Homeಮುಖಪುಟಮತಗಳ್ಳತನ ಆರೋಪ: ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಲು ಎದ್ದೇಳು ಕರ್ನಾಟಕ ಆಗ್ರಹ

ಮತಗಳ್ಳತನ ಆರೋಪ: ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಲು ಎದ್ದೇಳು ಕರ್ನಾಟಕ ಆಗ್ರಹ

- Advertisement -
- Advertisement -

ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದಲ್ಲಿ ನಡೆದಿರುವ ಚುನಾವಣಾ ವಂಚನೆ ಸಾಕ್ಷಿ ಸಮೇತ ಬಯಲಾಗಿದೆ.

ಅಕ್ರಮದಲ್ಲಿ ಭಾಗಿಯಾದ ಅಧಿಕಾರಗಳನ್ನು ಅಮಾನತುಗೊಳಿಸಿ ಸಮಗ್ರ ತನಿಖೆಗೆ ಆದೇಶಿಸಬೇಕು.

ಎಲ್ಲಾ ಲೋಕಸಭಾ ಕ್ಷೇತ್ರಗಳ ಡಿಜಿಟಲ್‌ ಡಾಟಾವನ್ನು ಅಭ್ಯರ್ಥಿಗಳಿಗೆ ಒದಗಿಸಬೇಕು.

ಚುನಾವಣಾ ಆಯೋಗ ಸಾರ್ವಜನಿಕ ಕ್ಷಮೆ ಕೇಳಿ ರಾಜಿನಾಮೆ ನೀಡಬೇಕು.

…………………………………………………………….

ಬೆಂಗಳೂರು: ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಕುರಿತು ರಾಹುಲ್ ಗಾಂಧಿ ಮಾಡಿರುವ ಆರೋಪಗಳಿಗೆ ಹಲವು ಸಾಕ್ಷ್ಯಗಳು ದೊರೆತಿವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಮರು ಚುನಾವಣೆ ನಡೆಸಬೇಕು, ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿ, ತನಿಖೆ ನಡೆಸಬೇಕು ಎಂದು ‘ಎದ್ದೇಳು ಕರ್ನಾಟಕ’ ಸಂಘಟನೆ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯು, ಇತ್ತೀಚೆಗೆ ರಾಹುಲ್ ಗಾಂಧಿ ಅವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮಹದೇವಪುರ ವಿಧಾನಸಭಾ ವಲಯದಲ್ಲಿ ನಡೆದಿರುವ ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ಹೇಳಿದೆ. ಈ ಆರೋಪಗಳು ಸಾಕ್ಷ್ಯಾಧಾರ ಸಮೇತ ಇವೆ ಎಂದು ಸಂಘಟನೆ ತಿಳಿಸಿದೆ.

ರಾಹುಲ್‌ ಗಾಂಧಿ ಮಾಡಿದ ಪತ್ರಿಕಾ ಗೋಷ್ಟಿ ಮತ್ತು ಬಿಚ್ಚಿಟ್ಟ ಮಾಹಿತಿಗಳು ಅನುಮಾನಕ್ಕಾಸ್ಪದವಿಲ್ಲದಂತೆ ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ವಲಯದ ಮತದಾರರ ಪಟ್ಟಿಯಲ್ಲಿ ನಡೆದಿರುವ ಅಪರಾಧಿ ಚಟುವಟಿಕೆಗಳು ಸಾಬೀತಾಗಿವೆ. ಇದು ಆರೋಪವಲ್ಲ, ಸಾಕ್ಷ್ಯ. ಐದು ಬಗೆಯ ಅಕ್ರಮಗಳ ಕುರಿತು ಒಂದಲ್ಲ, ಸಾವಿರಾರು ಸಾಕ್ಷಿಗಳನ್ನು ಒದಗಿಸಲಾಗಿದೆ. ನಕಲಿ ಮತದಾರರನ್ನು ಸೃಷ್ಟಿಸಿರುವ, ತಂದೆಯ ಹೆಸರಿಲ್ಲದ, ವಿಳಾಸವಿಲ್ಲದ ಮತಚೀಟಿಗಳನ್ನು ವಿತರಿಸಿರುವ, ಭಾವಚಿತ್ರವೇ ಇಲ್ಲದಂತೆ ಅಥವಾ ಕಾಣದಂತೆ ಮತ ಚೀಟಿ ನೀಡಿರುವ, ಒಂದೇ ವಿಳಾಸದಲ್ಲಿ 40, 80 ಜನರಿಗೆ ಮತಚೀಟಿ ಸೃಷ್ಟಿಸಿರುವ, ಹೊಸ ಮತದಾರರಿಗೆ ನೀಡಬೇಕಾದ ನಮೂನೆ 6ನ್ನು ದುರುಪಯೋಗಪಡಿಸಿಕೊಂಡಿರುವ, ಅಪರಾಧ ಸಾಕಷ್ಟು ಸಾಕ್ಷ್ಯಗಳ ಮೂಲಕ ಸಾಬೀತಾಗಿದೆ ಎಂದು ಎದ್ದೇಳು ಕರ್ನಾಟಕ ಹೇಳಿದೆ.

