Homeಮುಖಪುಟ'ವಕ್ಫ್‌ ಮಸೂದೆ' ಸಂವಿಧಾನವನ್ನು ದುರ್ಬಲಗೊಳಿಸುವ ಯತ್ನ: ಕೇಂದ್ರದ ವಿರುದ್ಧ ಗೌರವ್‌ ಗೊಗೊಯ್ ವಾಗ್ದಾಳಿ

‘ವಕ್ಫ್‌ ಮಸೂದೆ’ ಸಂವಿಧಾನವನ್ನು ದುರ್ಬಲಗೊಳಿಸುವ ಯತ್ನ: ಕೇಂದ್ರದ ವಿರುದ್ಧ ಗೌರವ್‌ ಗೊಗೊಯ್ ವಾಗ್ದಾಳಿ

- Advertisement -
- Advertisement -

ಬುಧವಾರ (ಏ.2) ಸಂಸತ್ತಿನಲ್ಲಿ ಮಂಡನೆಯಾದ ವಕ್ಫ್‌ ತಿದ್ದುಪಡಿ ಮಸೂದೆಯ ಕುರಿತು ಮಾತನಾಡಿದ ಲೋಕಸಭೆಯ ಪ್ರತಿಪಕ್ಷದ ಉಪ ನಾಯಕ ಹಾಗೂ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ “ನರೇಂದ್ರ ಮೋದಿ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ ಮೂಲಕ ‘ಸಂವಿಧಾನವನ್ನು ದುರ್ಬಲಗೊಳಿಸಲು’ ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

“ಈ ಮಸೂದೆಯು ಸಂವಿಧಾನವನ್ನು ದುರ್ಬಲಗೊಳಿಸುವ, ಅಲ್ಪಸಂಖ್ಯಾತ ಸಮುದಾಯವನ್ನು ಅವಮಾನಿಸುವ, ಭಾರತೀಯ ಸಮಾಜವನ್ನು ವಿಭಜಿಸುವ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುವ ಗುರಿಯನ್ನು ಹೊಂದಿದೆ” ಎಂದರು.

ಮಸೂದೆ ಕುರಿತ ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಪರಿಗಣಿಸಿ ಜಂಟಿ ಸಂಸದೀಯ ಸಮಿತಿಯಲ್ಲಿ (ಜೆಪಿಸಿ) ಚರ್ಚೆ ನಡೆದಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರ ಸಮರ್ಥನೆಯನ್ನು ತಿರಸ್ಕರಿಸಿದ ಗೊಗೊಯ್ “ನಿಮಯ ಪ್ರಕಾರ ಚರ್ಚೆ ನಡೆದಿಲ್ಲ” ಎಂದು ಹೇಳಿದರು.

ವಿರೋಧ ಪಕ್ಷಗಳು ಸೂಚಿಸಿದ ಒಂದೇ ಒಂದು ತಿದ್ದುಪಡಿಯನ್ನು ಅಂಗೀಕರಿಸಿಲ್ಲ. ಅಭಿಪ್ರಾಯ ಸಂಗ್ರಹಿಸುವಾಗ ವಕ್ಫ್‌ ಬಗ್ಗೆ ಮಾಹಿತಿ ಇಲ್ಲದವರನ್ನು ಜೆಪಿಸಿಗೆ ಆಹ್ವಾನಿಸಲಾಗಿದೆ ಎಂದರು.

ಸರ್ಕಾರವು ಭವಿಷ್ಯದಲ್ಲಿ ಇತರ ಅಲ್ಪಸಂಖ್ಯಾತರ ಮೇಲೂ ದಾಳಿ ನಡೆಸಲಿದೆ. ಇಂದು ಒಂದು ಸಮುದಾಯದ ಭೂಮಿಯನ್ನು ಗುರಿಯಾಗಿಸಿಕೊಂಡಿದ್ದಾರೆ; ನಾಳೆ ಇವರು ಇನ್ನೊಂದು ಸಮುದಾಯದ ಮೇಲೆ ದಾಳಿ ಮಾಡುತ್ತಾರೆ ಎಂದು ಗೊಗೊಯ್ ಎಚ್ಚರಿಸಿದರು.

