Homeಕರ್ನಾಟಕನಾವು ₹6 ಸಾವಿರ ಕೊಟ್ಟರೆ ಓಟ್‌ ಹಾಕಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ

ನಾವು ₹6 ಸಾವಿರ ಕೊಟ್ಟರೆ ಓಟ್‌ ಹಾಕಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಪ್ರತಿ ಮತಕ್ಕೆ 6 ಸಾವಿರ ರೂಗಳನ್ನು ನೀಡುವುದಾಗಿ ಮಾಜಿ ಜಲಸಂಪನ್ಮೂಲ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಹೇಳಿದ್ದಾರೆ. ಬೆಳಗಾವಿಯ ಸುಳೇಭಾವಿ ಗ್ರಾಮದಲ್ಲಿ ತಮ್ಮ ಬೆಂಬಲಿಗರು ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡುತ್ತಾ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಮಾವೇಶದಲ್ಲಿ ಅವರು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಪ್ರತಿನಿಧಿಸಿದರೆ, ಜಾರಕಿಹೊಳಿ ಅವರು ಗೋಕಾಕ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಕ್ಷೇತ್ರದ ಮತದಾರರಿಗೆ ಉಡುಗೊರೆ ಹಂಚುತ್ತಿದ್ದಾರೆ ಎಂದು ಆರೋಪಿಸಿರುವ ಜಾರಕಿಹೊಳಿ, “ಇಲ್ಲಿಯವರೆಗೆ, ಅವರು ಸುಮಾರು ರೂ. 1000 ಮೌಲ್ಯದ ಕುಕ್ಕರ್ ಮತ್ತು ಮಿಕ್ಸರ್‌ನಂತಹ ಅಡುಗೆ ಸಲಕರಣೆಗಳನ್ನು ನೀಡಿರಬೇಕು. ಅವರು ಇನ್ನೊಂದು ಸೆಟ್ ಉಡುಗೊರೆಗಳನ್ನು ನೀಡಬಹುದು. ಅವೆಲ್ಲವೂ ಸೇರಿ ಸುಮಾರು 3000 ರೂಪಾಯಿ ಆಗಬಹುದು. ಆದರೆ ನಾವು 6000 ರೂಪಾಯಿ ಕೊಟ್ಟರೆ ನಮಗೆ ಮತ ನೀಡಿ” ಎಂದು ಹೇಳಿದ್ದಾರೆ.

ರಾಜ್ಯದ ನೀರಾವರಿ ಸಚಿವ ಗೋವಿಂದ್ ಕಾರಜೋಳ ಅವರು ಜಾರಕಿಹೊಳಿ ಅವರ ಹೇಳಿಕೆಯನ್ನು ನಿರಾಕರಿಸಿದ್ದು, ಬಿಜೆಪಿಯಲ್ಲಿ ಇಂತಹವುಗಳಿಗೆ ಸ್ಥಾನವಿಲ್ಲ ಎಂದು ಹೇಳಿದ್ದಾರೆ. “ಒಬ್ಬ ವ್ಯಕ್ತಿ ಹೇಳಿಕೆ ನೀಡಿದರೆ ಅದು ಪಕ್ಷದ ಹೇಳಿಕೆಯಲ್ಲ. ಇದು ಅವರ ಅಭಿಪ್ರಾಯ” ಎಂದು ಹೇಳಿದ್ದಾರೆ.

ಇದೇ ವೇಳೆ ಜಾರಕಿಹೊಳಿ ಅವರ ಹೇಳಿಕೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದು, ಚುನಾವಣಾ ಆಯೋಗ ಗಮನಿಸುತ್ತಿದೆ ಮತ್ತು ಕರ್ನಾಟಕದಲ್ಲಿ ಕಾನೂನುಗಳಿವೆ ಎಂದು ಹೇಳಿದ್ದಾರೆ. ಬೊಮ್ಮಾಯಿ ಸರ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷರು ಕಟೀಲ್‌ ಸಹ ನೋಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಜಾರಕಿಹೊಳಿ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ಅವರಿಗೆ ಬಿಟ್ಟಿದ್ದೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಜಾರಕಿಹೊಳಿ ಅವರ ಹೇಳಿಕೆಯನ್ನು ಗಮನಿಸುವಂತೆ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಇಂತಹ ಹೇಳಿಕೆಗಳು ಬಿಜೆಪಿಯ ಭ್ರಷ್ಟಾಚಾರದ ಮಟ್ಟವನ್ನು ತೋರಿಸುತ್ತದೆ ಎಂದ ಕಾಂಗ್ರೆಸ್ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದು, ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಥವಾ ಜಾರಿ ನಿರ್ದೇಶನಾಲಯ ಈ ಬಗ್ಗೆ ಏಕೆ ಗಮನಹರಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಇಲ್ಲಿ ಎರಡೂವರೆ ಲಕ್ಷ ಮತದಾರರಿದ್ದಾರೆ. ಈ ಹೇಳಿಕೆ ತಮಾಷೆಯ ವಿಷಯವಲ್ಲ. ಇದು ದುರಾಚಾರವಲ್ಲವೇ? ಬಿಜೆಪಿ ಇಷ್ಟೆಲ್ಲ ಹಣವನ್ನು ಎಲ್ಲಿಂದ ತರುತ್ತಿದೆ?” ಎಂದು ಪ್ರಿಯಾಂಕ್‌ ಖರ್ಗೆ ಕೇಳಿದ್ದಾರೆ.

ಇದನ್ನೂ ಓದಿ: ಜೆಎನ್‌ಯು ವಿದ್ಯಾರ್ಥಿ ಸಂಘದಿಂದ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ; ರದ್ದು ಮಾಡಿ ಎಂದ ವಿಶ್ವವಿದ್ಯಾಲಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...