ಇದು ಒಂದು ಲೋಕಸಭಾ ಕ್ಷೇತ್ರದ, ಒಂದು ವಿಧಾನ ಸಭಾ ಕ್ಷೇತ್ರದಲ್ಲಿ ನಡೆದಿರುವ ಅಕ್ರಮ. ಇಡೀ ದೇಶದಲ್ಲಿ ನೂರಾರು ಕಡೆ ಇದು ನಡೆದಿರುವ ಎಲ್ಲಾ ಸಾಧ್ಯತೆಗಳೂ ಇವೆ. ಚುನಾವಣಾ ಫಲಿತಾಂಶ ಬಂದ ಕೂಡಲೇ ಅಕ್ರಮ ನಡೆದಿರುವ ಸಾಧ್ಯತೆಗಳ ಬಗ್ಗೆ ಎದ್ದೇಳು ಕರ್ನಾಟಕ ಹೇಳಿಕೆ ನೀಡಿತ್ತು. ಮರು ಮತದಾನಕ್ಕೆ ಹಾಕವಂತೆ ಬೆಂಗಳೂರು ಕೇಂದ್ರದ ಅಭ್ಯರ್ಥಿಯನ್ನೂ ಒತ್ತಾಯಿಸಿತ್ತು. ಜುಲೈ 2024 ರಲ್ಲಿ Vote For Democracy ಎಂಬ ಸಂಸ್ಥೆ ವರದಿಯೊಂದನ್ನು [Conduct of Lok sabha elections 2024] ಬಿಡುಗಡೆ ಮಾಡಿ, ಅದರಲ್ಲಿ ದೇಶದ 79 ಕ್ಷೇತ್ರಗಳಲ್ಲಿ ಮತಕಳವು ನಡೆದಿರುವುದಕ್ಕೆ ಸಾಂದರ್ಭಿಕ ಸಾಕ್ಷ್ಯವನ್ನು ಮುಂದಿಟ್ಟಿತ್ತು. ಚುನಾವಣಾ ಆಯೋಗವು ಎಷ್ಟು ಮತದಾನ ನಡೆದಿದೆ ಎಂಬ ಬಗ್ಗೆ ನೀಡಿದ ಎರಡು ಸಂಖ್ಯೆಗಳ ನಡುವಿನ ಅಂತರ ಆ ಕ್ಷೇತ್ರದ ಗೆಲುವಿನ ಅಂತರಕ್ಕಿಂತ ಹೆಚ್ಚಿರುವುದನ್ನು ಗುರುತಿಸಿ ಈ ಕ್ಷೇತ್ರಗಳಲ್ಲಿ ಕಳುವಾಗಿರುವ ಎಲ್ಲಾ ಸಾಧ್ಯತೆಗಳಿವೆ ಎಂದು ಆರೋಪಿಸಿತ್ತು. ಆ 79 ಕ್ಷೇತ್ರಗಳ ಪಟ್ಟಿಯನ್ನು ಒದಗಿಸಿತ್ತು. ಅದರಲ್ಲಿ ಕರ್ನಾಟಕದ 6 ಕ್ಷೇತ್ರಗಳ ಹೆಸರುಗಳು ಇದ್ದವು. ಅದರಲ್ಲಿ ಬೆಂಗಳೂರು ಸೆಂಟ್ರಲ್‌ ಕ್ಷೇತ್ರವೂ ಇತ್ತು. ಈಗ ಈ 79 ಕ್ಷೇತ್ರದ ಪೈಕಿ ಒಂದು ಕ್ಷೇತ್ರದಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿದೆ ಎಂದು ಅದು ಹೇಳಿದೆ.

