Homeಮುಖಪುಟಮತಗಳ್ಳತನ: ರಾಹುಲ್ ಗಾಂಧಿ ಆರೋಪಗಳ ಕುರಿತು ತನಿಖೆಗೆ ಎಸ್ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಮತಗಳ್ಳತನ: ರಾಹುಲ್ ಗಾಂಧಿ ಆರೋಪಗಳ ಕುರಿತು ತನಿಖೆಗೆ ಎಸ್ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಪಿಐಎಲ್

- Advertisement -
- Advertisement -

ಬೆಂಗಳೂರು ಕೇಂದ್ರ ಸೇರಿದಂತೆ ದೇಶದ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ‘ಮತಗಳ್ಳತನ’ ನಡೆದಿದೆ ಎಂಬ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆರೋಪದ ಕುರಿತು ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.

ಮತದಾರರ ಪಟ್ಟಿಯ ತಯಾರಿಕೆ, ನಿರ್ವಹಣೆ ಮತ್ತು ಪ್ರಕಟಣೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಚೌಕಟ್ಟಿಗೆ (ರೂಪುರೇಷೆ) ನಿರ್ದೇಶನಗಳನ್ನು ನೀಡುವಂತೆ ಮತ್ತು ನಕಲಿ ಅಥವಾ ಕಾಲ್ಪನಿಕ ನಮೂದುಗಳನ್ನು ಪತ್ತೆಹಚ್ಚುವ ಮತ್ತು ತಡೆಗಟ್ಟುವ ಕಾರ್ಯವಿಧಾನಗಳನ್ನು ಒಳಗೊಂಡಂತೆ ಭಾರತೀಯ ಚುನಾವಣಾ ಆಯೋಗಕ್ಕೆ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಅಲ್ಲದೆ, ಅರ್ಥಪೂರ್ಣ ಪರಿಶೀಲನೆ, ಲೆಕ್ಕಪರಿಶೋಧನೆ ಮತ್ತು ಸಾರ್ವಜನಿಕ ಪರಿಶೀಲನೆಗೆ ಅನುವು ಮಾಡಿಕೊಡಲು ಮತದಾರರ ಪಟ್ಟಿಯನ್ನು ಸುಲಭವಾಗಿ ಪ್ರವೇಶಿಸಬಹುದಾದ, ಮೆಶಿನ್ ರೀಡೇಬಲ್ (ಯಂತ್ರ-ಓದಬಲ್ಲ) ಮತ್ತು ಆಪ್ಟಿಕಲ್ ಕ್ಯಾರೆಕ್ಟರ್ ರಿಕಗ್ನಿಷನ್ (ಒಸಿಆರ್) ಕಂಪ್ಲೈಂಟ್ ಸ್ವರೂಪಗಳಲ್ಲಿ ಪ್ರಕಟಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 7ರಂದು ರಾಹುಲ್ ಗಾಂಧಿ ನಡೆಸಿದ ಪತ್ರಿಕಾಗೋಷ್ಠಿಯನ್ನು ಆಧರಿಸಿ ವಕೀಲ ರೋಹಿತ್ ಪಾಂಡೆ ಪಿಐಎಲ್‌ ಸಲ್ಲಿಸಿದ್ದಾರೆ.

ಕರ್ನಾಟಕದಲ್ಲಿ ಒಂದೇ ರೀತಿಯ ವಿಳಾಸ ಮತ್ತು ತಂದೆಯ ಹೆಸರಿನ ಸುಮಾರು 40,000–50,000 ಮತದಾರರು ಮತ್ತು ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಒಂದೇ ವಿಳಾಸದಲ್ಲಿ ನೋಂದಾಯಿಸಲಾದ ಸುಮಾರು 80 ಮತದಾರರು ಸೇರಿದಂತೆ ಆಪಾದಿತ ಅಕ್ರಮಗಳ ಉದಾಹರಣೆಗಳನ್ನು ಪಿಐಎಲ್ ಉಲ್ಲೇಖಿಸಿದೆ.

ಈ ವಿಷಯವು ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಪಾಯವನ್ನೇ ಅಲುಗಾಡಿಸುವಂತದ್ದು ಎಂದು ಅರ್ಜಿಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.

ಸ್ವತಂತ್ರ ಪರಿಶೀಲನೆ ನಡೆಯುವವರೆಗೆ ಮತ್ತು ಮತದಾರರ ಪಟ್ಟಿಗಳ ತಯಾರಿಕೆ, ನಿರ್ವಹಣೆ ಮತ್ತು ಪ್ರಕಟಣೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಮಾರ್ಗಸೂಚಿಗಳನ್ನು ಪ್ರಕಟಿಸುವವರೆಗೆ ಮತದಾರರ ಪಟ್ಟಿಗಳ ಅಂತಿಮಗೊಳಿಸುವಿಕೆಯನ್ನು ನಿಲ್ಲಿಸಲು ನಿರ್ದೇಶನಗಳನ್ನು ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ದೆಹಲಿ ಗಲಭೆ ಪ್ರಕರಣ: ಮೂವರು ಆರೋಪಿಗಳ ಖುಲಾಸೆ; ತನಿಖೆಯ ಲೋಪಗಳ ಬಗ್ಗೆ ನ್ಯಾಯಾಲಯದ ತೀವ್ರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...