Homeಮುಖಪುಟ’ಕೈ’ಗೆ ಮತ ನೀಡಿ ಎಂದು ಬಿಜೆಪಿ ರ್‍ಯಾಲಿಯಲ್ಲಿ ಸಿಂಧಿಯಾ ಮತ ಯಾಚನೆ!

’ಕೈ’ಗೆ ಮತ ನೀಡಿ ಎಂದು ಬಿಜೆಪಿ ರ್‍ಯಾಲಿಯಲ್ಲಿ ಸಿಂಧಿಯಾ ಮತ ಯಾಚನೆ!

2002ರಲ್ಲಿ ಕಾಂಗ್ರೆಸ್‌ ಸೇರಿದ್ದ ಸಿಂಧಿಯಾ ಅವರು ಹದಿನೆಂಟು ವರ್ಷಗಳ ನಂತರ ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಬಿಜೆಪಿಗೆ ಸೇರಿದ್ದಾರೆ. ಈ ಘಟನೆ ಸಿಂಧಿಯಾ ಇನ್ನೂ ಕಾಂಗ್ರೆಸ್ ಗುಂಗಿನಲ್ಲೇ ಇದ್ದಾರಾ ಎಂಬ ವದಂತಿಗೆ ಕಾರಣವಾಗಿದ್ದಾರೆ.

- Advertisement -
- Advertisement -

ಕೆಲವು ಅಭ್ಯಾಸಗಳು ಬಿಟ್ಟುಬಿಡಲು ಹಲವು ವರ್ಷಗಳೇ ಬೇಕಾಗುತ್ತದೆ ಎಂಬುದಕ್ಕೆ ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಉದಾಹರಣೆಯಾಗಿದ್ದಾರೆ. ಮಧ್ಯಪ್ರದೇಶದಲ್ಲಿ ಉಪಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್‌ ಪರವಾಗಿ ಮತಯಾಚಿಸಿ, ಮುಜುಗರಕ್ಕೀಡಾಗಿದ್ದಾರೆ. ಈ ಘಟನೆ ಸಿಂಧಿಯಾ ಇನ್ನೂ ಕಾಂಗ್ರೆಸ್ ಗುಂಗಿನಲ್ಲೇ ಇದ್ದಾರಾ ಎಂಬ ವದಂತಿಗೆ ಕಾರಣವಾಗಿದ್ದಾರೆ.

ಸಾರ್ವಜನಿಕ ಸಮಾವೇಶದಲ್ಲಿ ಗ್ವಾಲಿಯರ್‌ನ ದಾಬ್ರ ನಗರದ ಬಿಜೆಪಿ ಅಭ್ಯರ್ಥಿ ಇಮ್ರಾತಿ ದೇವಿ ಪರವಾಗಿ ಮತ ಯಾಚಿಸಲು ಹೋಗಿ ಬಾಯಿತಪ್ಪಿನಿಂದ ಕಾಂಗ್ರೆಸ್‌ಗೆ ಮತ ನೀಡುವಂತೆ ಕೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

‘ದಾಬ್ರದ ಉತ್ಸಾಹಭರಿತ ನನ್ನ ಜನರೇ, ನೀವು ‘ಕೈ’ ಗುರುತಿಗೆ ಮತ ಹಾಕುವಿರಿ ಎಂಬುದನ್ನು ನನಗೂ ಮತ್ತು ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಅವರಿಗೆ ಮನವರಿಕೆ ಮಾಡಲು ನಿಮ್ಮ ಕೈಯನ್ನು ಎತ್ತಿ ಮುಷ್ಟಿ ಮಾಡಿ’ ಎಂದು ಹೇಳಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಅವರು, ಬಿಜೆಪಿಯ ‘ಕಮಲ’ ಚಿಹ್ನೆಗೆ ಮತ ಚಲಾಯಿಸುವಂತೆ ಕೇಳಿದ್ದಾರೆ.

ತಕ್ಷಣ ತಮ್ಮ ಮಾತನ್ನು ಬದಲಾಯಿಸಿಕೊಂಡರೂ ಸಹ ಜನಸಂದಣಿ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಪಕ್ಕದಲ್ಲಿ ನಿಂತಿದ್ದ ಬಿಜೆಪಿ ಅಭ್ಯರ್ಥಿ ಇಮ್ರಾತಿ ದೇವಿಯೂ ನಸುನಗುತ್ತಿರುವುದನ್ನು ಕಾಣಿಸುತ್ತಿತ್ತು.

