ಪ್ರಶಾಂತ್ ಕಿಶೋರ್

“ನನ್ನ ಕೊನೆಯ ಟ್ವೀಟ್‌ನಲ್ಲಿ ಹೇಳಿದ್ದನ್ನು ಮಾಡಲು ಮೇ 2ರವರೆಗೆ ಕಾಯಿರಿ” ಎಂದು ಪಶ್ಚಿಮ ಬಂಗಾಳದ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. 2021ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎರಡಂಕಿಯನ್ನು ದಾಟಿದರೆ ತಾವು ಟ್ವಿಟರ್ ತ್ಯಜಿಸುವುದಾಗಿ ಈ ಹಿಂದೆ ಅವರು ಹೇಳಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಪ್ರಶಾಂತ್, “ಪ್ರಜಾಪ್ರಭುತ್ವದ ಉಳಿವಿಗಾಗಿ ಭಾರತದಲ್ಲಿ ನಡೆಯುತ್ತಿರುವ ಪ್ರಮುಖ ಕದನಗಳಲ್ಲಿ ಒಂದು ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿದೆ. ಇಲ್ಲಿನ ಜನರು ಸರಿಯಾದುದನ್ನು ಆಯ್ಕೆ ಮಾಡುವ ಮೂಲಕ ತಮ್ಮ ಸ್ಪಷ್ಟ ಸಂದೇಶವನ್ನು ತಿಳಿಸಲು ಸಜ್ಜಾಗಿದ್ದಾರೆ. ಪಶ್ಚಿಮ ಬಂಗಾಳ ತನ್ನ ಸ್ವಂತ ಮಗಳನ್ನು ಬಯಸುತ್ತಿದೆ. ನನ್ನ ಕೊನೆಯ ಟ್ವೀಟ್‌ನಲ್ಲಿ ಹೇಳಿದ್ದನ್ನು ಮಾಡಲು ಮೇ 2ರವರೆಗೆ ಕಾಯಿರಿ” ಎಂದು ಬರೆದುಕೊಂಡಿದ್ದಾರೆ.

ಭಾರೀ ಕುತೂಹಲ ಹುಟ್ಟಿಸಿರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕೆಂದು ಬಿಜೆಪಿ ಹಠ ತೊಟ್ಟಿದೆ. ಇದಕ್ಕೆ ಮಾಧ್ಯಮಗಳು ಸಾಕಷ್ಟು ಹೈಪ್ ನೀಡಿದರೆ, ಹಲವಾರು ಟಿಎಂಸಿ ಮುಖಂಡರು ಒಬ್ಬೊಬ್ಬರಾಗಿ ಬಿಜೆಪಿ ಸೇರುತ್ತಿದ್ದಾರೆ. ಇಷ್ಟೆಲ್ಲದರ ನಡುವೆಯೂ ಬಿಜೆಪಿ ಅಲ್ಲಿ ಎರಡಂಕಿ ದಾಟಲು ಹೆಣಗಾಡುತ್ತಿದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದರು.

ಇದನ್ನೂ ಓದಿ: COW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್‌ವಾಲಾ ಗಾಯಬ್!

ಡಿಸಂಬರ್ 21ರಂದು ಟ್ವೀಟ್ ಮಾಡಿದ್ದ ಅವರು “ಮಾಧ್ಯಮಗಳ ಭಾರೀ ಪ್ರಚಾರದ ನಡುವೆಯೂ ವಾಸ್ತವದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿ ಸ್ಥಾನ ಮುಟ್ಟಲು ಹೆಣಗಾಡುತ್ತಿದೆ. ಒಂದು ವೇಳೆ ಅವರು ಈ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇ ಆದಲ್ಲಿ ನಾನು ಟ್ವಿಟರ್‌ ಅನ್ನು ತ್ಯಜಿಸುತ್ತೇನೆ. ಬರೆದಿಟ್ಟುಕೊಳ್ಳಿ” ಎಂದು ಸವಾಲು ಹಾಕಿದ್ದರು.

ಈ ಟ್ವೀಟ್‌ ಅನ್ನು ಸೇವ್ ಮಾಡಿಕೊಳ್ಳಿ. ಒಂದು ವೇಳೆ ನನ್ನ ಊಹೆಗಿಂತ ಬಿಜೆಪಿ ಹೆಚ್ಚಿನ ಸಾಧನೆ ಮಾಡಿದರೆ ನಾನು ಈ ಕ್ಷೇತ್ರ ತ್ಯಜಿಸುತ್ತೇನೆ ಎಂದು ಪ್ರಶಾಂತ್ ಕಿಶೋರ್ ಘೋಷಿಸಿದ್ದರು.

ಪ್ರಶಾಂತ್ ಕಿಶೋರ್ ಭಾರತದ ರಾಜಕೀಯ ಚತುರ ಎಂದು ಹೆಸರು ಪಡೆದವರು. 2013 ರಲ್ಲಿ ನರೇಂದ್ರ ಮೋದಿ ಪರವಾಗಿ ಕೆಲಸ ಮಾಡಿದ್ದ ಅವರು ನಂತರ ಬಿಜೆಪಿಯಿಂದ ದೂರವಾಗಿದ್ದಾರೆ. ಆಂದ್ರದಲ್ಲಿ ಜಗನ್ ಪರ ಮತ್ತು ದೆಹಲಿಯಲ್ಲಿ ಕೇಜ್ರಿವಾಲ್ ಪರ ಸೇರಿದಂತೆ ಹಲವು ಯಶಸ್ವಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಸದ್ಯಕ್ಕೆ ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ತಮಿಳುನಾಡು ಚುನಾವಣೆಯಲ್ಲಿಯೂ ಸಹ ಡಿಎಂಕೆ ಪರವಾಗಿ ಕೆಲಸ ಮಾಡುತ್ತಿದ್ದಾರೆ.

ಜೆಡಿಯು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಕಿಶೋರ್ ಅಲ್ಲಿನ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಎ ಎನ್‌ಆರ್‌ಸಿ ಪರ ಮತ ಹಾಕಿದನ್ನು ಖಂಡಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರದ ಯುವಜನರಿಗೆ ಉದ್ಯೋಗ ನೀಡುವುದರ ಪರ ಕೆಲಸ ಮಾಡುತ್ತಿದ್ದಾರೆ.


ಇದನ್ನೂ ಓದಿ: ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here