Homeಕರ್ನಾಟಕಕಷ್ಟಗಳಿಗೆ ಸ್ಪಂದಿಸುವ ಸುರೇಶ್ ಬೇಕೋ, ವೈಟ್ ಕಾಲರ್ ಮಂಜುನಾಥ್ ಬೇಕೋ ಎನ್ನುವುದನ್ನು ಮತದಾರರು ನಿರ್ಧರಿಸಿದ್ದಾರೆ: ಸಿಎಂ

ಕಷ್ಟಗಳಿಗೆ ಸ್ಪಂದಿಸುವ ಸುರೇಶ್ ಬೇಕೋ, ವೈಟ್ ಕಾಲರ್ ಮಂಜುನಾಥ್ ಬೇಕೋ ಎನ್ನುವುದನ್ನು ಮತದಾರರು ನಿರ್ಧರಿಸಿದ್ದಾರೆ: ಸಿಎಂ

- Advertisement -
- Advertisement -

‘ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಸುರೇಶ್ ನಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ’ ಎಂದರು.

‘ಸರ್ಕಾರ ಬಂದ ದಿನದಿಂದಲೇ ನಾವು ಕೊಟ್ಟ ಮಾತನ್ನು ಈಡೇರಿಸುವ ಕೆಲಸ ಶುರು ಮಾಡಿದೆವು. ಎಂಟೇ ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿಕೊಳ್ಳಿ’ ಎಂದರು.

‘ನಾವು ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಕನ್ನಡ ನಾಡಿನ‌ ಜನತೆಯ ಖಾತೆಗೆ ಹಣ ಜಮೆ ಮಾಡುತ್ತಿದ್ದೇವೆ. ಶೂದ್ರರು, ದಲಿತರು, ಮಹಿಳೆಯರು, ಶ್ರಮಿಕರು, ದುಡಿಯುವ ವರ್ಗಗಳ ಎಲ್ಲರ ಮನೆ ಮನೆಯನ್ನೂ ನಮ್ಮ ಗ್ಯಾರಂಟಿಗಳು ತಲುಪಿವೆ. ಇದು ನಮ್ಮ ಬದ್ಧತೆ. ನೀವು ಕೊಟ್ಟ ಒಂದೊಂದು ಓಟಿಗೂ ಘನತೆ ತಂದಿದ್ದೇವೆ’ ಎಂದರು.

‘ಬಿಜೆಪಿ-ಜೆಡಿಎಸ್ ಕಾರ್ಯಕರ್ತರು, ಕುಟುಂಬಗಳಿಗೂ ನಮ್ಮ ಸರ್ಕಾರ ಹಣ ಜಮೆ ಮಾಡುತ್ತಿದೆ. ಪಕ್ಷ, ಜಾತಿ, ಧರ್ಮ ಯಾವುದನ್ನೂ ನೋಡದೆ ಇಡೀ ನಾಡಿನ ಜನತೆಗೆ ಅವರ ಕುಟುಂಬಗಳಿಗೆ ಉಚಿತ ಅಕ್ಕಿ, ಉಚಿತ ವಿದ್ಯುತ್ ಜತೆಗೆ ಮಹಿಳೆಯರ ಖಾತೆಗೆ 2 ಸಾವಿರ ರೂಪಾಯಿ, ನಿರುದ್ಯೋಗಿಗಳ ಖಾತೆಗೆ ಭತ್ಯೆಯನ್ನು ಜಮೆ ಮಾಡುತ್ತಿದೆ. ಹೀಗೆ ಕಾಂಗ್ರೆಸ್ ಪಕ್ಷ ಪ್ರತಿಯೊಬ್ಬ ಮತದಾರರ ನಂಬಿಕೆ ಉಳಿಸಿಕೊಂಡಿದೆ’ ಎಂದು ವಿವರಿಸಿದರು.

‘ಬಿಜೆಪಿ ಸರ್ಕಾರ ಇದ್ದಾಗಲೂ ನೀವು ತೆರಿಗೆ ಕಟ್ಟಿದ್ದೀರಿ. ಆದರೆ, ಬಿಜೆಪಿ ನಿಮ್ಮ ತೆರಿಗೆ ಹಣವನ್ನು ನಿಮಗಾಗಿ ಖರ್ಚು ಮಾಡಲಿಲ್ಲ. ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ ಬೆಲೆಯನ್ನು ವಿಪರೀತ ಹೆಚ್ಚಿಸಿ ನಿಮ್ಮ ತೆರಿಗೆ ಹಣವನ್ನೂ ನಿಮಗಾಗಿ ಖರ್ಚು ಮಾಡಲಿಲ್ಲ. ಆದರೆ ನಾವು ಪ್ರತೀ ತಿಂಗಳು 4 ರಿಂದ 5 ಸಾವಿರ ರೂಪಾಯಿಯನ್ನು ಪ್ರತಿ ಅರ್ಹ ಕುಟುಂಬಗಳಿಗೆ ನಮ್ಮ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಕಾಂಗ್ರೆಸ್ ಅಂದರೆ ಬಡವರ, ಮಧ್ಯಮ ವರ್ಗದವರ ಪರವಾಗಿ ಕೆಲಸ ಮಾಡುವ ಪಕ್ಷ’ ಎಂದು ಹೇಳಿದರು.

‘ಹೀಗಾಗಿ, ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೋ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ. ಡಿ.ಕೆ.ಸುರೇಶ್ ಅವರನ್ನು ಜನ ಗೆಲ್ಲಿಸಲು ತೀರ್ಮಾನಿಸಿ ಆಗಿದೆ’ ಎಂದರು.

‘ಕುಮಾರಸ್ವಾಮಿ ಅವರು ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದಾಗ, ಮುಖ್ಯಮಂತ್ರಿ ಆಗಿದ್ದಾಗ ರಾಮನಗರ ಜಿಲ್ಲೆಯನ್ನು ಏಕೆ ಕಡೆಸಿದ್ದರು ಎನ್ನುವುದಕ್ಕೆ ಜನರಿಗೆ ಉತ್ತರಿಸಲಿ’ ಎಂದು ಸವಾಲು ಹಾಕಿದರು.

ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಸಿ.ಸುಧಾಕರ್, ಮಂಕಾಳ ವೈದ್ಯ , ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್ , ವಿಧಾನ‌ ಪರಿಷತ್ ಸದಸ್ಯ ಸುದಾಮ ದಾಸ್ ಸೇರಿ ರಾಮನಗರ ಜಿಲ್ಲೆಯ ಕಾಂಗ್ರೆಸ್ ಶಾಸಕರುಗಳು ಮತ್ತು ಜಿಲ್ಲಾ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ; ನನ್ನನ್ನು ಎನ್‌ಕೌಂಟರ್ ಮಾಡುವುದಾಗಿ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...