Homeಮುಖಪುಟ'ಬಂಗಾಳ ಚುನಾವಣೆ :ಬಿಜೆಪಿ ಗೆದ್ದರೆ ಈ ಕ್ಷೇತ್ರ ತ್ಯಜಿಸುತ್ತೇನೆ' ಮಾತು ಮತ್ತೆ ನೆನಪಿಸಿದ ಪ್ರಶಾಂತ್ ಕಿಶೋರ್

‘ಬಂಗಾಳ ಚುನಾವಣೆ :ಬಿಜೆಪಿ ಗೆದ್ದರೆ ಈ ಕ್ಷೇತ್ರ ತ್ಯಜಿಸುತ್ತೇನೆ’ ಮಾತು ಮತ್ತೆ ನೆನಪಿಸಿದ ಪ್ರಶಾಂತ್ ಕಿಶೋರ್

- Advertisement -
- Advertisement -

“ನನ್ನ ಕೊನೆಯ ಟ್ವೀಟ್‌ನಲ್ಲಿ ಹೇಳಿದ್ದನ್ನು ಮಾಡಲು ಮೇ 2ರವರೆಗೆ ಕಾಯಿರಿ” ಎಂದು ಪಶ್ಚಿಮ ಬಂಗಾಳದ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. 2021ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎರಡಂಕಿಯನ್ನು ದಾಟಿದರೆ ತಾವು ರಾಜಕೀಯ ವಿಶ್ಲೇಷಣೆ ಕ್ಷೇತ್ರ ತ್ಯಜಿಸುವುದಾಗಿ ಈ ಹಿಂದೆ ಅವರು ಹೇಳಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಪ್ರಶಾಂತ್, “ಪ್ರಜಾಪ್ರಭುತ್ವದ ಉಳಿವಿಗಾಗಿ ಭಾರತದಲ್ಲಿ ನಡೆಯುತ್ತಿರುವ ಪ್ರಮುಖ ಕದನಗಳಲ್ಲಿ ಒಂದು ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿದೆ. ಇಲ್ಲಿನ ಜನರು ಸರಿಯಾದುದನ್ನು ಆಯ್ಕೆ ಮಾಡುವ ಮೂಲಕ ತಮ್ಮ ಸ್ಪಷ್ಟ ಸಂದೇಶವನ್ನು ತಿಳಿಸಲು ಸಜ್ಜಾಗಿದ್ದಾರೆ. ಪಶ್ಚಿಮ ಬಂಗಾಳ ತನ್ನ ಸ್ವಂತ ಮಗಳನ್ನು ಬಯಸುತ್ತಿದೆ. ನನ್ನ ಕೊನೆಯ ಟ್ವೀಟ್‌ನಲ್ಲಿ ಹೇಳಿದ್ದನ್ನು ಮಾಡಲು ಮೇ 2ರವರೆಗೆ ಕಾಯಿರಿ” ಎಂದು ಬರೆದುಕೊಂಡಿದ್ದಾರೆ.

ಭಾರೀ ಕುತೂಹಲ ಹುಟ್ಟಿಸಿರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕೆಂದು ಬಿಜೆಪಿ ಹಠ ತೊಟ್ಟಿದೆ. ಇದಕ್ಕೆ ಮಾಧ್ಯಮಗಳು ಸಾಕಷ್ಟು ಹೈಪ್ ನೀಡಿದರೆ, ಹಲವಾರು ಟಿಎಂಸಿ ಮುಖಂಡರು ಒಬ್ಬೊಬ್ಬರಾಗಿ ಬಿಜೆಪಿ ಸೇರುತ್ತಿದ್ದಾರೆ. ಇಷ್ಟೆಲ್ಲದರ ನಡುವೆಯೂ ಬಿಜೆಪಿ ಅಲ್ಲಿ ಎರಡಂಕಿ ದಾಟಲು ಹೆಣಗಾಡುತ್ತಿದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದರು.

ಇದನ್ನೂ ಓದಿ: COW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್‌ವಾಲಾ ಗಾಯಬ್!

