Homeಮುಖಪುಟಮತದಾರರ ಗುರುತಿನ ಚೀಟಿ ಬಗ್ಗೆ ಚರ್ಚೆಗೆ ನಕಾರ | ರಾಜ್ಯಸಭೆಯಿಂದ ಹೊರನಡೆದ ಪ್ರತಿಪಕ್ಷಗಳು

ಮತದಾರರ ಗುರುತಿನ ಚೀಟಿ ಬಗ್ಗೆ ಚರ್ಚೆಗೆ ನಕಾರ | ರಾಜ್ಯಸಭೆಯಿಂದ ಹೊರನಡೆದ ಪ್ರತಿಪಕ್ಷಗಳು

- Advertisement -
- Advertisement -

ಮತದಾರರ ಗುರುತಿನ ಚೀಟಿ ವಿವಾದ ಮತ್ತು ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ಚರ್ಚೆ ನಡೆಸಬೇಕೆಂಬ ಬೇಡಿಕೆಯನ್ನು ನಿರಾಕರಿಸಿದ ನಂತರ ಕಾಂಗ್ರೆಸ್ ಮತ್ತು ಟಿಎಂಸಿ ಸೇರಿದಂತೆ ವಿರೋಧ ಪಕ್ಷಗಳು ಸೋಮವಾರ ರಾಜ್ಯಸಭೆಯಿಂದ ಹೊರನಡೆದಿವೆ. ಮತದಾರರ ಗುರುತಿನ ಚೀಟಿ

ಈ ಬಗ್ಗೆ ಚರ್ಚೆ ನಡೆಸುವಂತೆ ತೃಣಮೂಲ ಕಾಂಗ್ರೆಸ್, ಕಾಂಗ್ರೆಸ್ ಮತ್ತು ಎಡ ಪಕ್ಷಗಳ ವಿರೋಧ ಪಕ್ಷಗಳ ಸಂಸದರು ನಿಯಮ 267 ರ ಅಡಿಯಲ್ಲಿ ನೋಟಿಸ್‌ಗಳನ್ನು ನೀಡಿದ್ದರು. ತಾವು ಎತ್ತಿದ ವಿಚಾರದ ಕುರಿತು ಚರ್ಚೆಯನ್ನು ಕೈಗೆತ್ತಿಕೊಳ್ಳಲು ಸದನದ ದಿನವನ್ನು ಮೀಸಲಿಡಬೇಕು ಎಂದು ವಿಪಕ್ಷಗಳು ಕರೆ ನೀಡಿದ್ದವು. ಆದರೆ ಉಪ ಸಭಾಪತಿ ಹರಿವಂಶ್ ಅವರು ಅಂತಹ ನೋಟಿಸ್‌ಗಳ ಕುರಿತು ಸ್ಪೀಕರ್‌ ತೀರ್ಮಾನಗಳಿಗೆ ಅನುಗುಣವಾಗಿಲ್ಲದ ಕಾರಣ ಅವುಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಟಿಎಂಸಿ ಮತ್ತು ಕಾಂಗ್ರೆಸ್ ಸಂಸದರು ಮತದಾರರ ಗುರುತಿನ ಚೀಟಿ ಸಮಸ್ಯೆಯ ಬಗ್ಗೆ ಧ್ವನಿ ಎತ್ತಲು ಪ್ರಯತ್ನಿಸಿದಾಗ, ಆ ಚರ್ಚೆಯ ನಂತರ, ದಕ್ಷಿಣ ಭಾರತದ ರಾಜ್ಯಗಳ ಮೇಲೆ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ಪರಿಣಾಮದ ಬಗ್ಗೆ ಚರ್ಚಿಸಲು ತಮಿಳುನಾಡಿನ ಪಕ್ಷಗಳು ಬಯಸಿದ್ದವು.

ವಿರೋಧ ಪಕ್ಷದ ಸಂಸದರು ಘೋಷಣೆಗಳನ್ನು ಕೂಗಿ ಈ ಬಗ್ಗೆ ಚರ್ಚೆಗೆ ಒತ್ತಾಯಿಸಿದ್ದಾರೆ. ಆದಾಗ್ಯೂ, ಹರಿವಂಶ್ ಅವರು ವಿಪಕ್ಷಗಳ ಸೂಚನೆಗಳನ್ನು ಅಂಗೀಕರಿಸಲಾಗಿಲ್ಲ ಮತ್ತು ವಿಪಕ್ಷಗಳು ಹೇಳಿದ ಯಾವುದೂ ದಾಖಲೆಗೆ ಹೋಗುವುದಿಲ್ಲ ಎಂದು ಪ್ರತಿಪಾದಿಸಿದ ನಂತರ ಅವರು ಸಭಾತ್ಯಾಗ ಮಾಡಿದ್ದಾರೆ. ಮತದಾರರ ಗುರುತಿನ ಚೀಟಿ

