ವಕ್ಫ್ (ತಿದ್ದುಪಡಿ) ಕಾಯ್ದೆ, 2025ರ ಸಾಂವಿಧಾನಿಕತೆಯನ್ನು ಪ್ರಶ್ನಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆಗೆ ನಡೆಸಲಿದೆ.
ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠವು ಮಧ್ಯಾಹ್ನ 2 ಗಂಟೆಗೆ ಅರ್ಜಿಗಳನ್ನು ವಿಚಾರಣೆ ಪ್ರಾರಂಭಿಸಲಿದೆ. ಎಪ್ಪತ್ತಕ್ಕೂ ಹೆಚ್ಚು ಅರ್ಜಿಗಳನ್ನು ಪೀಠದ ಮುಂದೆ ಪಟ್ಟಿ ಮಾಡಲಾಗಿದೆ.
ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ಸಂಸದ ಎಂ.ಡಿ ಜಾವೇದ್, ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಜಮಿಯತ್ ಉಲೇಮಾ-ಇ-ಹಿಂದ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ವೈಎಸ್‌ಆರ್‌ಸಿ ಪಕ್ಷ, ಸಮಸ್ತ ಕೇರಳ ಜಮಿಯತುಲ್ ಉಲೇಮಾ, ದೆಹಲಿ ಶಾಸಕ ಅಮಾನತುಲ್ಲಾ ಖಾನ್, ಎಸ್‌ಪಿ ಸಂಸದ ಜಿಯಾ ಉರ್ ರೆಹಮಾನ್, ಬೆಂಗಳೂರಿನ ಜಾಮಾ ಮಸೀದಿಯ ಇಮಾಮ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಟಿವಿಕೆ ಅಧ್ಯಕ್ಷ ಮತ್ತು ತಮಿಳು ನಟ ವಿಜಯ್, ನಾಗರಿಕ ಹಕ್ಕುಗಳ ರಕ್ಷಣಾ ಸಂಘ ಮುಂತಾದವರು ಅರ್ಜಿದಾರರಲ್ಲಿ ಸೇರಿದ್ದಾರೆ.
ರಾಜಸ್ಥಾನ, ಗುಜರಾತ್, ಹರಿಯಾಣ, ಮಹಾರಾಷ್ಟ್ರ, ಅಸ್ಸಾಂ, ಉತ್ತರಾಖಂಡ ಮತ್ತು ಛತ್ತೀಸ್‌ಗಢ ರಾಜ್ಯಗಳು ಕಾಯ್ದೆಯನ್ನು ಬೆಂಬಲಿಸಿ ಮಧ್ಯಂತರ ಅರ್ಜಿಗಳನ್ನು ಸಲ್ಲಿಸಿವೆ. ಕೇಂದ್ರ ಸರ್ಕಾರವೂ ಕೇವಿಯಟ್ ಸಲ್ಲಿಸಿಕೆ ಮಾಡಿದೆ.
ಲಕ್ಷದ್ವೀಪದ ಸಂಸದ ಮೊಹಮ್ಮದ್ ಹಮ್ದುಲ್ಲಾ ಸಯೀದ್ ಕೂಡ ವಕ್ಫ್ (ತಿದ್ದುಪಡಿ) ಕಾಯ್ದೆ,2025ರ ವಿರುದ್ದ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಸಯೀದ್ ಅವರು ಕಾಯ್ದೆಯ ಸೆಕ್ಷನ್ 3ಇ ನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದಾರೆ.
ಈ ನಿಬಂಧನೆಯು ಸಂವಿಧಾನದ ಐದನೇ ಮತ್ತು ಆರನೇ ಶೆಡ್ಯೂಲ್‌ಗಳ ಅಡಿಯಲ್ಲಿ ಬರುವ ಬುಡಕಟ್ಟು ಪ್ರದೇಶಗಳಲ್ಲಿನ ಆಸ್ತಿಗಳ ಮೇಲೆ ವಕ್ಫ್ ರಚನೆಯನ್ನು ನಿಷೇಧಿಸುತ್ತದೆ. ಈ ನಿಬಂಧನೆಯು ಸಂವಿಧಾನದ 14, 25, 26 ಮತ್ತು 300ಎ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.
‘ಉರ್ದು ಭಾರತಕ್ಕೆ ಅನ್ಯವಲ್ಲ’ | ಮಹಾರಾಷ್ಟ್ರ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆ ಎತ್ತಿಹಿಡಿದ ಸುಪ್ರೀಂಕೋರ್ಟ್


