Homeಮುಖಪುಟಲಾಕ್‌ಡೌನ್ ವಿಧಿಸಿದ್ದು ನೀವು, ಈಗ ನೀವೇ ನೆರವು ನೀಡಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ಲಾಕ್‌ಡೌನ್ ವಿಧಿಸಿದ್ದು ನೀವು, ಈಗ ನೀವೇ ನೆರವು ನೀಡಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ಕೇಂದ್ರ ಸರ್ಕಾರದ ಲಾಕ್ ಡೌನ್ ನಿರ್ಧಾರದಿಂದ ಸಮಸ್ಯೆ ಉದ್ಭವವಾಗಿದೆ. ಆದರೆ ಇದು ವ್ಯವಹಾರದ ಬಗ್ಗೆ ಮಾತನಾಡುವ ಸಮಯವಲ್ಲ. ಜನರ ದುಸ್ಥಿತಿಯನ್ನೂ ನೋಡಬೇಕಾಗಿದೆ ಎಂದು ಕೋರ್ಟ್ ಹೇಳಿದೆ.

- Advertisement -
- Advertisement -

ಲಾಕ್‌ಡೌನ್ ಸಮಯದಲ್ಲಿನ ಸಾಲ ಮರುಪಾವತಿ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ನೀವು ಸಂಪೂರ್ಣ ದೇಶವನ್ನು ಲಾಕ್ ಮಾಡಿದ್ದೀರಿ, ಈಗ ಪರಿಹಾರ ನೀಡಿ ಎಂದು ತಾಕೀತು ಮಾಡಿದೆ.

ಕೇಂದ್ರ ಸರ್ಕಾರ ಇಡೀ ದೇಶವನ್ನು ಲಾಕ್‌ಡೌನ್ ಮಾಡಿದ ಕಾರಣ ಜನರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವಂತಾಗಿದೆ. ಕೆಲಸವಿಲ್ಲದೆ, ಆದಾಯವಿಲ್ಲದೆ ದಿನಗಳನ್ನು ದೂಡಿದ್ದಾರೆ. ನೀವು ಕಠಿಣ ಲಾಕ್‌ಡೌನ್ ಘೊಷಿಸಿದ್ದರಿಂದ ಇಂತಹ ಸ್ಥಿತಿ ಒದಗಿದೆ. ಹಾಗಾಗಿಯೇ ಮೊರೊಟೋರಿಯಂ ಅವಧಿಯ ನಂತರ ಸಾಲ ಮರುಪಾವತಿಯ ಮೇಲಿನ ಬಡ್ಡಿ ದರವನ್ನು ಸರ್ಕಾರ ಮತ್ತು ಆರ್‌ಬಿಐ ಏಕೆ ಮನ್ನಾ ಮಾಡಬಾರದು? ಎಂದು ಸುಪ್ರೀಂ ಕೋರ್ಟ್ ಕೇಂದ್ರವನ್ನು ಪ್ರಶ್ನಿಸಿದೆ.

ಲಾಕ್‌ಡೌನ್ ಸಮಯದಲ್ಲಿ ಮೊರೊಟೋರಿಯಂ ಅವಧಿಯ ಸಾಲ ಮರುಪಾವತಿಯ ಮೇಲಿನ ಬಡ್ಡಿಯನ್ನು ರದ್ದುಗೊಳಿಸಬೇಕು. ಮಾರ್ಚ್ 27 ರಂದು ಹೊರಡಿಸಲಾದ ಆರ್‌ಬಿಐ ಅಧಿಸೂಚನೆಯ ಕೆಲವು ಭಾಗವನ್ನು ರದ್ದುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್‌‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್, ಸರ್ಕಾರವು ಆರ್‌ಬಿಐ ಹಿಂದೆ ಅವಿತುಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಪ್ರಶಾಂತ್ ಭೂಷಣ್‌ರ ನ್ಯಾಯಾಂಗ ನಿಂದನೆ ಪ್ರಕರಣದೆಡೆಗೆ ನನಗೇಕೆ ಕುತೂಹಲವೆಂದರೆ..; ಯೋಗೇಂದ್ರ ಯಾದವ್

ಈ ಕ್ರಮವು ಬ್ಯಾಂಕುಗಳ ವ್ಯವಹಾರಗಳಿಗೆ ಧಕ್ಕೆ ತರುತ್ತದೆ ಎಂಬ ಕೇಂದ್ರ ಸರ್ಕಾರದ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರದ ಲಾಕ್ ಡೌನ್ ನಿರ್ಧಾರದಿಂದ ಸಮಸ್ಯೆ ಉದ್ಭವವಾಗಿದೆ. ಆದರೆ ಇದು ವ್ಯವಹಾರದ ಬಗ್ಗೆ ಮಾತನಾಡುವ ಸಮಯವಲ್ಲ. ಜನರ ದುಸ್ಥಿತಿಯನ್ನೂ ನೋಡಬೇಕಾಗಿದೆ ಎಂದು ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ಹೇಳಿದ್ದಾರೆ.

ಜೊತೆಗೆ ವಿಪತ್ತು ನಿರ್ವಹಣಾ ಕಾಯ್ದೆಯ ಅಡಿಯಲ್ಲಿ ಸಾಲ ಮರುಪಾವತಿ ಮೇಲಿನ ಬಡ್ಡಿ ಮನ್ನಾ ಮಾಡುವ ಅಧಿಕಾರ ಕೇಂದ್ರ ಸರ್ಕಾರ ಹೊಂದಿದ್ದರೂ ಈ ಬಗ್ಗೆ ತನ್ನ ನಿಲುವನ್ನು ಈವರೆಗೆ ಸ್ಪಷ್ಟಪಡಿಸಿಲ್ಲ. ಹೀಗಾಗಿ ಲಾಕ್ ಡೌನ್ ಸಮಯದಲ್ಲಿನ ಸಾಲದ ಮರುಪಾವತಿ ಮೇಲಿನ ಬಡ್ಡಿ ರದ್ದುಗೊಳಿಸುವಂತೆ ಸಲ್ಲಿಸಲಾಗಿರುವ ಅರ್ಜಿಯ ಮೇಲೆ ಸೆಪ್ಟೆಂಬರ್ 1 ರೊಳಗೆ ತನ್ನ ನಿರ್ಧಾರವನ್ನು ಸ್ಪಷ್ಟ ಪಡಿಸಬೇಕಾಗಿ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಅರ್ಜಿದಾರರ ಪರವಾಗಿ ಕಪಿಲ್ ಸಿಬಲ್ ಹಾಜರಾಗಿದ್ದರು. ಕೇಂದ್ರದ ಪರವಾಗಿ ಸಾಲಿಟರ್‌ ಜನರಲ್ ತುಷಾತ್‌ ಮೆಹ್ತಾ ವಾದಿಸಿದರು.


ಇದನ್ನೂ ಓದಿ; NEET, JEE ಪರೀಕ್ಷೆಗಳನ್ನು ಮುಂದೂಡಿ: ನಟ ಸೋನು ಸೂದ್ ಆಗ್ರಹ

Also Read: SC to Govt on Waiver of Interest: Think About People, Not Just Businesses

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...