Homeಚಳವಳಿಕೇಂದ್ರದ ಮೇಲೆ ಒತ್ತಡ ತರಲು ಪ್ರತಿಭಟನೆಯನ್ನು ದೆಹಲಿಗೆ ವರ್ಗಾಯಿಸಿ: ರೈತರಲ್ಲಿ ಅಮರಿಂದರ್ ಸಿಂಗ್ ಮನವಿ

ಕೇಂದ್ರದ ಮೇಲೆ ಒತ್ತಡ ತರಲು ಪ್ರತಿಭಟನೆಯನ್ನು ದೆಹಲಿಗೆ ವರ್ಗಾಯಿಸಿ: ರೈತರಲ್ಲಿ ಅಮರಿಂದರ್ ಸಿಂಗ್ ಮನವಿ

- Advertisement -
- Advertisement -

ಕಳೆದ ವರ್ಷ ಆರಂಭಗೊಂಡು ಇನ್ನು ಸಾಗುತ್ತಿರುವ ರೈತ ಪ್ರತಿಭಟನೆ ಪಂಜಾಬಿನ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಒಕ್ಕೂಟ ಸರ್ಕರದ ಮೇಲೆ ಒತ್ತಡ ತರಲು ಪ್ರತಿಭಟನೆಯನ್ನು ದೆಹಲಿಗೆ ವರ್ಗಾಯಿಸಿ ಎಂದಿದ್ದಾರೆ.

ಕಳೆದ ವರ್ಷ ನವೆಂಬರ್‌ 26 ರಿಂದ ದೆಹಲಿಯ ಗಡಿಗಳಲ್ಲಿ ರೈತ ಪ್ರತಿಭಟನೆ ನಡೆಸುತ್ತಿದ್ದರೂ, ಪಂಜಾಬಿನಲ್ಲಿ ಅಕ್ಟೋಬರ್‌ ಒಂದರಿಂದಲೇ ಪ್ರತಿಭಟನೆ ಆರಂಭವಾಗಿತ್ತು. ಇದು ಪಂಜಾಬ್ ಆರ್ಥಿಕತೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕಳವಳ ವ್ಯಕ್ತಪಡಿಸಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು, ಒಕ್ಕೂಟ ಸರ್ಕಾರದ ಮೇಲೆ ಒತ್ತಡ ತರಲು ನವದೆಹಲಿಯಲ್ಲಿರುವ ಸರ್ಕಾರವನ್ನು ಕೇಂದ್ರಿಕರಿಸಿ, ಪಂಜಾಬ್ ಮತ್ತು ರಾಜ್ಯದ ಆಡಳಿತವನ್ನು ಬಿಟ್ಟು ಬಿಡಿ ಎಂದಿದ್ದಾರೆ.

“ನೀವು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಬಯಸಿದರೆ, ನಿಮ್ಮ ಪ್ರತಿಭಟನೆಯನ್ನು ದೆಹಲಿಗೆ ವರ್ಗಾಯಿಸಿ. ನಿಮ್ಮ ಪ್ರತಿಭಟನೆಗಳಿಂದ ಪಂಜಾಬ್‌ಗೆ ತೊಂದರೆ ನೀಡಬೇಡಿ” ಎಂದು ಅಮರಿಂದರ್‌ ಸಿಂಗ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಕರ್ನಾಲ್ ಲಾಠಿಚಾರ್ಜ್ ಕುರಿತ ತನಿಖೆಗೆ ಸಿದ್ಧ- ಹರಿಯಾಣ ಗೃಹ ಸಚಿವ

“ಇಂದಿಗೂ ಸಹ, ರಾಜ್ಯದ 113 ಸ್ಥಳಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ರಾಜ್ಯದ ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತಿದೆ” ಎಂದು ಹೋಶಿಯಾರ್‌ಪುರ ಜಿಲ್ಲೆಯ ಮುಖ್ಲಿಯಾನಾ ಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

“ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಕುಳಿತಿರುವ ರೈತರಿಗೆ ನೆರವು ನೀಡಲು ಒಕ್ಕೂಟ ಸರ್ಕಾರ ಕೃಷಿ ಕಾನೂನುಗಳನ್ನು ಏಕೆ ರದ್ದುಗೊಳಿಸುವುದಿಲ್ಲ” ಎಂದು ಪ್ರಶ್ನಿಸಿದ್ದಾರೆ. ಪಂಜಾಬ್ ಸರ್ಕಾರವು ಕೃಷಿ ಕಾನೂನುಗಳ ವಿರುದ್ಧದ ರೈತ ಪ್ರತಿಭಟನೆಯಲ್ಲಿ ಹುತಾತ್ಮರಾದ ರಾಜ್ಯದ ಪ್ರತಿಯೊಬ್ಬ ರೈತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಮತ್ತು ಉದ್ಯೋಗ ನೀಡಿದೆ ಎಂದಿದ್ದಾರೆ.

ರೈತರ ಬೇಡಿಕೆಗಳಿಗೆ ತಮ್ಮ ಸರ್ಕಾರದ ಸ್ಪಂದಿಸುತ್ತಿದೆ ಎಂದಿರುವ ಅವರು, ರೈತರು ಅವರನ್ನು ಭೇಟಿ ಮಾಡಿದ ನಂತರ ಅವರ ಸರ್ಕಾರ ಇತ್ತೀಚೆಗೆ ಕಬ್ಬಿನ ಬೆಲೆಯನ್ನು ಹೆಚ್ಚಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಹಿಂದೆ, ಮುಖ್ಯಮಂತ್ರಿ ಅಮರಿಂದರ್‌ ಸಿಂಗ್ ಸ್ವತಃ ವಿವಾದಿತ ಮೂರು ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿದ್ದರು. ಅದು ಸಾವಿರಾರು ರೈತರನ್ನು ಕೆರಳಿಸಿ ಪ್ರತಿಭಟನೆ ತೀವ್ರಗೊಳ್ಳಲು ಕಾರಣವಾಗಿತ್ತು.

ಕಳೆದ ನವೆಂಬರ್‌ 26 ರಿಂದ ದೆಹಲಿಯ ಸಿಂಘು, ಟಿಕ್ರಿ, ಗಾಝಿಪುರ್‌ ಮತ್ತು ರಾಜಸ್ಥಾನದ ಶಹಜಾನ್‌ಪುರ ಗಡಿ ಭಾಗಗಳಲ್ಲಿ ಕೃಷಿ ಕಾನೂನುಗಳ ವಿರುದ್ಧ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬಿನ ಎಲ್ಲಾ ಜಿಲ್ಲಾ ಸ್ಥಳಗಳಲ್ಲಿ ಪ್ರತಿಭಟನೆ ಜಾರಿಯಲ್ಲಿದೆ.


ಇದನ್ನೂ ಓದಿ: ಹರಿಯಾಣ :ಕರ್ನಾಲ್‌ ಶಾಶ್ವತ ಪ್ರತಿಭಟನಾ ಸ್ಥಳವಾಗಿ ಉಳಿಯಬಹುದು- ರೈತರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...