ಡಿಸಂಬರ್ 21ರಂದು ಟ್ವೀಟ್ ಮಾಡಿದ್ದ ಅವರು “ಮಾಧ್ಯಮಗಳ ಭಾರೀ ಪ್ರಚಾರದ ನಡುವೆಯೂ ವಾಸ್ತವದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿ ಸ್ಥಾನ ಮುಟ್ಟಲು ಹೆಣಗಾಡುತ್ತಿದೆ. ಒಂದು ವೇಳೆ ಅವರು ಈ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇ ಆದಲ್ಲಿ ನಾನು ಈ ಕ್ಷೇತ್ರ (ರಾಜಕೀಯ) ತ್ಯಜಿಸುತ್ತೇನೆ. ಬರೆದಿಟ್ಟುಕೊಳ್ಳಿ” ಎಂದು ಸವಾಲು ಹಾಕಿದ್ದರು.

ಈ ಟ್ವೀಟ್‌ ಅನ್ನು ಸೇವ್ ಮಾಡಿಕೊಳ್ಳಿ. ಒಂದು ವೇಳೆ ನನ್ನ ಊಹೆಗಿಂತ ಬಿಜೆಪಿ ಹೆಚ್ಚಿನ ಸಾಧನೆ ಮಾಡಿದರೆ ನಾನು ಈ ಕ್ಷೇತ್ರ ತ್ಯಜಿಸುತ್ತೇನೆ ಎಂದು ಪ್ರಶಾಂತ್ ಕಿಶೋರ್ ಘೋಷಿಸಿದ್ದರು.

ಪ್ರಶಾಂತ್ ಕಿಶೋರ್ ಭಾರತದ ರಾಜಕೀಯ ಚತುರ ಎಂದು ಹೆಸರು ಪಡೆದವರು. 2013 ರಲ್ಲಿ ನರೇಂದ್ರ ಮೋದಿ ಪರವಾಗಿ ಕೆಲಸ ಮಾಡಿದ್ದ ಅವರು ನಂತರ ಬಿಜೆಪಿಯಿಂದ ದೂರವಾಗಿದ್ದಾರೆ. ಆಂದ್ರದಲ್ಲಿ ಜಗನ್ ಪರ ಮತ್ತು ದೆಹಲಿಯಲ್ಲಿ ಕೇಜ್ರಿವಾಲ್ ಪರ ಸೇರಿದಂತೆ ಹಲವು ಯಶಸ್ವಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಸದ್ಯಕ್ಕೆ ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ತಮಿಳುನಾಡು ಚುನಾವಣೆಯಲ್ಲಿಯೂ ಸಹ ಡಿಎಂಕೆ ಪರವಾಗಿ ಕೆಲಸ ಮಾಡುತ್ತಿದ್ದಾರೆ.

ಜೆಡಿಯು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಕಿಶೋರ್ ಅಲ್ಲಿನ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಎ ಎನ್‌ಆರ್‌ಸಿ ಪರ ಮತ ಹಾಕಿದನ್ನು ಖಂಡಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರದ ಯುವಜನರಿಗೆ ಉದ್ಯೋಗ ನೀಡುವುದರ ಪರ ಕೆಲಸ ಮಾಡುತ್ತಿದ್ದಾರೆ.


ಇದನ್ನೂ ಓದಿ: ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಂಪಸ್ ಹಿಂಸಾಚಾರದ ಬೆನ್ನಲ್ಲೇ SRFTI ಬಳಿ ರ್ಯಾಲಿ: ವಿದ್ಯಾರ್ಥಿಗಳಿಂದ ಕೇಂದ್ರ ಸಚಿವರಿಗೆ ತುರ್ತು ರಕ್ಷಣೆಯ ಮನವಿ

ಕೋಲ್ಕತ್ತಾದ ಸತ್ಯಜಿತ್ ರೇ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (SRFTI)ಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯ ಬೆನ್ನಲ್ಲೇ, ಸಂಸ್ಥೆಯ ಸಮೀಪ ಹಿಂದೂ ಜಾಗರಣ್ ಮಂಚ್ ರ್ಯಾಲಿ ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು...

