Homeಮುಖಪುಟ96 ಲೋಕಸಭಾ ಕ್ಷೇತ್ರಗಳಲ್ಲಿ 4ನೇ ಹಂತದ ಮತದಾನ ಆರಂಭ: ಆಂಧ್ರ, ಒಡಿಶಾ ವಿಧಾನಸಭೆಗೂ ಮತದಾನ

96 ಲೋಕಸಭಾ ಕ್ಷೇತ್ರಗಳಲ್ಲಿ 4ನೇ ಹಂತದ ಮತದಾನ ಆರಂಭ: ಆಂಧ್ರ, ಒಡಿಶಾ ವಿಧಾನಸಭೆಗೂ ಮತದಾನ

- Advertisement -
- Advertisement -

ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಆರಂಭವಾಗಿದೆ. 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 96 ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದು, ಮತಪೆಟ್ಟಿಗೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರವಾಗುತ್ತಿದೆ. ಇದರ ಜೊತೆಗೆ ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಮತ್ತು ಒಡಿಶಾದ 28 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಮತದಾನವು ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. 96 ಕ್ಷೇತ್ರಗಳಲ್ಲಿ ಒಟ್ಟು 1,717 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆಂಧ್ರಪ್ರದೇಶದ 25, ತೆಲಂಗಾಣದ 17, ಉತ್ತರಪ್ರದೇಶದ 13, ಮಹಾರಾಷ್ಟ್ರದ 11 ಮಧ್ಯಪ್ರದೇಶ ಹಾಗೂ ಪಶ್ಚಿಮಬಂಗಾಳದ ತಲಾ 4 ಕ್ಷೇತ್ರಗಳು, ಬಿಹಾರದ 5 ಸ್ಥಾನಗಳು, ಜಾರ್ಖಂಡ್ ಹಾಗೂ ಒಡಿಶಾದ ಮತ್ತು ಜಮ್ಮುಕಾಶ್ಮೀರದ ಒಂದು ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ.

3 ಹಂತಗಳಲ್ಲಿ ಈವರೆಗೆ ಒಟ್ಟು 285 ಕ್ಷೇತ್ರಳಿಗೆ ಮತದಾನವಾಗಿದೆ. ಚುನಾವಣಾ ಆಯೋಗವು ಶನಿವಾರ ಅಧಿಕೃತ ಅಧಿಸೂಚನೆಯೊಂದನ್ನು ಹೊರಡಿಸಿ ಲೋಕಸಭಾ ಚುನಾವಣೆ 3ನೇ ಹಂತದಲ್ಲಿ 65.68 ಶೇ. ಮತದಾನವಾಗಿರುವುದಾಗಿ ಹೇಳಿದೆ.

ಆಂಧ್ರಪ್ರದೇಶದ ಎಲ್ಲಾ 25 ಲೋಕಸಭಾ ಕ್ಷೇತ್ರಗಳ ಜೊತೆಗೆ 175 ವಿಧಾನಸಭಾ ಕ್ಷೇತ್ರಗಳಿಗೂ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ತೆಲಂಗಾಣದ ಎಲ್ಲಾ 17 ಲೋಕಸಭಾ ಕ್ಷೇತ್ರಗಳಿಗೂ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ.

ಅಸಾದುದ್ದೀನ್ ಉವೈಸಿ (ಎಐಎಂಐಎಂ)- ಹೈದರಾಬಾದ್, ಅಖಿಲೇಶ್ ಯಾದವ್ (ಎಸ್ಪಿ) -ಕನೌಜ್,ಮಹುವಾ ಮೊಯಿತ್ರಾ(ಟಿಎಂಸಿ)- ಕೃಷ್ಣನಗರ, ವೈ.ಎಸ್.ಶರ್ಮಿಳಾ ರೆಡ್ಡಿ (ಕಾಂಗ್ರೆಸ್) -ಕಡಪ, ಅಧೀರ್ ರಂಜನ್ ಚೌಧರಿ (ಕಾಂಗ್ರೆಸ್), ಯೂಸುಫ್ ಪಠಾಣ್ (ಟಿಎಂಸಿ) – ಬೆಹ್ರಾಂಪುರ, ಶತ್ರುಘ್ನಸಿನ್ಹಾ (ಟಿಎಂಸಿ)-ಅಸಾನ್‌ಸೊಲ್ ಸೇರಿದಂತೆ ಹಲವು ಪ್ರಮುಖರು ಕಣದಲ್ಲಿದ್ದಾರೆ.

4ನೇ ಹಂತದ ಮತದಾನ ಮುಗಿಯುತ್ತಿದ್ದಂತೆ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 379 ಸ್ಥಾನಗಳಿಗೆ ಮತದಾನವು ಪೂರ್ಣಗೊಳ್ಳುತ್ತದೆ. ಮತಗಳ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದೆ.

4ನೇ ಹಂತದ ಮತದಾನದಲ್ಲಿ 17.7ಕೋಟಿಗೂ ಹೆಚ್ಚು ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ.  ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 19 ಲಕ್ಷಕ್ಕೂ ಹೆಚ್ಚು ಮತಗಟ್ಟೆ ಅಧಿಕಾರಿಗಳನ್ನು ಕರ್ತವ್ಯಕ್ಕೆ ನೇಮಿಸಲಾಗಿದೆ. 1.92 ಲಕ್ಷ ಮತಗಟ್ಟೆಗಳನ್ನು ನಿರ್ಮಿಸಲಾಗಿದೆ.

ನಟ ಅಲ್ಲು ಅರ್ಜುನ್ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ಮತಗಟ್ಟೆಯಲ್ಲಿ ಮತದಾನ  ಮಾಡಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅಲ್ಲು ಅರ್ಜುನ್, ಎಲ್ಲರೂ ಮತ ಚಲಾಯಿಸಿ. ಮತದಾನ ಮಾಡುವುದು ದೇಶದ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಮುಂದಿನ ಐದು ವರ್ಷಕ್ಕೆ ಇದು ಪ್ರಮುಖ ದಿನವಾಗಿದೆ ಎಂದು ಹೇಳಿದ್ದಾರೆ.

ಹೈದರಾಬಾದ್‌ನಲ್ಲಿ ಮತ ಚಲಾಯಿಸಿದ ನಂತರ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಾತನಾಡಿ, ಬಿಜೆಪಿಯ ಸಿದ್ಧಾಂತ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಪ್ರಧಾನಿ ಮೋದಿ ನೀಡಿರುವ ಹೇಳಿಕೆಗಳನ್ನು ಜನರು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: “ಕೇಜ್ರಿವಾಲ್ ಕಿ ಗ್ಯಾರಂಟಿ” ಘೋಷಣೆ: ಉಚಿತ ವಿದ್ಯುತ್‌ ಸೇರಿ 10 ಗ್ಯಾರೆಂಟಿಗಳನ್ನು ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...