Homeಮುಖಪುಟವಕ್ಫ್ ಮಸೂದೆ ಪರಿಶೀಲನೆಗೆ 31 ಸದಸ್ಯರ ಜಂಟಿ ಸದನ ಸಮಿತಿ ರಚನೆ : ಓವೈಸಿ, ತೇಜಸ್ವಿ...

ವಕ್ಫ್ ಮಸೂದೆ ಪರಿಶೀಲನೆಗೆ 31 ಸದಸ್ಯರ ಜಂಟಿ ಸದನ ಸಮಿತಿ ರಚನೆ : ಓವೈಸಿ, ತೇಜಸ್ವಿ ಸೂರ್ಯ, ವೀರೇಂದ್ರ ಹೆಗ್ಗಡೆಗೆ ಸ್ಥಾನ

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆಯ ಪರಿಶೀಲನೆಗೆ ಶುಕ್ರವಾರ ಕೇಂದ್ರ ಸರ್ಕಾರ 31 ಸದಸ್ಯರ ಜಂಟಿ ಸದನ ಸಮಿತಿ (ಜೆಪಿಸಿ) ರಚಿಸಿದೆ. ಜೆಪಿಸಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡುವ ಪ್ರಸ್ತಾವನೆಯನ್ನು ಉಭಯ ಸದನಗಳು ಅಂಗೀಕರಿಸಿವೆ.

ಅಸ್ತಿತ್ವದಲ್ಲಿರುವ 1995ರ ವಕ್ಫ್ ಕಾಯ್ದೆಗೆ ಸುಮಾರು 40 ತಿದ್ದುಪಡಿಗಳನ್ನು ತಿದ್ದುಪಡಿ ಮಸೂದೆ ಪ್ರಸ್ತಾಪಿಸಿದ್ದು, ಅವುಗಳ ಬಗ್ಗೆ ಸದನ ಸಮಿತಿ ಪರಿಶೀಲನೆ ನಡೆಸಲಿದೆ.

ಸಂಸತ್ತಿನ ಮುಂದಿನ ಅಧಿವೇಶನದ ಮೊದಲ ವಾರದ ಕೊನೆಯ ದಿನದೊಳಗೆ ಜಂಟಿ ಸದನ ಸಮಿತಿಯು ತನ್ನ ವರದಿಯನ್ನು ಸಲ್ಲಿಸಲಿದೆ. ಸಮಿತಿಯ 21 ಸದಸ್ಯರನ್ನು ಲೋಕಸಭೆಯಿಂದ ಮತ್ತು ಉಳಿದವರು ರಾಜ್ಯಸಭೆಯಿಂದ ಆಯ್ಕೆ ಮಾಡಲಾಗಿದೆ.

ಲೋಕಸಭೆಯ ಸಂಸದರಾದ ಜಗದಾಂಬಿಕಾ ಪಾಲ್, ಡಾ ನಿಶಿಕಾಂತ್ ದುಬೆ, ತೇಜಸ್ವಿ ಸೂರ್ಯ, ಅಪರಾಜಿತಾ ಸಾರಂಗಿ, ಡಾ ಸಂಜಯ್ ಜೈಸ್ವಾಲ್, ದಿಲೀಪ್ ಸೈಕಿಯಾ, ಅಭಿಜಿತ್ ಗಂಗೋಪಾದಾಯ, ಡಿ ಕೆ ಅರುಣಾ, ಗೌರವ್ ಗೊಗೊಯ್, ಇಮ್ರಾನ್ ಮಸೂದ್, ಡಾ ಮೊಹಮ್ಮದ್ ಜಾವೇದ್, ಮೊಹಿಬ್ಬುಲ್ಲಾ, ಕಲ್ಯಾಣ್ ಬ್ಯಾನರ್ಜಿ, ಎ ರಾಜಾ, ಲಾವು ಶ್ರೀಕೃಷ್ಣ ದೇವರಾಯಲು, ದಿಲೇಶ್ವರ ಕಮೈತ್, ಅರವಿಂದ್ ಸಾವಂತ್, ಮಹ್ತ್ರೆ ಬಲ್ಯ ಮಾಮ ಸುರೇಶ್ ಗೋಪಿನಾಥ್, ನರೇಶ್ ಗಣಪತ್ ಮ್ಹಾಸ್ಕೆ, ಅರುಣ್ ಭಾರತಿ ಮತ್ತು ಅಸಾದುದ್ದೀನ್ ಓವೈಸಿ ಸಮಿಯಲ್ಲಿ ಇದ್ದಾರೆ.

