ರತಿಭಟನಾ ಮೆರವಣಿಗೆ

ಮುಖಂಡ ದಿನೇಶ್ ಮೂಳೂರು ಮಾತನಾಡಿ, “ಬಿಜೆಪಿಯಲ್ಲಿರುವ ದಲಿತ ಯುವಕರು ಈ ಬಗ್ಗೆ ಮಾತನಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ನಿಮಗೆ ಅನ್ಯಾಯವಾದಾಗ ಯಾರೂ ಮುಂದೆ ಬರುವುದಿಲ್ಲ. ಪ್ರಗತಿಪರ ಮತ್ತು ದಲಿತ ಸಂಘಟನೆ ಮಾತ್ರ ಮುಂದೆ ಬರುತ್ತದೆ. ಮಹೇಶ್ ಭಟ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳದಿದ್ದರೆ ಇನ್ನಷ್ಟು ಹೋರಾಟ ಮುಂದುವರೆಯಲಿದೆ” ಎಂದರು.

ಕಾರ್ಮಿಕ ಮುಖಂಡ ಬಿ.ಎಂ. ಭಟ್ ಮಾತನಾಡಿದರು. ರೈತ ಮುಖಂಡರಾದ ಕೆ ಯಾದವ ಶೆಟ್ಟಿ, ಕಾಂಗ್ರೆಸ್ ನಾಯಕಿ ಮಂಜುಳಾ ನಾಯಕ್, ಕಾರ್ಮಿಕ ಮುಖಂಡರುಗಳಾದ ಅಶೋಕ್ ಕೊಂಚಾಡಿ, ಬಿ.ಕೆ ಇಮ್ತಿಯಾಜ್, ಸದಾಶಿವ ಪಡುಬಿದ್ರೆ, ಸರೋಜಿನಿ, ದಿನೇಶ್, ಎಸ್.ಪಿ ಆನಂದ್, ಸೇಸಪ್ಪ ಬೆದ್ರಕಾಡ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ವಿಟ್ಲ | ದಲಿತ ಬಾಲಕಿ ಮೇಲೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಮುಸ್ಲಿಮರ ಪರ ‘ಕಾಳಜಿ’ ಜಿನ್ನಾಗೆ ಮುಜುಗರ ತರಿಸುತ್ತದೆ: ಉದ್ಧವ್ ಠಾಕ್ರೆ

ಬಿಜೆಪಿಯ ಮುಸ್ಲಿಮರ ಪರ ‘ಕಾಳಜಿ’ ಜಿನ್ನಾಗೆ ಮುಜುಗರ ತರಿಸುತ್ತದೆ: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....