Homeಕರ್ನಾಟಕವಕ್ಫ್‌ ತಿದ್ದುಪಡಿ ವಿರುದ್ಧ ಶಾಹೀನ್ ಬಾಗ್, ರೈತ ಹೋರಾಟದ ಮಾದರಿಯ ಚಳವಳಿ ಕಟ್ಟಬೇಕು - ಶಿವಸುಂದರ್

ವಕ್ಫ್‌ ತಿದ್ದುಪಡಿ ವಿರುದ್ಧ ಶಾಹೀನ್ ಬಾಗ್, ರೈತ ಹೋರಾಟದ ಮಾದರಿಯ ಚಳವಳಿ ಕಟ್ಟಬೇಕು – ಶಿವಸುಂದರ್

- Advertisement -
- Advertisement -

ಹೋರಾಟದ ಕಾರಣಕ್ಕೆ, ಬಿಜೆಪಿ ಆಡಳಿತ ನಡೆಸುವ ರಾಜ್ಯಗಳು ಸೇರಿದಂತೆ ದೇಶದ ಹಲವು ರಾಜ್ಯಗಳು ಈಗಲೂ ಸಿಎಎ ಕಾಯ್ದೆಯನ್ನು ಜಾರಿ ಮಾಡಿಲ್ಲ, ಆದ್ದರಿಂದ ಸಿಎಎ ವಿರೋಧಿ ಶಾಹೀನ್ ಬಾಗ್ ಮತ್ತು ರೈತರ ಹೋರಾಟದ ಮಾದರಿಯಲ್ಲಿ ವಕ್ಫ್‌ ತಿದ್ದುಪಡಿ ವಿರೋಧಿ ಹೋರಾಟ ಕಟ್ಟಬೇಕು ಎಂದು ಚಿಂತಕ ಶಿವಸುಂದರ್ ಅವರು ಹೇಳಿದರು. ಕರ್ನಾಟಕ ಮುಸ್ಲಿಂ ಮತ್ತು ಬ್ಯಾರಿ ಸಂಘಟನೆಗಳ ಒಕ್ಕೂಟಗಳ ಅಡಿಯಲ್ಲಿ ಕೇಂದ್ರ ಸರ್ಕಾರದ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡುತ್ತಿದ್ದರು. ವಕ್ಫ್‌ ತಿದ್ದುಪಡಿ ವಿರುದ್ಧ