ನಿಯಮ 267 ರ ಅಡಿಯಲ್ಲಿ 10 ಸಂಸದರು ನೋಟಿಸ್ ನೀಡಿದ್ದರು. ಸುಖೇಂದು ಶೇಖರ್ ರಾಯ್, ಮೌಸಮ್ ಬಿ ನೂ, ಸುಷ್ಮಿತಾ ದೇವ್ (ಟಿಎಂಸಿ) ಮತ್ತು ಪ್ರಮೋದ್ ತಿವಾರಿ (ಕಾಂಗ್ರೆಸ್) ಅವರು ದೇಶದ ವಿವಿಧ ರಾಜ್ಯಗಲಲ್ಲಿ ಹಲವು ಮತದಾರರ ಚೀಟಿ ಸಂಖ್ಯೆ ಒಂದೆ ರೀತಿಯಲ್ಲಿ ಇದ್ದು, ಅವುಗಳನ್ನು ನೀಡುವಲ್ಲಿ ಚುನಾವಣಾ ಆಯೋಗ ಲೋಪ ಎಸಗಿದೆ ಎಂಬ ಬಗ್ಗೆ ಚರ್ಚೆಗೆ ಒತ್ತಾಯಿಸಿದ್ದಾರೆ ಎಂದು ಹರಿವಂಶ್ ಹೇಳಿದ್ದಾರೆ.

ದಕ್ಷಿಣ ರಾಜ್ಯಗಳಿಗೆ ಮುಂಬರುವ ಕ್ಷೇತ್ರ ಪುನರ್‌ ವಿಂಗಡಣೆ ಪ್ರಕ್ರಿಯೆಗೆ ಸಂಬಂಧಿಸಿದ ಆತಂಕಗಳ ಕುರಿತು ಡಿಎಂಕೆಯ ಪಿ ವಿಲ್ಸನ್ ಮತ್ತು ಸಿಪಿಎಂನ ವಿ. ಶಿವದಾಸನ್ ಒಂದನ್ನು ಒತ್ತಾಯಿಸಿದ್ದರು. ಇದೇ ವೇಳೆ, ಪಶ್ಚಿಮ ಬಂಗಾಳದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ವಿರುದ್ಧ ಹೆಚ್ಚಿದ ದೌರ್ಜನ್ಯ ಪ್ರಕರಣಗಳನ್ನು ಚರ್ಚಿಸಲು ಬಿಜೆಪಿಯ ಸಮಿಕ್ ಭಟ್ಟಾಚಾರ್ಯ ಬಯಸಿದ್ದರು.

ಭಾರತದಲ್ಲಿ ಉಪಗ್ರಹ ಬ್ರಾಡ್‌ಬ್ಯಾಂಡ್ ಇಂಟರ್ನೆಟ್ ಒದಗಿಸಲು ಭಾರ್ತಿ ಏರ್‌ಟೆಲ್ ಮತ್ತು ರಿಲಯನ್ಸ್ ಜಿಯೋ ಎಲೋನ್ ಮಸ್ಕ್‌ನ ಸ್ಟಾರ್‌ಲಿಂಕ್‌ನೊಂದಿಗೆ ಮಾಡಿಕೊಂಡ ಒಪ್ಪಂದದ ಪರಿಣಾಮದ ವಿಷಯವನ್ನು ಚರ್ಚಿಸಲು ಸಿಪಿಐನ ಪಿ ಸಂತೋಷ್ ಕುಮಾರ್ ಪ್ರಯತ್ನಿಸಿದರು.

ದೆಹಲಿಯಲ್ಲಿ ಅಪರಾಧಗಳ ಹೆಚ್ಚಳ ಮತ್ತು ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಬಗ್ಗೆ ಚರ್ಚೆ ನಡೆಸಬೇಕೆಂದು ಎಎಪಿಯ ಸಂಜಯ್ ಸಿಂಗ್ ಒತ್ತಾಯಿಸಿದರೆ, ಕೇರಳದಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನ ಹೆಚ್ಚುತ್ತಿರುವ ಬಗ್ಗೆ ಚರ್ಚೆ ನಡೆಸಬೇಕೆಂದು ಐಯುಎಂಎಲ್‌ನ ಹಾರಿಸ್ ಬೀರಾನ್ ಒತ್ತಾಯಿಸಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕ್ಷೇತ್ರ ಪುನರ್‌ವಿಂಗಡನೆ | ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಕೇರಳ ಸಿಎಂ ಪಿಣರಾಯಿ ಬೆಂಬಲ

ಕ್ಷೇತ್ರ ಪುನರ್‌ವಿಂಗಡನೆ | ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಕೇರಳ ಸಿಎಂ ಪಿಣರಾಯಿ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...