ಮಲ್ಲೇಶ್ವರಂ ಕ್ಷೇತ್ರದಲ್ಲಿ ಫಾರಂ-7 ಅಕ್ರಮ: ಬಿಜೆಪಿಯ ಬೂತ್ ಏಜೆಂಟ್ ವಿರುದ್ಧ FIR

ರಾಜ್ಯಾದ್ಯಂತ ತೀವ್ರ ರಾಜಕೀಯ ವಿವಾದ ಹಾಗೂ ಸಂಚಲನ ಮೂಡಿಸಿರುವ ಮತದಾರರ ಪಟ್ಟಿ ಪರಿಷ್ಕರಣೆಯ (SIR) ಅಕ್ರಮಗಳ ಸರಣಿಗೆ ಇದೀಗ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರವೂ ಸೇರ್ಪಡೆಯಾಗಿದೆ. ಫಾರಂ-7 ಅನ್ನು ಅಸ್ತ್ರವಾಗಿಸಿಕೊಂಡು ಜೀವಂತವಾಗಿರುವ ಹಾಗೂ...

ಹೆರಿಗೆಗೆ 15000 ರೂ. ಲಂಚದ ಬೇಡಿಕೆ ಆರೋಪ: ಗರ್ಭಿಣಿಯನ್ನು ಆಚೆಗೆ ತಳ್ಳಿದ ಸಿಬ್ಬಂದಿ, ಆಸ್ಪತ್ರೆ ಗೇಟ್‌ ಬಳಿಯೇ ಮಗುವಿಗೆ ಜನ್ಮ ನೀಡಿದ ತಾಯಿ

ಉತ್ತರ ಪ್ರದೇಶದ ರಾಯ್‌ಬರೇಲಿಯ ಜಿಲ್ಲಾ ಮಹಿಳಾ ಆಸ್ಪತ್ರೆಯ ಗೇಟ್ ಬಳಿಯೇ ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿದ ಅತ್ಯಂತ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಶನಿವಾರ (ಅಕ್ಟೋಬರ್ 3) ತಡರಾತ್ರಿ ಈ ಘಟನೆ...

ಎಸ್‌ಐಆರ್ ವಿರುದ್ಧ ಮುಂಬೈ ‘ಗರ್ಜನ ಮೋರ್ಚಾ’ದಲ್ಲಿ ರಾಜ್ ಠಾಕ್ರೆ ಗುಡುಗು: EVM ಬದಲು ಬ್ಯಾಲೆಟ್ ಪೇಪರ್‌ಗೆ ಮರಳಲು ಆಗ್ರಹ

ಮುಂಬೈ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಚುನಾವಣಾ ವ್ಯವಸ್ಥೆಯ ಪಾರದರ್ಶಕತೆ ಕುರಿತು ದೇಶಾದ್ಯಂತ ಹೆಚ್ಚುತ್ತಿರುವ ಆಕ್ರೋಶದ ನಡುವೆ, ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ...

ಉತ್ತರ ಪ್ರದೇಶ: ಯೋಧನ ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಟ್ರಕ್‌ಗೆ ಡಿಕ್ಕಿ, ಆತನ ಕುಟುಂಬದ 3 ಮಂದಿ ಮತ್ತು ಚಾಲಕ ಸಾವು 

ಸುಲ್ತಾನ್‌ಪುರ: ಸೇನೆಯ ಸುಬೇದಾರ್ ಮೇಜರ್ ಒಬ್ಬರ ಮೃತದೇಹವನ್ನು ಹುಟ್ಟೂರಿಗೆ ಕೊಂಡೊಯ್ಯುತ್ತಿದ್ದ ಸೇನಾ ಆಂಬ್ಯುಲೆನ್ಸ್ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಮೃತ ಯೋಧನ ಕುಟುಂಬದ ಮೂವರು ಸದಸ್ಯರು ಸೇರಿದಂತೆ ನಾಲ್ವರು...