ಕೇಂದ್ರ ಸರ್ಕಾರ ಮಾಡುತ್ತಿರುವ ವಕ್ಫ್ ತಿದ್ದುಪಡಿ ವಿರುದ್ಧ ಹೋರಾಟ ಕಟ್ಟಬೇಕಿದೆ ನಿಜವಾದರೂ, ಅದಕ್ಕೂ ಮೊದಲು ನಾವು ವಕ್ಫ್ ಬಗ್ಗೆ ತಿಳಿದು, ಹೋರಾಟದಲ್ಲಿ ಮುಸ್ಲಿಮೇತರರನ್ನು ಇದರಲ್ಲಿ ಒಳಗೊಳ್ಳಿಸಬೇಕು ಎಂದು ಅವರು ಹೇಳಿದರು. “ಬಿಜೆಪಿ ಮುಸ್ಲಿಮರ ಬಗ್ಗೆ ಅನುಮಾನಗಳನ್ನು ಹುಟ್ಟು ಹಾಕುವ ಮೂಲಕ ಅಪಪ್ರಚಾರ ಮಾಡುತ್ತಿದೆ. ಈ ಹಿಂದಿನಿಂದಲೂ ಮುಸ್ಲಿಮರು ಎಂದರೆ ಹೊರಗಿನವರು ಮತ್ತು ದಾಳಿಕೋರರು ಎಂಬಂತೆ ಬಿಂಬಿಸಿದ್ದರು. ಈಗ ವಕ್ಫ್ ಮೂಲಕ ಅದನ್ನು ಮುಂದುವರೆಸುತ್ತಾ ಇದ್ದಾರೆ” ಎಂದು ಶಿವಸುಂದರ್ ಹೇಳಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಮಾರ್ಚ್ 10ಕ್ಕೆ ಸಂಸತ್ತಿನಲ್ಲಿ ಜೆಪಿಸಿ ಕೊಟ್ಟ ವರದಿಯನ್ನು ಮಂಡಿಸಲು ಸರ್ಕಾರ ಪ್ರಯತ್ನಿಸುತ್ತಾ ಇದೆ. ಯಾಕೆಂದರೆ ಮುಸ್ಲಿಮರು ಆಗ ರಂಜಾನ್ ಉಪವಾಸ ಆಚರಣೆ ಮಾಡುವುದರಿಂದ ಪ್ರತಿಭಟನೆ ಕಡಿಮೆ ಇರಬಹುದು ಎಂಬುದು ಅವರ ಲೆಕ್ಕಾಚಾರ. ಆದರೆ ನಾವು ಅವರ ಲೆಕ್ಕಾಚಾರವನ್ನು ತಲೆಕೆಳಗು ಮಾಡಬೇಕು.‌ ವಕ್ಫ್ ತಿದ್ದುಪಡಿ ಮಾಡುವುದು ಮುಸ್ಲಿಮರಿಗೆ ಮಾತ್ರ ಮಾಡುತ್ತಿರುವ ಅನ್ಯಾಯ ಮಾತ್ರವಲ್ಲ, ಜೊತೆಗೆ ಮುಸ್ಲಿಮರ ಮೂಲಕ ಅಲ್ಪಸಂಖ್ಯಾತರ ವಿರುದ್ಧದ ದಬ್ಬಾಳಿಕೆಯ ಪ್ರಾರಂಭ ಇದಾಗಿದೆ” ಎಂದು ಅವರು ಪ್ರತಿಪಾದಿಸಿದರು.

“ವಕ್ಫ್‌ ಎಂದರೆ, ಭಗವಂತನ ಒಡೆತನದಲ್ಲಿ ಸಮುದಾಯದ ಸೇವೆಗೆ ತಮ್ಮ ಆಸ್ತಿಯನ್ನು ಬಿಟ್ಟು ಕೊಡುವುದಾಗಿದೆ. ಇಂತಹ ಉದಾತ್ತ ಮೌಲ್ಯಗಳನ್ನು ಸಾವಿರ ವರ್ಷಗಳಿಂದ ಮುಸ್ಲಿಮರು ಆಚರಿಸುತ್ತಲೇ ಬಂದಿದ್ದಾರೆ. ಭಾರತದಲ್ಲಿ ಮುಸ್ಲಿಮೇತರ ರಾಜರು, ಶ್ರೀಮಂತರು ಕೂಡಾ ವಕ್ಫ್ ಆಸ್ತಿಗಳನ್ನು ಬಿಟ್ಟುಕೊಟ್ಟಿದ್ದಾರೆ. ಅಲ್ಲದೆ, ಧರ್ಮದ ಹೆಸರಿನಲ್ಲ ದಾನ ದತ್ತಿಗಳು ಹಿಂದಿನಿಂದಲೂ ನಡೆದುಕೊಂಡೆ ಬಂದಿದೆ. ಆದ್ದರಿಂದ, ವಕ್ಫ್ ವಕ್ಫ್ ತಿದ್ದುಪಡಿ ವಿವಾದವು ಕೇವಲ ಮುಸ್ಲಿಮರ ಮಾತ್ರ ಸಮಸ್ಯೆ ಅಲ್ಲ. ಅದು ಎಲ್ಲರ ಸಮಸ್ಯೆ” ಎಂದು ಅವರು ಹೇಳಿದರು.