ಈ ಸಾಕ್ಷ್ಯವನ್ನು ಹೊರತೆಗೆಯಲು ನಡೆದಿರುವ ಪರಿಶ್ರಮ ಅಪಾರವಾದುದು, ಶ್ಲಾಘನೀಯವಾದುದು. ಚುನಾವಣಾ ಆಯೋಗವು ಡಿಜಿಟಲ್‌ ಡಾಟಾವನ್ನು ಒದಗಿಸಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಸಹಸ್ರಾರು ಪುಟಗಳ ಮುದ್ರಿತ ದಾಖಲೆಯನ್ನು ಒಂದೊಂದಾಗಿ ಪರಿಶೀಲಿಸಿ, ತಾಳೆ ಹಾಕಿ, ಈ ಬೃಹತ್‌ ಸಾಕ್ಷ್ಯವನ್ನು ಸಿದ್ಧಪಡಿಸಲಾಗಿದೆ. ಇದನ್ನು ಸಿದ್ಧಪಡಿಸಿದ ತಂಡಕ್ಕೆ, ಅದಕ್ಕೆ ಬೆಂಬಲ ನೀಡಿದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ಅವರಿಗೆ, ಅದನ್ನು ದಿಟ್ಟವಾಗಿ ಮತ್ತು ಪರಿಣಾಮಕಾರಿಯಾಗಿ ಮುಂದಿಟ್ಟ ರಾಹುಲ್‌ ಗಾಂಧಿ ಅವರಿಗೆ ಅಭಿನಂದನೆಗಳು ಎಂದು ಎದ್ದೇಳು ಕರ್ನಾಟಕ ತಿಳಿಸಿದೆ.

ಸಂವಿಧಾನ ಪದ್ದತಿಗೆ ವಿರುದ್ಧವಾಗಿ ಚುನಾವಣಾ ಆಯೋಗವನ್ನು ತಾನೇ ನೇಮಿಸಿರುವ ಬಿಜೆಪಿ ಸರ್ಕಾರ, ಅದನ್ನು ಬಳಸಿಕೊಂಡು ಪ್ರಜಾತಂತ್ರವನ್ನು ಕೊಲೆ ಮಾಡಲು ಹೊರಟಿದೆ. ಜನಾಕ್ರೋಶ ಬೆಳೆಯುತ್ತಿದ್ದು, ಚುನಾವಣೆಗಳಲ್ಲಿ ಸೋಲುವ ಭೀತಿ ಹೆಚ್ಚಿರುವುದರಿಂದ, ಮತಗಳನ್ನು ಅಪಹರಿಸುವ ಮತ್ತು ಕಳ್ಳ ಮತಗಳನ್ನು ಬರೆಸುವ ಮತ ಮಾಫಿಯಾ ಕೆಲಸಕ್ಕೆ ಕೈಹಾಕಿದೆ ಎಂದು ಅದು ಆರೋಪಿಸಿದೆ.