ಇದಕ್ಕೂ ಮೊದಲು, ವಕ್ಫ್‌ ತಿದ್ದುಪಡಿ ಮಸೂದೆ ಮಂಡಿಸಿದ ಸಚಿವ ಕಿರಣ್‌ ರಿಜಿಜು “ಸಂವಿಧಾನದ 25(1) ನೇ ವಿಧಿಯಲ್ಲಿ ಉಲ್ಲೇಖಿಸಿರುವಂತೆ “ಧರ್ಮವನ್ನು ಪ್ರತಿಪಾದಿಸುವ, ಆಚರಿಸುವ ಮತ್ತು ಪ್ರಚಾರ ಮಾಡುವ” ಯಾರ ಸ್ವಾತಂತ್ರ್ಯದಲ್ಲೂ ನರೇಂದ್ರ ಮೋದಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿಲ್ಲ” ಎಂದು ಹೇಳಿದರು.

“ಈ ಮಸೂದೆಯು ವಕ್ಫ್ ಆಸ್ತಿಗಳ ನಿರ್ವಹಣೆಗೆ ಸಂಬಂಧಿಸಿದೆ. ಇತರರ ಧರ್ಮಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ರಿಜಿಜು ಸ್ಪಷ್ಟಪಡಿಸಿದರು.

ಒಬ್ಬ ವ್ಯಕ್ತಿ ಐದು ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಪಾಲಿಸಿದ್ದರೆ ಮಾತ್ರ ಆಸ್ತಿಯನ್ನು ವಕ್ಫ್‌ ಮಾಡಲು ಅವರು ಅರ್ಹರು ಎಂಬ ಸಚಿವ ರಿಜಿಜು ಹೇಳಿಕೆಯನ್ನು ಪ್ರಶ್ನಿಸಿದ ಗೊಗೊಯ್ “ಇತರ ಧರ್ಮಗಳ ಜನರಿಗೆ ನೀವು ಐದು ವರ್ಷಗಳಿಂದ ಧರ್ಮ ಪಾಲಿಸುತ್ತಿದ್ದೀರಾ? ಎಂದು ಸರ್ಕಾರ ಪ್ರಮಾಣ ಪತ್ರ ಕೇಳುತ್ತದಯೇ? ಹೀಗಿರುವಾಗ ಈ ಮಸೂದೆಯಲ್ಲಿ ಮಾತ್ರ ಈ ಮಾನದಂಡವನ್ನು ಅಳವಡಿಸಲಾಗಿದೆ. ಸರ್ಕಾರ ಧರ್ಮದ ವಿಚಾರದಲ್ಲಿ ಏಕೆ ಹಸ್ತಕ್ಷೇಪ ಮಾಡುತ್ತಿದೆ ಎಂದು ಕೇಳಿದರು.

ಮಸೂದೆಯಲ್ಲಿ ಪ್ರಸ್ತಾಪಿಸಲಾದ ತಿದ್ದುಪಡಿಗಳು ಭಾರತದಲ್ಲಿ ಹೆಚ್ಚಿನ ಮೊಕದ್ದಮೆಗಳಿಗೆ ಕಾರಣವಾಗುತ್ತವೆ ಎಂದ ಗೊಗೊಯ್, ತಿದ್ದುಪಡಿಗಳು ಮಸೂದೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರಬೇಕೇ ಹೊರತು, ಹೆಚ್ಚಿನ ವಿವಾದಗಳನ್ನು ಸೃಷ್ಟಿಸಬಾರದು ಎಂದರು.

ವಕ್ಫ್‌ ಮಸೂದೆ ವಿರುದ್ದ ಕಾನೂನು ಹೋರಾಟ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...