“ಈ ದತ್ತಿಯನ್ನು ಅವರು ಬಿಟ್ಟು ಕೊಟ್ಟ ಉದ್ದೇಶಗಳಿಗಾಗಿ ವಿನಿಯೋಗಿಸಲಾಗುತ್ತದೆಯೆ ಎಂದು ಪರಿಶೀಲಿಸಲು ವಕ್ಫ್ ಬೋರ್ಡ್ ಅನ್ನು ಬ್ರಿಟಿಷರು ರೂಪಿಸಿದರು. ಸಮುದಾಯದ ಸೇವೆಗಾಗಿ ವಕ್ಫ್ ಕೊಡಲು, ಅದನ್ನು ನಿರ್ವಹಿಸಲು ನಮಗೆ ಸಂವಿಧಾನ ಹಕ್ಕು ಕೊಟ್ಟಿದೆ. ಆದರೆ ವಕ್ಫ್ ಆಸ್ತಿ ರಕ್ಷಣೆ ಮಾಡುತ್ತೇವೆ ಎಂದು ಬಿಜೆಪಿ ವಕ್ಫ್ ಬೋರ್ಡ್‌ ವಿಚಾರವನ್ನು ಕೋಮುವಾದಿಕರಣ ಮಾಡುದ ಉದ್ದೇಶದಿಂದ ಅದಕ್ಕೆ ತಿದ್ದುಪಡಿ ಮಾಡುತ್ತಿದೆ” ಎಂದರು.

“ವಕ್ಫ್ ಕಾಯ್ದೆಗೆ 2013ರ ವರೆಗೆ ಬಂದ ಎಲ್ಲಾ ತಿದ್ದುಪಡಿಗಳು ವಕ್ಫ್ ಆಸ್ತಿಗಳನ್ನು ಉಳಿಸಲು, ಅದನ್ನು ಸರಿಯಾಗಿ ನಡೆಸಿಕೊಳ್ಳಲು ಅಥವಾ ಅದರಲ್ಲಿನ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಮಾಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಮಾತ್ರ ವಕ್ಫ್ ಉಳಿಸುತ್ತೇವೆ ಎಂದು ನಾಶ ಮಾಡಲು ಹೊರಟಿದೆ. ಸಿಎಎ ಹೋರಾಟದ ಕಾರಣಕ್ಕೆ ಹಲವಾರು ರಾಜ್ಯಗಳು  ಸಿಎಎ ಜಾರಿ ಮಾಡಿಲ್ಲ. ಅದರಂತೆ ಸಿಎಎ ವಿರೋಧಿ ಶಹೀನ್ ಭಾಗ್ ಮತ್ತು ರೈತರ ಹೋರಾಟದ ಮಾದರಿಯಲ್ಲಿ ಹೋರಾಟ ಕಟ್ಟಬೇಕು” ಎಂದು ಶಿವಸುಂದರ್ ಅವರು ಹೇಳಿದರು.

ಸಾಮಾಜಿಕ ಹೋರಾಟಗಾರ್ತಿ ಅಖಿಲಾ ವಿದ್ಯಾಸಂದ್ರ ಮಾತನಾಡಿ, “ವಕ್ಫ್ ಬೋರ್ಡ್‌ನಲ್ಲಿ ಚುನಾವಣೆ ಬೇಡ ಎಂದು ಕೇಂದ್ರ ಸರ್ಕಾರ ಹೇಳುತ್ತಾ ಇದೆ. ಮುಸ್ಲಿಮೇತರರನ್ನು ವಕ್ಫ್ ಬೋರ್ಡ್‌ನಲ್ಲಿ ಸೇರಿಸುವುದು ಸರಿಯಲ್ಲ. ವಕ್ಫ್‌ನಲ್ಲಿ ಈಗ ಎಂತಹ ಮುಸ್ಲಿಮೇತರ ಸದಸ್ಯರನ್ನು ತರುತ್ತಿದೆ ಎಂಬ ವಿಚಾರವಿದೆ. ವಕ್ಫ್ ಆಸ್ತಿ ಕಬಳಿಸಿದವರಿಗೆ ನೀಡುವ ಶಿಕ್ಷೆಯನ್ನು ಇಳಿಸಲಾಗಿದೆ. ಹಾಗಾದರೆ ಈ ಕಾಯ್ದೆ ವಕ್ಫ್ ಆಸ್ತಿಗಳನ್ನು ಉಳಿಸಲೆ ಅಥವಾ ನಾಶ ಮಾಡಲೆ” ಎಂದು ಅವರು ಕೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...