ಸಾಕ್ಷ್ಯಗಳನ್ನು ಮುಂದಿಟ್ಟಾಗ ಮೌನ ಧರಿಸುವುದು ಅಪರಾಧವನ್ನು ಮುಚ್ಚಿಡುವ ತಂತ್ರವಾಗುತ್ತದೆ. ಚುನಾವಣ ಆಯೋಗವು ಮಾತನಾಡಬೇಕು ಎಂದು ನಾವು ಆಗ್ರಹಿಸುತ್ತೇವೆ. ಒಂದು ವೇಳೆ ರಾಹುಲ್‌ ಗಾಂಧಿ ಬಿಚ್ಚಿಟ್ಟ ಸತ್ಯ ಸತ್ಯವಲ್ಲ ಎಂಬುದಾದರೆ ಅದನ್ನು ಚುನಾವಣಾ ಆಯೋಗವು ತಡಮಾಡದೆ ಜನತೆಯ ಮುಂದಿಡಬೇಕು. ಅಥವಾ ತಾನು ಮಾಡಿದ ತಪ್ಪಿಗಾಗಿ ಜನತೆಯ ಮುಂದೆ ಕ್ಷಮೆಯಾಚಿಸಬೇಕು. ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ಈ ಅಕ್ರಮದ ತನಿಖೆಯಾಗಬೇಕು. ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ಮರುಮತದಾನಕ್ಕೆ ಆದೇಶ ಹೊರಡಿಸಬೇಕು.  ಕೊನೆಯದಾಗಿ ಮತದಾರರ ಪಟ್ಟಿ ಮತ್ತು ಮತದಾನ ನಡೆದ ವಿಧಾನಕ್ಕೆ ಸಂಬಂಧಪಟ್ಟಂತೆ ಇರುವ ಎಲ್ಲಾ ಡಿಜಿಟಲ್‌ ಡಾಟಾವನ್ನು ಬಿಡುಗಡೆ ಮಾಡಬೇಕು. ಇದನ್ನು ಮಾಡದಿದ್ದರೆ ನಾಗರೀಕರಾದ ನಾವು ಸುಮ್ಮನೆ ಕೂರುವುದಿಲ್ಲ ರಾಜ್ಯವ್ಯಾಪಿ ಪ್ರತಿಭಟನೆ ಆರಂಭಿಸುತ್ತೇವೆ ಎಂದು ಎದ್ದೇಳು ಕರ್ನಾಟಕ ಎಚ್ಚರಿಕೆ ನೀಡಿದೆ

‘ಎದ್ದೇಳು ಕರ್ನಾಟಕ’ ಸಂಘಟನೆಯ ಆಗ್ರಹಗಳು:

*ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಬೇಕು

* ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ, ಸಮಗ್ರ ತನಿಖೆ ನಡೆಸಬೇಕು

* ಎಲ್ಲಾ ಲೋಕಸಭಾ ಕ್ಷೇತ್ರಗಳ ಡಿಜಿಟಲ್ ಡೇಟಾವನ್ನು ಅಭ್ಯರ್ಥಿಗಳಿಗೆ ಒದಗಿಸಬೇಕು

* ಚುನಾವಣಾ ಆಯೋಗವು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಮತ್ತು ರಾಜೀನಾಮೆ ನೀಡಬೇಕು

ಈಗಾಗಲೇ ಸಾಕ್ಷ್ಯಾಧಾರಗಳು ಲಭ್ಯವಿದ್ದರೂ ಮೌನವಾಗಿರುವುದು ಅಪರಾಧವನ್ನು ಮುಚ್ಚಿಡುವ ತಂತ್ರ ಎಂದು ಸಂಘಟನೆ ಹೇಳಿದೆ. ಒಂದು ವೇಳೆ ಈ ಆರೋಪಗಳು ಸುಳ್ಳಾಗಿದ್ದರೆ ಚುನಾವಣಾ ಆಯೋಗವು ಸ್ಪಷ್ಟೀಕರಣ ನೀಡಬೇಕು, ಇಲ್ಲವಾದರೆ ತಾನು ಮಾಡಿದ ತಪ್ಪಿಗೆ ಕ್ಷಮೆಯಾಚಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಈ ಹೇಳಿಕೆಯನ್ನು ತಾರಾ ರಾವ್, ಮೊಹಮ್ಮದ್ ಕುನ್ನಿ, ಫಾ.ಅರುಣ್ ಲೂಯಿಸ್, ಕೆ.ಎಲ್.ಅಶೋಕ್ ಮತ್ತು ಜಿ.ಎಂ.ವೀರಸಂಗಯ್ಯ ಅವರು ‘ಎದ್ದೇಳು ಕರ್ನಾಟಕ’ದ ಪರವಾಗಿ ನೀಡಿದ್ದಾರೆ.

ಬಿಹಾರ| ಮತಪಟ್ಟಿ ಪರಿಷ್ಕರಣೆ ವಿರೋಧಿಸಿ ಪ್ರತಿಭಟನೆ-ಬಂಧನ: ಅವರು ಯಾವುದಕ್ಕೆ ಹೆದರುತ್ತಿದ್ದಾರೆ? ಎಂದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...