Homeಕರ್ನಾಟಕಮತಗಳ್ಳತನ ಆರೋಪ:  ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಭಾಗಿ: ಸಂಚಾರ ನಿರ್ಬಂಧ

ಮತಗಳ್ಳತನ ಆರೋಪ:  ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಭಾಗಿ: ಸಂಚಾರ ನಿರ್ಬಂಧ

- Advertisement -
- Advertisement -

ಬೆಂಗಳೂರು, ಆ.7: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದು (ಆ.8) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದ ಕೆಲವು ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಸಂಚಾರ ದಟ್ಟಣೆಯನ್ನು ತಪ್ಪಿಸಲು ನಗರ ಪೊಲೀಸರು ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.

ನಿರ್ಬಂಧಿತ ರಸ್ತೆಗಳು ಮತ್ತು ಪರ್ಯಾಯ ಮಾರ್ಗಗಳು:

  • ಶಾಂತಲಾ ಜಂಕ್ಷನ್ ಮತ್ತು ಖೋಡ್ ಸರ್ಕಲ್: ಇಲ್ಲಿಂದ ಆನಂದ್ ರಾವ್ ಮೇಲ್ಸೇತುವೆ, ಓಲ್ಡ್ ಜೆಡಿಎಸ್ ರಸ್ತೆ ಮತ್ತು ಶೇಷಾದ್ರಿಪುರ ರಸ್ತೆಗೆ ಸಂಚಾರವನ್ನು ನಿಷೇಧಿಸಲಾಗಿದೆ.
    • ಪರ್ಯಾಯ ಮಾರ್ಗ: ಲುಲು ಮಾಲ್, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕಲ್ ಮತ್ತು ರೇಸ್ ಕೋರ್ಸ್ ಮೇಲ್ಸೇತುವೆಗಳ ಮೂಲಕ ಪ್ರಯಾಣಿಸಬಹುದು.
  • ಮೈಸೂರು ಬ್ಯಾಂಕ್‌ನಿಂದ ಚಾಲುಕ್ಯ ಕಡೆಗೆ: ಈ ಮಾರ್ಗದಲ್ಲಿ ಸಂಚಾರ ನಿರ್ಬಂಧವಿದೆ.
    • ಪರ್ಯಾಯ ಮಾರ್ಗ: ಕೆ.ಜಿ. ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ರಾಜೀವ್ ಗಾಂಧಿ ಸರ್ಕಲ್ ಮತ್ತು ರೇಸ್ ಕೋರ್ಸ್ ಮೇಲ್ಸೇತುವೆಗಳ ಮೂಲಕ ಸಂಚರಿಸಬಹುದು.
  • ಚಾಲುಕ್ಯದಿಂದ ಮೈಸೂರು ಬ್ಯಾಂಕ್ ಕಡೆಗೆ: ಈ ಮಾರ್ಗದಲ್ಲಿಯೂ ಸಂಚಾರವನ್ನು ನಿರ್ಬಂಧಿಸಲಾಗಿದೆ.
    • ಪರ್ಯಾಯ ಮಾರ್ಗ: ಚಾಲುಕ್ಯ ಸರ್ಕಲ್, ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ ಮತ್ತು ಇಂಡಿಯನ್ ಎಕ್ಸ್‌ಪ್ರೆಸ್ ಮೂಲಕ ಪ್ರಯಾಣಿಸಲು ಸೂಚಿಸಲಾಗಿದೆ.
  • ಕಾಳಿದಾಸ ರಸ್ತೆ, ಕನಕದಾಸ ಜಂಕ್ಷನ್: ಇಲ್ಲಿಂದ ಫ್ರೀಡಂ ಪಾರ್ಕ್ ಕಡೆಗೆ ಹೋಗುವ ವಾಹನಗಳು ಕನಕದಾಸ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಿ ಸಾಗರ್ ಜಂಕ್ಷನ್ ಕಡೆಗೆ ಹೋಗಬಹುದು.
  • ಮೌರ್ಯ ಸುಬ್ಬಣ್ಣ ಜಂಕ್ಷನ್: ಇಲ್ಲಿಂದ ಫ್ರೀಡಂ ಪಾರ್ಕ್ ಕಡೆಗೆ ಹೋಗುವವರು ಸುಬ್ಬಣ್ಣ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಿ ಆನಂದ್ ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದು.

ಸಂಚಾರ ದಟ್ಟಣೆಯ ಅನನುಕೂಲತೆಯನ್ನು ತಪ್ಪಿಸಲು ಪ್ರಯಾಣಿಕರು ಪರ್ಯಾಯ ಮಾರ್ಗಗಳನ್ನು ಬಳಸಿಕೊಳ್ಳುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಹೋರಾಟದ ಹಿನ್ನಲೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಲೋಕಸಭಾ ಚುನಾವಣೆಯಲ್ಲಿ ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ, ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ನಿನ್ನೆ (ಅ.7) ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ನ್ಯಾಯಯುತ ಚುನಾವಣೆಗಳನ್ನು ನಡೆಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ ಎಂದು ಟೀಕಿಸಿದ್ದರು.

ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ನಕಲಿ ಮತದಾರರು, ಅಮಾನ್ಯ ವಿಳಾಸಗಳು ಮತ್ತು ಒಂದೇ ವಿಳಾಸದಲ್ಲಿ ಅನೇಕ ಹೆಸರುಗಳು ದಾಖಲಾಗಿವೆ ಎಂದು ಕಾಂಗ್ರೆಸ್ ನಡೆಸಿದ ಆಂತರಿಕ ಅಧ್ಯಯನದಿಂದ ತಿಳಿದುಬಂದಿದೆ ಎಂದು ಗಾಂಧಿ ವಿವರಿಸಿದ್ದರು. ಈ ಅಕ್ರಮಗಳಿಗೆ ಸ್ಥಳೀಯ ಮತಗಟ್ಟೆ ಅಧಿಕಾರಿಗಳು, ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರ ಸಹಕರಿಸಿವೆ ಎಂದು ಅವರು ಆರೋಪಿಸಿದ್ದರು.

ಚುನಾವಣಾ ಆಯೋಗವು ಮತದಾರರ ಪಟ್ಟಿಯ ಎಲೆಕ್ಟ್ರಾನಿಕ್ ಪ್ರತಿಯನ್ನು ನೀಡಲು ನಿರಾಕರಿಸಿರುವುದನ್ನು ಗಾಂಧಿ ಪ್ರಶ್ನಿಸಿದರು. ಎಲೆಕ್ಟ್ರಾನಿಕ್ ಡೇಟಾ ನೀಡಿದರೆ ಕೇವಲ 30 ಸೆಕೆಂಡುಗಳಲ್ಲಿ ಈ ವಂಚನೆಯನ್ನು ಬಯಲು ಮಾಡಬಹುದು. ಆದರೆ, ಆಯೋಗವು ಭೌತಿಕ ಪ್ರತಿಯನ್ನು ಮಾತ್ರ ನೀಡುವ ಮೂಲಕ ಪರಿಶೀಲನೆ ಪ್ರಕ್ರಿಯೆಯನ್ನು ಕಠಿಣಗೊಳಿಸಿದೆ ಎಂದು ಅವರು ಹೇಳಿದರು. ಅಲ್ಲದೆ, ಸಿಸಿಟಿವಿ ದೃಶ್ಯಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಆರೋಪಿಸಿದ್ದರು.

2024 ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ ಕೇವಲ 32,707 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಈ ಅಕ್ರಮಗಳು ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ರಾಹುಲ್ ಗಾಂಧಿ ದೂರಿದ್ದರು.

“ಇದು ಸ್ವತಂತ್ರ ಮತ್ತು ನ್ಯಾಯಸಮ್ಮತ ಚುನಾವಣಾ ವ್ಯವಸ್ಥೆಯ ಮೇಲಿನ ನೇರ ದಾಳಿ. ಚುನಾವಣಾ ಆಯೋಗವು ತನ್ನ ಸಂವಿಧಾನಾತ್ಮಕ ಕರ್ತವ್ಯವನ್ನು ನಿರ್ಲಕ್ಷಿಸಿ, ಬಿಜೆಪಿ ಸರ್ಕಾರಕ್ಕೆ ಅನುಕೂಲಕರವಾಗಿ ವರ್ತಿಸುತ್ತಿದೆ,” ಎಂದು ಅವರು ತೀವ್ರ ವಾಗ್ದಾಳಿ ನಡೆಸಿದರು. ಈ ಆರೋಪಗಳ ಹಿನ್ನೆಲೆಯಲ್ಲಿ ಇಂದು (ಆ.8) ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಅವರು ತಿಳಿಸಿದ್ದರು. ಈ ಪ್ರತಿಭಟನೆಯ ನೇತೃತ್ವವನ್ನು ರಾಹುಲ್ ಗಾಂಧಿ ವಹಿಸಲಿದ್ದು, ಎಐಸಿಸಿ ಅಧ್ಯಕ್ಷರು ಮತ್ತು ಪಕ್ಷದ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

ಮತ ಕದ್ದು ಪ್ರಧಾನಿಯಾಗಿರುವ ಮೋದಿಗೆ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...

ಅಮೆರಿಕದ ಯಾವುದೇ ದಾಳಿ ಎದುರಿಸಲು ನಾವು ಸಿದ್ದ : ಟ್ರಂಪ್ ಬೆದರಿಕೆ ಬೆನ್ನಲ್ಲೇ ಕ್ಯೂಬಾ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಕ್ಯೂಬಾವನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯೂಬಾದ ಉಪ ವಿದೇಶಾಂಗ ಸಚಿವ ಕಾರ್ಲೋಸ್ ಫೆರ್ನಾಂಡಿಸ್ ಡಿ ಕೊಸ್ಸಿಯೊ, ಅಮೆರಿಕ ಯಾವುದೇ...

ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...