ಇದನ್ನೂ ಓದಿ: ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೊನೆಕ್ಷಣದಲ್ಲಿ ಕಮಲ್ ನಾಥ್ ಹೆಸರು ಕೈಬಿಟ್ಟ ಚುನಾವಣಾ ಆಯೋಗ!

ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೇಳಿಕೆಯ ವಿಡಿಯೋವನ್ನು ಕಾಂಗ್ರೆಸ್ ಕೂಡ ಟ್ವೀಟ್ ಮಾಡಿದ್ದು, ’ಮಾನ್ಯ ಸಿಂಧಿಯಾ ಜಿ, ಮಧ್ಯಪ್ರದೇಶದ ಜನರು ಖಂಡಿತ ಕಾಂಗ್ರೆಸ್‌​ ಗುರುತಿಗೆ ಮತ ಹಾಕಿ ಬೆಂಬಲಿಸುತ್ತಾರೆ’ ಅಂತ ಟಾಂಗ್ ಕೊಟ್ಟಿದೆ.

’ಇಂತ ತಪ್ಪು ಯಾವುದೇ ವ್ಯಕ್ತಿಯಿಂದಲೂ ಆಗಬಹುದು. ಅವರು ತಕ್ಷಣ ತಮ್ಮ ತಪ್ಪನ್ನು ಸರಿಪಡಿಸಿಕೊಂಡಿದ್ದಾರೆ. ಅವರು ಬಿಜೆಪಿ ನಾಯಕ ಎಂಬುದು ಎಲ್ಲರಿಗೂ ತಿಳಿದಿದೆ’ ಎಂದು ರಾಜ್ಯ ಬಿಜೆಪಿ ವಕ್ತಾರ ಪಂಕಜ್‌ ಚತುರ್ವೇದಿ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಇಮಾರ್ತಿ ದೇವಿ ಕುರಿತು ಕಮಲನಾಥ್‌ ಅವರು ಬಹಿರಂಗ ಸಭೆಯಲ್ಲೆ ‘ಐಟಂ’ ಎಂಬ ಪದ ಬಳಸಿ ವ್ಯಂಗ್ಯವಾಡಿದ್ದರು ಈ ಬಗ್ಗೆ ಬಿಜೆಪಿಯಲ್ಲಿ ಆಕ್ರೋಶ ಭುಗಿಲ್ಲೆದ್ದಿತು. ನಂತರ ಪರ ವಿರೋಧ ಟೀಕಾಸ್ತ್ರಾ ಪ್ರಯೋಗಿಸಲಾಗಿತ್ತು.

2002ರಲ್ಲಿ ಕಾಂಗ್ರೆಸ್‌ ಸೇರಿದ್ದ ಸಿಂಧಿಯಾ ಅವರು ಹದಿನೆಂಟು ವರ್ಷಗಳ ನಂತರ ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಬಿಜೆಪಿಗೆ ಸೇರಿದ್ದಾರೆ.

ಕಮಲನಾಥ್ ಸರ್ಕಾರವನ್ನು ಬೀಳಿಸುವಲ್ಲಿ ಪ್ರಮುಖಪಾತ್ರ ವಹಿಸಿದ್ದ ಜೋತಿರಾಧಿತ್ಯ ಸಿಂಧಿಯಾಗೆ ನಿಷ್ಠೆಯಿಂದಿದ್ದ ಇಮಾರ್ತಿ ದೇವಿ ಮತ್ತು ಇತರ 21 ಶಾಸಕರು ಕಾಂಗ್ರೆಸ್ ಮತ್ತು ರಾಜ್ಯ ವಿಧಾನಸಭೆಗೆ ರಾಜೀನಾಮೆ ನೀಡಿ ಈ ವರ್ಷದ ಮಾರ್ಚ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.


ಇದನ್ನೂ ಓದಿ: ಮಧ್ಯಪ್ರದೇಶ: ವಿವಾದಾತ್ಮಕ ಹೇಳಿಕೆ; ಬಿಜೆಪಿ ನಾಯಕಿಗೆ ನೋಟಿಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...