ಕೊಪ್ಪದಲ್ಲಿ ಫಾರಂ-7 ಮೂಲಕ ಅರ್ಹ 243 ಮತದಾರರ ಹೆಸರು ತೆಗೆಯಲು ಯತ್ನ: ಸಿಕ್ಕಿಬಿದ್ದ ಮೇಲೆ ಆಕ್ಷೇಪಣೆ ಹಿಂಪಡೆದ ಬಿಜೆಪಿಗರು

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, ನಿಯಮಗಳನ್ನು ದುರುಪಯೋಗಪಡಿಸಿಕೊಂಡು ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲು ನಡೆಯುತ್ತಿರುವ ಪ್ರಯತ್ನಗಳು ರಾಜ್ಯದ ನಾನಾ ಭಾಗಗಳಲ್ಲಿ ಬೆಳಕಿಗೆ ಬರುತ್ತಿವೆ....

ಗಾಂಧಿ ಜಯಂತಿ ಕಾರ್ಯಕ್ರಮದ ಮೇಲೆ ಬಿಜೆಪಿ ದಾಳಿ ಆರೋಪ: ಗಾಂಧಿ ಭಾವಚಿತ್ರ ಹರಿದುಹಾಕಿ ಬೆದರಿಕೆ; ಎಸ್‌ಎಫ್‌ಐ ನಾಯಕ ಸೇರಿ ಮೂವರ ಬಂಧನ

ಕೋಲ್ಕತ್ತಾ: ಮಹಾತ್ಮ ಗಾಂಧಿಯವರ ಜನ್ಮದಿನದ ಅಂಗವಾಗಿ ಎಡಪಕ್ಷಗಳು ಆಯೋಜಿಸಿದ್ದ ಕಾರ್ಯಕ್ರಮದ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಬಿರಾಟಿಯಲ್ಲಿ ಕೇಳಿಬಂದಿದೆ. ಕಾರ್ಯಕ್ರಮದ ವೇದಿಕೆ ಮತ್ತು...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಕಠೋರ ಮತ್ತು ಅಸಭ್ಯ ನಡವಳಿಕೆ ಒಪ್ಪಲಾಗದು : ಜಂತರ್ ಮಂತರ್‌ನಲ್ಲಿ ಪತ್ರಕರ್ತರ ಮೇಲಿನ ದೌರ್ಜನ್ಯಕ್ಕೆ ಪ್ರೆಸ್ ಕ್ಲಬ್ ಆಫ್ ಇಂಡಿಯಾ ತೀವ್ರ ಖಂಡನೆ

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ದೆಹಲಿ ಪೊಲೀಸರು ಮಾಧ್ಯಮ ಪ್ರತಿನಿಧಿಗಳ ವಿರುದ್ಧ ನಡೆದುಕೊಂಡ ರೀತಿ ಮತ್ತು ಅವರ ಮೇಲಿನ ದೌರ್ಜನ್ಯವನ್ನು ಖಂಡಿಸಿ 'ಪ್ರೆಸ್ ಕ್ಲಬ್...

SIR ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಕೇರಳದಲ್ಲಿ ಗ್ಯಾನೇಶ್ ಕುಮಾರ್ ವಿರುದ್ಧ ಹಳೆಯ ಪ್ರಕರಣ ಮರುತನಿಖೆಗೆ ಆದೇಶ 

ತಿರುವನಂತಪುರಂ: ದೇಶದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ದೇಶಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಅವರ ಅಧಿಕಾರಾವಧಿಗೆ ಸಂಬಂಧಿಸಿದ...

2006 ಎಂಜಿನಿಯರ್ ಆತ್ಮಹತ್ಯೆ ಪ್ರಕರಣ : ಗ್ಯಾನೇಶ್ ಕುಮಾರ್ ವಿರುದ್ಧ ಮರುತನಿಖೆಗೆ ಕೇರಳಂ ಸರ್ಕಾರ ಆದೇಶ

ಪ್ರಸ್ತುತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಕ್ರಮಗಳ ಆರೋಪ ಎದುರಿಸುತ್ತಿರುವ ದೇಶದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರಿಗೆ 2006ರ ಹಳೆಯ ಭ್ರಷ್ಟಾಚಾರ ಪ್ರಕರಣವೊಂದು ಮತ್ತೆ ಕಂಠಕವಾಗಿ ಪರಿಣಮಿಸಿದೆ....