Homeಕರ್ನಾಟಕಮತಗಳ್ಳತನ: ಕಾಂಗ್ರೆಸ್ ಪ್ರತಿಭಟನೆ ಆಗಸ್ಟ್‌ 8ಕ್ಕೆ ಮುಂದೂಡಿಕೆ

ಮತಗಳ್ಳತನ: ಕಾಂಗ್ರೆಸ್ ಪ್ರತಿಭಟನೆ ಆಗಸ್ಟ್‌ 8ಕ್ಕೆ ಮುಂದೂಡಿಕೆ

- Advertisement -
- Advertisement -

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಜೆಎಂಎಂ ಪಕ್ಷದ ಸ್ಥಾಪಕ ಶಿಬು ಸೊರೇನ್ ಅವರ ನಿಧನದ ಹಿನ್ನೆಲೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ (ಆ.5) ನಡೆಯಬೇಕಿದ್ದ ಪ್ರತಿಭಟನೆಯನ್ನು ಆ.8ಕ್ಕೆ ಮುಂದೂಡಲಾಗಿದೆ.

2024ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರಿನ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಇಂದು (ಸೋಮವಾರ) ಬೆಂಗಳೂರಿನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಭಟನೆ ಮುಂದೂಡಿರುವ ಬಗ್ಗೆ ಮಾಹಿತಿ ನೀಡಿದರು.

ಶಿಬ ಸೊರೇನ್ ಅವರ ಅಂತ್ಯ ಸಂಸ್ಕಾರದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಹಾಗಾಗಿ, ಅವರು ನಾಳೆ ಪ್ರತಿಭಟನೆಗೆ ಆಗಮಿಸಲು ಸಾಧ್ಯವಿಲ್ಲ. ಆದ್ದರಿಂದ ಮುಂದೂಡಿಕೆ ಮಾಡಲಾಗಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

ಶಿಬು ಸೊರೇನ್ ಅವರು ಸ್ಥಾಪಿಸಿದ, ಅವರ ಮಗ ಜಾರ್ಖಂಡ್‌ನ ಹಾಲಿ ಸಿಎಂ ಹೇಮಂತ್ ಸೊರೇನ್ ನೇತೃತ್ವದ ಜೆಎಂಎಂ ಪಕ್ಷ ನಮ್ಮ ಇಂಡಿಯಾ ಮೈತ್ರಿಕೂಟದ ಭಾಗವಾಗಿದೆ. ಹಾಗಾಗಿ, ಶಿಬು ಅವರ ಸಾವಿನ ಹಿನ್ನೆಲೆ ಪ್ರತಿಭಟನೆ ಮುಂದೂಡಿ ನಾವು ಇಡೀ ದೇಶಕ್ಕೆ ಒಂದು ಸಂದೇಶ ಕೊಟ್ಟಿದ್ದೇವೆ ಎಂದು ಸುರ್ಜೇವಾಲ ಮತ್ತು ಡಿ.ಕೆ ಶಿವಕುಮಾರ್ ಹೇಳಿದರು.

ಆಗಸ್ಟ್ 8ರಂದು ವರಮಹಾಲಕ್ಷ್ಮಿ ಹಬ್ಬ ಇದೆ. ಆದರೆ, ನಾವು ಪಕ್ಷದ ಕಾರ್ಯಕ್ರಮ ನಡೆಸಬೇಕಾಗಿದೆ. ಎಲ್ಲಾ ಸಚಿವರು, ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಇದೇ ವೇಳೆ ಡಿ.ಕೆ ಶಿವಕುಮಾರ್ ಹೇಳಿದರು.

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರಿನ ಮಹದೇವಪುರ ಮತ್ತು ರಾಜಾಜಿನಗರದಲ್ಲಿ
ಮತಗಳ್ಳತನ ಆಗಿರುವ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 31ರಂದು ಹೇಳಿದ್ದರು.

ಇದಕ್ಕೂ ಮುನ್ನ, ಜುಲೈ 24ರಂದು ಸಂಸತ್ತಿನ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ರಾಹುಲ್ ಗಾಂಧಿ ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ ‘ಭಾರೀ ಮತ ಕಳ್ಳತನ’ ನಡೆದಿದೆ ಎಂಬ ಗಂಭೀರ ಆರೋಪ ಮಾಡಿದ್ದರು. ಈ ಅಕ್ರಮದ ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಚುನಾವಣಾ ಆಯೋಗ ಮತ್ತು ಸಾರ್ವಜನಿಕರ ಮುಂದೆ ಬಹಿರಂಗಪಡಿಸುವುದಾಗಿ ಹೇಳಿದ್ದರು.

ಧರ್ಮಸ್ಥಳ ಶವ ಶೋಧ: ಪಾಯಿಂಟ್ ನಂ 11ರ ಸಮೀಪ ಅಸ್ಥಿಪಂಜರದ ಅವಶೇಷಗಳು ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...