ರಾಜ್ಯಸಭೆಯಿಂದ ಬ್ರಿಜ್ ಲಾಲ್, ಮೇಧಾ ವಿಶ್ರಮ್ ಕುಲಕರ್ಣಿ, ಗುಲಾಮ್ ಅಲಿ, ರಾಧಾ ಮೋಹನ್ ದಾಸ್ ಅಗರವಾಲ್ (ಎಲ್ಲರೂ ಬಿಜೆಪಿ) ಸೈಯದ್ ನಾಸೀರ್ ಹುಸೇನ್ (ಕಾಂಗ್ರೆಸ್), ಮೊಹಮ್ಮದ್ ನದಿಮುಲ್ ಹಕ್ (ಟಿಎಂಸಿ), ವಿ ವಿಜಯಸಾಯಿ ರೆಡ್ಡಿ (ವೈಎಸ್‌ಆರ್‌ಸಿಪಿ) , ಎಂ ಮೊಹಮ್ಮದ್ ಅಬ್ದುಲ್ಲಾ (ಡಿಎಂಕೆ), ಸಂಜಯ್ ಸಿಂಗ್ (ಎಎಪಿ) ಮತ್ತು ನಾಮನಿರ್ದೇಶಿತ ಸದಸ್ಯರಾದ ಧರ್ಮಸ್ಥಳದ ಡಾ. ವಿರೇಂದ್ರ ಹೆಗ್ಗಡೆ ಸಮಿತಿಯ ಸದ್ಯಸರಾಗಿದ್ದಾರೆ.

ಗುರುವಾರ ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಲಾಗಿದ್ದು, ತೀವ್ರ ಚರ್ಚೆಯ ನಂತರ ಜಂಟಿ ಸದನ ಸಮಿತಿಗೆ ಕಳುಹಿಸಲಾಗಿದೆ. ಪ್ರಸ್ತಾವಿತ ಕಾನೂನು ಮಸೀದಿಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶವನ್ನು ಹೊಂದಿಲ್ಲ ಎಂದು ಸರ್ಕಾರ ಪ್ರತಿಪಾದಿಸಿದೆ.

ಮುಸ್ಲಿಮರನ್ನು ಗುರಿಯಾಗಿಸಿ ಮಸೂದೆಯನ್ನು ರೂಪಿಸಲಾಗಿದೆ. ಇದು ಸಂವಿಧಾನದ ಮೇಲಿನ ದಾಳಿಯಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಇದನ್ನೂ ಓದಿ : ಪಠ್ಯ ಪುಸ್ತಕದಿಂದ ‘ಸಂವಿಧಾನದ ಪ್ರಸ್ತಾವನೆ’ ಕೈಬಿಟ್ಟ ವಿಚಾರ: ಧರ್ಮೇಂದ್ರ ಪ್ರಧಾನ್ ವಿರುದ್ದ ಹಕ್ಕುಚ್ಯುತಿ ನೋಟಿಸ್ ನೀಡಿದ ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಮೋದಿ, ಅಮಿತ್ ಶಾ ರಾಜೀನಾಮೆಗೆ ಖರ್ಗೆ ಒತ್ತಾಯ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ದ ಜಾರಿ ನಿರ್ದೇನಾಲಯ (ಇಡಿ) ದಾಖಲಿಸಿದ್ದ ಹಣ ಅಕ್ರಮ ವರ್ಗಾವಣೆ (ಪಿಎಂಎಲ್‌ಎ) ದೂರು ಸ್ವೀಕರಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿರುವುದನ್ನು ಕಾಂಗ್ರೆಸ್‌ ಸ್ವಾಗತಿಸಿದೆ. ಬಿಜೆಪಿ...

ಹಿಜಾಬ್ ಎಳೆದ ನಿತೀಶ್ ಕುಮಾರ್: ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ ವೈದ್ಯೆ?

ಆಯುಷ್ ವೈದ್ಯೆ ನುಸ್ರತ್ ಪರ್ವೀನ್ ಇತ್ತೀಚೆಗೆ ತಮ್ಮ ನೇಮಕಾತಿ ಪತ್ರವನ್ನು ಪಡೆದಿದ್ದರೂ ಬಿಹಾರ ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪಾಟ್ನಾದಲ್ಲಿ ನಡೆದ ಸಕಾfರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ...

ಮಹಿಳೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನ ವಕೀಲರಿಂದ ದೂರು

ಬೆಂಗಳೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳೆಯೊಬ್ಬರ ಹಿಜಾಬ್ ಅನ್ನು ಹಿಡಿದ ಎಳೆದ ವಿಚಾರಕ್ಕೆ ಸಂಬಂಧ ಪಟ್ಟಂತೆ ಅವರ ವಿರುದ್ಧ ಬೆಂಗಳೂರು ಮೂಲದ ವಕೀಲರೊಬ್ಬರು ಮಂಗಳವಾರ ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್...