Homeಮುಖಪುಟಅಮಿತ್‌ ಶಾರೊಡನೆ ಸಭೆ ನಡೆಸುತ್ತೇನೆ: ಅರವಿಂದ್‌ ಕೇಜ್ರಿವಾಲ್

ಅಮಿತ್‌ ಶಾರೊಡನೆ ಸಭೆ ನಡೆಸುತ್ತೇನೆ: ಅರವಿಂದ್‌ ಕೇಜ್ರಿವಾಲ್

- Advertisement -
- Advertisement -

ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಭೆ ನಡೆಸಲು ಮುಂದಾಗಿದ್ದು ಅದಕ್ಕಾಗಿ ಒತ್ತಾಯಿಸಿದ್ದಾರೆ.

ಜಾಮಿಯಾ ಮಿಲಿಯಾ ಇಸ್ಲಾಮಿಯಾ ಉಪಕುಲಪತಿ ನಜ್ಮಾ ಅಖ್ತರ್‌ರವರು ವಿದ್ಯಾರ್ಥಿಗಳ ಪರವಾಗಿ ನಿಂತಿದ್ದು  “ಕ್ಯಾಂಪಸ್‌ಗೆ ಪೊಲೀಸರ ಪ್ರವೇಶದ ವಿರುದ್ಧ ವಿಶ್ವವಿದ್ಯಾಲಯವು ದೂರು ನೀಡಲಿದೆ ಮತ್ತು ಭಾನುವಾರ ನಡೆದ ಘಟನೆಗಳ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ.

ಭಾನುವಾರ ಭುಗಿಲೆದ್ದ ಹಿಂಸಾಚಾರದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಘಟನೆಯಲ್ಲಿ ಸಂಭವಿಸಿದ ಆಸ್ತಿ ಮತ್ತು ಭಾವನಾತ್ಮಕ ನಷ್ಟವನ್ನು ಯಾರು ಸರಿದೂಗಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಈ ನಡುವೆ ಜಾಮಿಯಾ ನಗರ ಪ್ರದೇಶದಲ್ಲಿ ಭಾನುವಾರ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆಸ್ತಿಪಾಸ್ತಿ ಮತ್ತು ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಎರಡು ಎಫ್‌ಐಆರ್ ದಾಖಲಿಸಿದ್ದಾರೆ. ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read